‘ಇನ್ವೆಸ್ಟ್‌ ಕರ್ನಾಟಕ’ ಸಮಾವೇಶದಲ್ಲಿ ಖರ್ಗೆ, ರಾಹುಲ್ ಭಾಗಿಯಾಗಲ್ಲ: ಕಾಂಗ್ರೆಸ್

Date:

Advertisements

ವಿಶ್ವದಾದ್ಯಂತ ಹೂಡಿಕೆದಾರರನ್ನು ಕರ್ನಾಟಕದತ್ತ ಸೆಳೆಯುವ ಉದ್ದೇಶವನ್ನು ಹೊಂದಿರುವ ‘ಇನ್ವೆಸ್ಟ್‌ ಕರ್ನಾಟಕ’ ಇಂದಿನಿಂದ ಆರಂಭವಾಗಲಿದೆ. ಆದರೆ ಈ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಭಾಗಿಯಾಗಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ಇಬ್ಬರೂ ಭಾಗಿಯಾಗಬೇಕಾದ ಕಾರಣದಿಂದಾಗಿ ಇನ್ವೆಸ್ಟ್ ಕರ್ನಾಟಕದಲ್ಲಿ ಭಾಗಿಯಾಗಲು ಸಾಧ್ಯವಾಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಜೈರಾಮ್ ರಮೇಶ್ ಪೋಸ್ಟ್ ಮಾಡಿದ್ದಾರೆ. “ರಾಜ್ಯಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಅಧಿವೇಶನದಲ್ಲಿ ಬಜೆಟ್‌ ಚರ್ಚೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಬೆಂಗಳೂರಿನಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕದಲ್ಲಿ ಭಾಗಿಯಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಇನ್ವೆಸ್ಟ್‌ ಕರ್ನಾಟಕ 2025 | ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ

Advertisements

“ಇಬ್ಬರು ಕೂಡಾ ಶೃಂಗಸಭೆಗೆ ಶುಭಕೋರಿದ್ದಾರೆ. ಈ ಶೃಂಗಸಭೆಯು ಯಶಸ್ವಿಯಾಗುತ್ತದೆ ಎಂಬ ವಿಶ್ವಾಸವನ್ನು ಅವರು ಹೊಂದಿದ್ದಾರೆ ಎಂದು ಕೂಡಾ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಇನ್ವೆಸ್ಟ್ ಕರ್ನಾಟಕ 2025ರಲ್ಲಿ ಸಮಾವೇಶದಲ್ಲಿ ಕೇಂದ್ರ ಸಚಿವರುಗಳು ಮತ್ತು ಬಿಜೆಪಿ ನಾಯಕರಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ ಎಂಬ ಕಾರಣದಿಂದಾಗಿ ಕಾಂಗ್ರೆಸ್ ನಾಯಕರು ಅಸಮಾಧಾನ ಹೊಂದಿದ್ದಾರೆ ಎಂದು ವರದಿಗಳಾಗಿವೆ. ಇದಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಫೆಬ್ರವರಿ 12ರಿಂದ 14ರವರೆಗೆ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶವು ನಡೆಯಲಿದೆ. ‘ಪ್ರಗತಿಯ ಮರುಕಲ್ಪನೆʼ (Reimagining Growth) ಎಂಬುದು ಇದರ ಧ್ಯೇಯವಾಗಿದೆ. ಈ ಸಮಾರಂಭದಲ್ಲಿ ಸ್ಥಳೀಯ ಹೂಡಿಕೆದಾರರು ಮತ್ತು ಜಾಗತಿಕ ಹೂಡಿಕೆದಾರರು ಭಾಗಿಯಾಗಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X