ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

Date:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು “ಗಾಂಭೀರ್ಯವುಳ್ಳ ವ್ಯಕ್ತಿ” (man with gravitas) ಎಂದು ಬಣ್ಣಿಸಿರುವ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, 2022ರಲ್ಲಿ ಖರ್ಗೆ ಅವರು ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಾಗ ತಮಗೆ “ಅತೀವ ನಿರಾಳವಾಯಿತು” ಎಂದು ಹೇಳಿಕೊಂಡಿದ್ದಾರೆ.

- Advertisement -

ನವೆಂಬರ್ 10 ಬಿಡುಗಡೆಯಾದ ತಮ್ಮ ಬಹುನಿರೀಕ್ಷಿತ ಆತ್ಮಕಥೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಕೃತಿಯಲ್ಲಿ ಸೋನಿಯಾ ಗಾಂಧಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ ಅನ್ನು ಮುನ್ನಡೆಸಿದ ಬಳಿಕ, 2022ರ ಅಕ್ಟೋಬರ್‌ನಲ್ಲಿ ನಡೆದ ಸಾಂಸ್ಥಿಕ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭವನ್ನು ಸೋನಿಯಾ ತಮ್ಮ ಪುಸ್ತಕದಲ್ಲಿ ಮೆಲುಕು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಇದನ್ನೂ ಓದಿ: ‘ಗಾಜಾ ವಿಷಯದಲ್ಲಿ ಮೋದಿ ಸರ್ಕಾರದ ಮೌನ ಒಪ್ಪಲು ಸಾಧ್ಯವಿಲ್ಲ’: ಸೋನಿಯಾ ಗಾಂಧಿ ವಾಗ್ದಾಳಿ

ದಶಕಗಳ ಕಾಲ ತಳಮಟ್ಟದಿಂದ ಬೆಳೆದು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಅನುಭವ, ಬದ್ಧತೆ ಮತ್ತು ಗಾಂಭೀರ್ಯವನ್ನು ಸೋನಿಯಾ ಗಾಂಧಿ ಶ್ಲಾಘಿಸಿದ್ದಾರೆ. ಕಾಂಗ್ರೆಸ್‌ಗೆ ಅತ್ಯಂತ ಸವಾಲಿನ ಸಮಯದಲ್ಲಿ ಸಮರ್ಥ ನಾಯಕತ್ವ ದೊರೆಯಿತು ಎಂಬ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ.

2019ರಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹಂಗಾಮಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಸೋನಿಯಾ ಗಾಂಧಿ, ಖರ್ಗೆ ಅವರು ಅಧಿಕಾರ ವಹಿಸಿಕೊಂಡಾಗ ತಮ್ಮ ಮೇಲಿದ್ದ ದೊಡ್ಡ ಹೊರೆ ಇಳಿದಂತಾಗಿ ಅತೀವ ನಿರಾಳತೆ ಅನುಭವಿಸಿದ್ದಾಗಿ ಬರೆದುಕೊಂಡಿದ್ದಾರೆ. 2022ರ ಅಕ್ಟೋಬರ್ 26ರಂದು ಖರ್ಗೆ ಅಧಿಕಾರ ಸ್ವೀಕರಿಸಿದ ಸಮಾರಂಭದಲ್ಲೂ ಸೋನಿಯಾ ಇದೇ ರೀತಿಯ ನಿರಾಳತೆಯ ಭಾವನೆಯನ್ನು ವ್ಯಕ್ತಪಡಿಸಿದ್ದರು.

ಈ ಹಿಂದೆಯೂ ಹಲವು ವೇದಿಕೆಗಳಲ್ಲಿ ಹಾಗೂ ‘ದಿ ಹಿಂದೂ’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲೂ ಸೋನಿಯಾ ಗಾಂಧಿ, ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತನೊಬ್ಬ ಉನ್ನತ ಹುದ್ದೆಗೆ ಏರಲು ಮಲ್ಲಿಕಾರ್ಜುನ ಖರ್ಗೆ ಅವರೇ ಅತ್ಯುತ್ತಮ ಉದಾಹರಣೆ ಎಂದು ಉಲ್ಲೇಖಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...