ಅವಿಶ್ವಾಸ ನಿರ್ಣಯ | ಖರ್ಗೆ – ಧನಕರ್ ಜಟಾಪಟಿ; ‘ನಾನು ನಿಮ್ಮನ್ನು ಹೇಗೆ ಗೌರವಿಸಲಿ?’ ಎಂದ ಖರ್ಗೆ

Date:

ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ರಾಜ್ಯಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಧನಕರ್ ನಡುವೆ ಮಾತಿನ ಸವರವೇ ನಡೆದಿದೆ. ಬಳಿಕ, ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

- Advertisement -

ವಿಶ್ವಾಸ ನಿರ್ಣಯ ಮಂಡಿಸಿದ ವಿಪಕ್ಷಗಳ ವಿರುದ್ಧ ಧನಕರ್ ಅಸಮಾಧಾನಗೊಂಡಿದ್ದು, “ನಾನೊಬ್ಬ ರೈತನ ಮಗ, ಯಾವುದೇ ಪರಿಸ್ಥಿತಿಯಲ್ಲೂ ನಾನು ದುರ್ಬಲನಾಗುವುದಿಲ್ಲ. ನಾನು ಸಾಕಷ್ಟು ಸಹಿಸಿಕೊಂಡಿದ್ದೇನೆ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, “ನೀವು ರೈತನ ಮಗ, ನಾನೂ ಕೂಡ ಕೂಲಿಕಾರನ ಮಗನೇ. ನಾನು ನಿಮಗಿಂತ ಹೆಚ್ಚು ಸವಾಲುಗಳನ್ನು ಎದುರಿಸಿದ್ದೇನೆ. ನೀವು ನಮ್ಮ ಪಕ್ಷದ ನಾಯಕರನ್ನು ನಿಂದಿಸಿದ್ದೀರಿ. ಕಾಂಗ್ರೆಸ್‌ಗೆ ಅವಮಾನ ಮಾಡಿದ್ದೀರಿ. ನಾವು ನಿಮ್ಮ ಹೊಗಳಿಕೆ ಕೇಳಲು ಅಥವಾ ಹೊಗಳಲು ಬಂದಿಲ್ಲ. ಚರ್ಚಿಸಲು ಬಂದಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪ್ರತಿಪಕ್ಷಗಳಿಗೆ ಹೋಲಿಸಿದರೆ ಆಡಳಿತ ಪಕ್ಷದ ಸಂಸದರಿಗೆ ಹೆಚ್ಚಿನ ಸಮಯವನ್ನು ಅಧ್ಯಕ್ಷರು ನೀಡುತ್ತಿದ್ದಾರೆ. ರಾಜ್ಯಸಭಾ ಅಧ್ಯಕ್ಷರು ಬಿಜೆಪಿಯ ಅಶಿಸ್ತಿಗೆ ಪ್ರಚೋದನೆ ನೀಡುತ್ತಿದ್ದಾರೆ. ಅವರು ವಿರೋಧ ಪಕ್ಷಗಳ ಸಂಸದರಿಗೆ ಮಾತನಾಡಲು ಬಿಡುತ್ತಿಲ್ಲ” ಖರ್ಗೆ ಆರೋಪಿಸಿದ್ದಾರೆ.

ಮುಂದುವರೆದು ಮಾತನಾಡಿದ ಖರ್ಗೆ, “ನೀವು ನನ್ನನ್ನು ಅವಮಾನಿಸುತ್ತಿದ್ದೀರಿ. ನಾನು ನಿಮ್ಮನ್ನು ಹೇಗೆ ಗೌರವಿಸಲಿ?” ಎಂದರು.

ಅವಿಶ್ವಾಸ ನಿರ್ಣಯದ ಕುರಿತು ಹೆಚ್ಚುತ್ತಿರುವ ಚರ್ಚೆಗಳ ನಡುವೆ ರಾಜ್ಯಸಭೆಯ ಕಲಾಪವನ್ನು ಡಿಸೆಂಬರ್ 16ಕ್ಕೆ ಮುಂದೂಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...