‘ಕೇರಳದ ಶಿಶು ಮರಣ ಪ್ರಮಾಣ ಅಮೆರಿಕಕ್ಕಿಂತ ಕಡಿಮೆ’

Date:

ಕೇರಳದ ಶಿಶು ಮರಣ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದ್ದು, ಅಮೆರಿಕಕ್ಕಿಂತ ಕಡಿಮೆ ಪ್ರಮಾಣದಲ್ಲಿ ಶಿಶುಗಳ ಸಾವುಗಳ ವರದಿಯಾಗುತ್ತಿವೆ. ಕೇರಳದಲ್ಲಿ ಪ್ರತಿ 1,000 ಜೀವಂತ ಜನನಗಳಲ್ಲಿ 5 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂದು ‘ಮಾದರಿ ನೋಂದಣಿ ವ್ಯವಸ್ಥೆ’ (SRS) ಅಂಕಿಅಂಶಗಳ ವರದಿ-2023 ತಿಳಿಸಿದೆ.

- Advertisement -

ಸೆಪ್ಟೆಂಬರ್ 1 (ಸೋಮವಾರ) ಬಿಡುಗಡೆಯಾದ ರಾಷ್ಟ್ರೀಯ ಶಿಶು ಮರಣ ದರ ವರದಿಯು, ದೇಶದಲ್ಲಿ ಶಿಶುಗಳ ಮರಣ ಪ್ರಮಾಣವು 25 ಇದೆ. ಅಂದರೆ, ಜನಿಸುವ ಪ್ರತಿ 1,000 ಜೀವಂತ ಶುಶುಗಳಲ್ಲಿ 25 ಮಗುಗಳು ಸಾವನ್ನಪ್ಪುತ್ತಿವೆ ಎಂದು ಹೇಳಿದೆ. ಈ ಸರಾಸರಿಗೆ ಹೋಲಿಸಿದರೆ, ಕೇರಳದಲ್ಲಿ ಶಿಶು ಮರಣ ಪ್ರಮಾಣವು ಐದು ಪಟ್ಟು ಕಡಿಮೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವರದಿಯನ್ನು ಉಲ್ಲೇಖಿಸಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, “ಕೇರಳದ ಶಿಶು ಮರಣ ಪ್ರಮಾಣವು ದೇಶದಲ್ಲೇ ಅತ್ಯಂತ ಕಡಿಮೆ. ಮಾತ್ರವಲ್ಲ, ಅಮೆರಿಕಕ್ಕಿಂತಲೂ ಕಡಿಮೆಯಾಗಿದೆ. ಕೇರಳದಲ್ಲಿನ ಶಿಶು ಮರಣ ಪ್ರಮಾಣವು 2022ರಲ್ಲಿ 1000ಕ್ಕೆ 5.6 ಇತ್ತು. ಈಗ, 5ಕ್ಕೆ ಇಳಿದಿದೆ” ಎಂದಿದ್ದಾರೆ.

“ದೇಶದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವಿನ ಶಿಶು ಮರಣ ಪ್ರಮಾಣದಲ್ಲಿ ಭಾರೀ ಅಂತರವಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಮಾಣ 28 ಆಗಿದ್ದರೆ, ನಗರ ಪ್ರದೇಶಗಳಲ್ಲಿ 19 ರಷ್ಟಿದೆ. ಆದರೆ, ಕೇರಳದಲ್ಲಿ, ಶಿಶು ಮರಣ ಪ್ರಮಾಣದಲ್ಲಿ ನಗರ-ಗ್ರಾಮೀಣ ವ್ಯತ್ಯಾಸವಿಲ್ಲ. ಇದು ಕೇರಳದ ಜನರು ಯಾವುದೇ ನಗರ-ಗ್ರಾಮೀಣ ಅಂತರವಿಲ್ಲದೆ ಆರೋಗ್ಯ ಸೇವೆಗಳನ್ನು ಪಡೆಯಬಹುದು ಎಂಬುದನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

ರಾಜ್ಯ ಆರ್ಥಿಕ ಮತ್ತು ಅಂಕಿಅಂಶ ಇಲಾಖೆಯ ಪ್ರಕಾರ, ಕೇರಳದ ಶಿಶು ಮರಣ ಪ್ರಮಾಣ 2010ರಲ್ಲಿ 7.42 ರಷ್ಟಿತ್ತು. 2012 ರಲ್ಲಿ ಈ ಅಂಕಿ ಅಂಶವು 8.2ಕ್ಕೆ ಏರಿತ್ತು. ಅಂದಿನಿಂದ, ಆರೋಗ್ಯ ಕ್ಷೇತ್ರದಲ್ಲಿ ತೆಗೆದುಕೊಳ್ಳಲಾದ ಅಗತ್ಯ ಕ್ರಮಗಳಿಂದಾಗಿ, ಈಗ ಶಿಶು ಮರಣ ಪ್ರಮಾಣವು ಕಡಿಮೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...