ನಮ್ಮನ್ನು ಪ್ರೀತಿಸಿ, ಮೋದಿಜಿಯನ್ನು ಮದುವೆಯಾದರು: ಎಚ್‌ಡಿ ದೇವೇಗೌಡರ ಕಾಲೆಳೆದ ಖರ್ಗೆ

Date:

ಕರ್ನಾಟಕದಲ್ಲಿ ಎಚ್‌ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮಾತನಾಡುತ್ತಾ, “ನಮ್ಮನ್ನು ಪ್ರೀತಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮದುವೆಯಾಗಿದ್ದಾರೆ” ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ರಾಜ್ಯಸಭೆಯನ್ನು ನಗೆಗಡಲಲ್ಲಿ ತೇಲಿಸಿತು.

- Advertisement -

ಸಂಸತ್ತಿನ ಮೇಲ್ಮನೆಯ ವಿರೋಧ ಪಕ್ಷದ ನಾಯಕ ಖರ್ಗೆ ಅವರು ಇಂದು ತಮ್ಮ ವಿದಾಯ ಭಾಷಣ ಮಾಡಿದರು. ಈ ಭಾಷಣದ ವೇಳೆ ರಾಜ್ಯಸಭೆಯಲ್ಲಿ ತಮ್ಮ ಅನುಭವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲೇ ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ವ್ಯಂಗ್ಯವಾಡುತ್ತಾ ಎಚ್‌ಡಿ ದೇವೇಗೌಡರ ಕಾಲೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆ ನನಗೆ ಹಿರಿಯ ಅಣ್ಣ, ಭೇಟಿಗೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ: ಸಚಿವ ಪರಮೇಶ್ವರ್

“ದೇವೇಗೌಡರು ಪ್ರಧಾನಿಯಾಗಿದ್ದರು ಮತ್ತು ಹಲವಾರು ಇತರ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ನಾನು ಅವರನ್ನು 54 ವರ್ಷಗಳಿಂದ ತಿಳಿದಿದ್ದೇನೆ ಮತ್ತು ಅವರೊಂದಿಗೆ ಕೆಲಸ ಮಾಡಿದ್ದೇನೆ. ಆದರೆ ಏನಾಯಿತು ಎಂದು ನನಗೆ ತಿಳಿದಿಲ್ಲ. ಅವರು ನಮ್ಮೊಂದಿಗೆ ಡೇಟಿಂಗ್ ಮಾಡಿದರು, ನಮ್ಮನ್ನು ಪ್ರೀತಿಸಿದರು, ಆದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮದುವೆಯಾದರು” ಎಂದು ವ್ಯಂಗ್ಯವಾಡಿದರು. ಖರ್ಗೆ ಹೇಳಿಕೆಗೆ ರಾಜ್ಯಸಭೆಯಲ್ಲಿ ಹಾಜರಿದ್ದ ಪ್ರಧಾನಿ ಕೂಡ ನಗುತ್ತಿರುವುದು ಕಂಡುಬಂದಿದೆ.

1996ರ ಲೋಕಸಭಾ ಚುನಾವಣೆಯ ನಂತರ ದೇವೇಗೌಡರು ಒಂದು ವರ್ಷಕ್ಕಿಂತ ಕಡಿಮೆ ಅವಧಿಗೆ ಪ್ರಧಾನಿಯಾಗಿದ್ದರು. ಈ ವೇಳೆ ಜೆಡಿಯು ಸರ್ಕಾರವನ್ನು ಕಾಂಗ್ರೆಸ್ ಬೆಂಬಲಿಸಿತ್ತು. 2018ರ ರಾಜ್ಯ ಚುನಾವಣೆಗೆ ಕರ್ನಾಟಕದಲ್ಲಿ ಎಚ್‌ಡಿ ದೇವೇಗೌಡರ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು ಮತ್ತು ಈ ಮೈತ್ರಿಕೂಟ ಗೆದ್ದಿತ್ತು. ದೇವೇಗೌಡರ ಮಗ ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ ಹಲವಾರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಂಡಾಯವೆದ್ದ ನಂತರ 2019ರಲ್ಲಿ ರಾಜ್ಯ ಸರ್ಕಾರ ಪತನಗೊಂಡಿತು. ಅದಾದ ಬಳಿಕ ಈವರೆಗೆ ಕೋಮು ವಿಭಜನೆ ವಿಚಾರದಲ್ಲಿ ಯಾವ ಪಕ್ಷವನ್ನೂ ಟೀಕಿಸುತ್ತಿತ್ತೋ ಅದೇ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...