ಕ್ರೈಸ್ತ ಧರ್ಮಕ್ಕೆ ದಲಿತರ ಮತಾಂತರ: ಕೇರಳದ ದಂಪತಿಗೆ 5 ವರ್ಷ ಜೈಲು ಶಿಕ್ಷೆ

Date:

ಹಿಂದೂ ಧರ್ಮಕ್ಕೆ ಸೇರಿದ ದಲಿತರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಪ್ರೇರೇಪಿಸಲು ಪ್ರಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ನ್ಯಾಯಾಲಯವು ಕೇರಳ ಮೂಲದ ದಂಪತಿಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿದೆ.

- Advertisement -

ಆಡಳಿತಾರೂಢ ಬಿಜೆಪಿ ಪದಾಧಿಕಾರಿಯ ದೂರಿನ ಮೇರೆಗೆ 2023 ರಲ್ಲಿ ಕೇರಳ ಮೂಲದ ದಂಪತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅಂಬೇಡ್ಕರ್ ನಗರದ ವಿಶೇಷ ನ್ಯಾಯಾಲಯವು ದಂಪತಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಿಜೆಪಿ ನಾಯಕಿ ಈ ಪ್ರಕರಣದಲ್ಲಿ ದೂರುದಾರೆಯಾಗಿದ್ದು, ಅವರ ದೂರನ್ನು ಆಧರಿಸಿ ಎಫ್‌ಐಆರ್ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ಜನವರಿ 22 ರಂದು, ವಿಶೇಷ ನ್ಯಾಯಾಧೀಶರಾದ ರಾಮ್ ವಿಲಾಸ್ ಸಿಂಗ್, ಅವರು ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ, 2021 ರ ಸೆಕ್ಷನ್ 5 (1) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಅಡಿಯಲ್ಲಿ ಜೋಸ್ ಪಾಪಚೆನ್ ಮತ್ತು ಅವರ ಪತ್ನಿ ಶೀಜಾ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ 25,000 ರೂ. ದಂಡ ವಿಧಿಸಿ,ಅವರನ್ನು ತಪ್ಪಿತಸ್ಥರೆಂದು ಘೋಷಿಸಿದರು.

ಪೂರ್ವ ಯುಪಿಯ ಅಂಬೇಡ್ಕರ್ ನಗರದ ಶಹಪುರ್ ಫಿರೋಜ್ ಗ್ರಾಮದಲ್ಲಿ ಕಡು ಬಡತನದಲ್ಲಿರುವ ದಲಿತರನ್ನು ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಸಾಮೂಹಿಕವಾಗಿ ಮತಾಂತರಿಸಲು ಪ್ರಯತ್ನಿಸಿದ ಆರೋಪದ ಮೇಲೆ ನ್ಯಾಯಾಧೀಶರಾದ ರಾಮ್ ವಿಲಾಸ್ ಸಿಂಗ್ ಕೇರಳ ಮೂಲದ ದಂಪತಿಗಳನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದರು.

ದಂಪತಿಗಳು ಬೈಬಲ್‌ನಿಂದ ಪಾಠಗಳನ್ನು ಪ್ರವಚನ ಮಾಡುತ್ತಾ ಯೇಸುಕ್ರಿಸ್ತನ ಬಗ್ಗೆ ಪ್ರಚಾರ ಮಾಡುತ್ತಿದ್ದರು, ಧಾರ್ಮಿಕ ಪುಸ್ತಕಗಳನ್ನು ವಿತರಿಸುತ್ತಿದ್ದರು, ಕ್ರಿಸ್‌ಮಸ್‌ನಲ್ಲಿ ಹಬ್ಬಗಳನ್ನು ಆಯೋಜಿಸುತ್ತಿದ್ದರು ಮತ್ತು ದಲಿತರಿಗೆ ಹಣ ನೀಡಿ ಅವರನ್ನು ಮತಾಂತರವಾಗಲು, ಯೇಸುವನ್ನು ಪಾಲಿಸುವಂತೆ ಹೇಳುತ್ತಿದ್ದರು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

ವಿಶೇಷವೆಂದರೆ 16 ತಿಂಗಳ ಹಿಂದೆ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ಹೊರತಾಗಿಯೂ,ವಿಶೇಷ ನ್ಯಾಯಾಲಯವು ದಂಪತಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ.

ಸೆಪ್ಟೆಂಬರ್ 6, 2023 ರಂದು, ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರು ಕೆಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿ ಪಾಪಚೆನ್ ಮತ್ತು ಶೀಜಾ ಅವರಿಗೆ ಜಾಮೀನು ನೀಡಿದ್ದರು. ಉತ್ತಮ ಬೋಧನೆಗಳನ್ನು ಒದಗಿಸುವುದು, ಪವಿತ್ರ ಬೈಬಲ್ ಪುಸ್ತಕಗಳನ್ನು ವಿತರಿಸುವುದು, ಮಕ್ಕಳಿಗೆ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವುದು, ಗ್ರಾಮಸ್ಥರ ಸಭೆ, ಹಬ್ಬಗಳ ಆಚರಣೆ, ಗ್ರಾಮಸ್ಥರಿಗೆ ಅನ್ಯೋನ್ಯವಾಗಿರುವಂತೆ ಹೇಳುವುದು, ಮದ್ಯ ಸೇವಿಸದಂತೆ ಸೂಚಿಸುವುದು ಆಮಿಷಕ್ಕೆ ಸಮಾನವಲ್ಲ ಎಂದು ನ್ಯಾಯಮೂರ್ತಿ ಶಮೀಮ್ ಅಹ್ಮದ್ ತಮ್ಮ ತೀರ್ಪಿನಲ್ಲಿ ಹೇಳಿದ್ದರು.

ಎಫ್‌ಐಆರ್ ಅನ್ನು ದಾಖಲಿಸಿದ ವ್ಯಕ್ತಿ ಸಂತ್ರಸ್ತನಾಗಿಲ್ಲದಿರುವುದರಿಂದ, ಅದು ಸಮರ್ಥವಲ್ಲ ಎಂದು ನ್ಯಾಯಮೂರ್ತಿಗಳು ತೀರ್ಪು ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...