27 ವರ್ಷ ಹಿಂದಿನ ಸರಣಿ ಬಾಂಬ್​ ಸ್ಫೋಟದ ಪ್ರಮುಖ ಆರೋಪಿ ಕರ್ನಾಟಕದಲ್ಲಿ ಬಂಧನ

Date:

Advertisements

ತಮಿಳುನಾಡಿನ ಕೊಯಮತ್ತೂರಿನ ಸರಣಿ ಬಾಂಬ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ 27 ವರ್ಷಗಳ ನಂತರ ಕರ್ನಾಟಕದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ಪ್ರಕರಣ ನಡೆದಿದ್ದು, ಆರೋಪಿ ಸಿದ್ದಿಕಿ ರಾಜ್​​ ಕಳೆದ 27 ವರ್ಷಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ತಲೆಮರೆಸಿಕೊಂಡಿದ್ದನು.

ವಿಜಯಪುರ ನಗರದಲ್ಲಿ 12 ವರ್ಷಗಲಿಂದ ತರಕಾರಿ ಮಾರಾಟ ಮಾಡುತ್ತ ಜೀವನ ನಡೆಸುತ್ತಿದ್ದನು. ಈತನಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಆರೋಪಿ ಸಿದ್ದಿಕಿ ರಾಜ್​ ವಿಜಯಪುರದಲ್ಲಿ ಅಡಗಿರುವುದು ಗೊತ್ತಾಗಿದೆ. ಕೂಡಲೇ ವಿಜಯಪುರಕ್ಕೆ ಬಂದ ಪೊಲೀಸರು, ಆರೋಪಿ ಸಿದ್ದಿಕಿ ರಾಜ್​ನನ್ನು ಪತ್ತೆ ಮಾಡಿ, ಬಂಧಿಸಿ ಕರೆದುಕೊಂಡು ಹೋಗಿದ್ದಾರೆ.

Advertisements

ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವನಾದ ಸಿದ್ದಿಕಿ ರಾಜ್​ ​ಹುಬ್ಬಳ್ಳಿ ಮೂಲದ ಮಹಿಳೆಯೊಂದಿಗೆ ವಿವಾಹವಾಗಿದ್ದಾನೆ. ಸರಣಿ ಸ್ಫೋಟ ಬಳಿಕ ತಲೆಮರೆಸಿಕೊಂಡಿದ್ದ. ಸಿದ್ದಿಕಿ ರಾಜ್​ ಕೊಯಮತ್ತೂರು ಸರಣಿ ಬಾಂಬ್​ ಸ್ಫೋಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಬಂಧಿತ ಆರೋಪಿ ವಿರುದ್ಧ ಕೋಮು ಗಲಭೆ, ಹತ್ಯೆಗೆ ಸಂಬಂಧಿಸಿದ ಹಲವು ಪ್ರಕರಣಗಳಿವೆ.

1998ರ ಫೆಬ್ರವರಿ 14 ರಂದು ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ನಡೆದಿದ್ದವು. ಸ್ಫೋಟದಲ್ಲಿ 59 ಜನರು ಮೃತಪಟ್ಟಿದ್ದು, ಸುಮಾರು 231 ಜನರು ಗಾಯಗೊಂಡಿದ್ದರು. ಬಿಜೆಪಿಯ ಹಿರಿಯ ಮುಖಂಡ ಎಲ್​.ಕೆ. ಅಡ್ವಾಣಿ ಅವರನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎನ್ನುವ ಆರೋಪ ಸಹ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X