ರಾಜಕೀಯ ಲಾಭಕ್ಕಾಗಿ ಚುನಾವಣೆಗಳ ಮಧ್ಯೆ ಮಹಿಳಾ ಮೀಸಲಾತಿ ಚರ್ಚೆ: ಸರ್ವಪಕ್ಷ ಸಭೆಗೆ ಆಗ್ರಹಿಸಿದ ಖರ್ಗೆ

Date:

ವಿಧಾನಸಭೆ ಚುನಾವಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದಾಗಿಯೇ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಕಾನೂನು ತ್ವರಿತವಾಗಿ ಜಾರಿಗೆ ಮುಂದಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ. ಹಾಗೆಯೇ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಏಪ್ರಿಲ್ 11ರಂದು ಪತ್ರ ಬರೆದಿರುವ ಖರ್ಗೆ 2023ರ ನಾರಿ ಶಕ್ತಿ ವಂದನ ಅಧಿನಿಯಮದ ಕುರಿತು ಚರ್ಚಿಸಲು ಏಪ್ರಿಲ್ 16ರಿಂದ ನಡೆಯಲಿರುವ ವಿಶೇಷ ಅಧಿವೇಶನದ ಕುರಿತು ಪ್ರಧಾನಿ ಜತೆ ಮಾತುಕತೆ ನಡೆಸಬೇಕಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಸರ್ವಪಕ್ಷ ಸಭೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನು ಓದಿದ್ದೀರಾ? ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ತರಾತುರಿ | ಕ್ಷೇತ್ರಗಳ ಮರುವಿಂಗಡನೆ ಸಂದರ್ಭದಲ್ಲೇ ಜಾರಿ?

Advertisements

“2023ರ ಸೆಪ್ಟೆಂಬರ್‌ನಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಕಾಂಗ್ರೆಸ್ ಆಗಲೇ ಕಾನೂನು ಜಾರಿಗೆ ಒತ್ತಡ ಹೇರಿತ್ತು. ಆದರೆ ಕೇಂದ್ರ ಸರ್ಕಾರವೇ ವಿಳಂಬ ಮಾಡಿದೆ. ಅಂದಿನಿಂದ 30 ತಿಂಗಳುಗಳು ಕಳೆದಿವೆ. ಈಗ ಈ ವಿಶೇಷ ಸಭೆಯನ್ನು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕರೆಯಲಾಗಿದೆ” ಎಂದು ದೂರಿದರು.

“ನಿಮ್ಮ ಸರ್ಕಾರವು ಮಾಡಲಿರುವ ಕ್ಷೇತ್ರ ಮರುವಿಂಗಡಣೆ ಕುರಿತು ಯಾವುದೇ ವಿವರಗಳನ್ನು ಬಹಿರಂಗಪಡಿಸದೆ ಮತ್ತೆ ನಮ್ಮ ಸಹಕಾರವನ್ನು ಬಯಸುತ್ತಿದೆ. ಕ್ಷೇತ್ರ ಮರುವಿಂಗಡಣೆ ಮತ್ತು ಇತರ ಅಂಶಗಳ ವಿವರಗಳಿಲ್ಲದೆ, ಈ ಐತಿಹಾಸಿಕ ಕಾನೂನಿನ ಕುರಿತು ಯಾವುದೇ ಉಪಯುಕ್ತ ಚರ್ಚೆಯನ್ನು ನಡೆಸುವುದು ಅಸಾಧ್ಯವೆಂದು ನೀವು ಅಭಿಪ್ರಾಯಿಸಿದ್ದೀರಿ” ಎಂದೂ ಖರ್ಗೆ ಪತ್ರದಲ್ಲಿ ಬರೆದಿದ್ದಾರೆ.

“ನಿಮ್ಮ ಸರ್ಕಾರವು ಈ ಬಗ್ಗೆ ರಾಜಕೀಯ ಪಕ್ಷಗಳೊಂದಿಗೆ ಸಂವಾದದಲ್ಲಿ ತೊಡಗಿದೆ ಎಂದು ನೀವು ನಿಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದೀರಿ. ಆದರೆ ಪ್ರಿಲ್ 29ರಂದು ಪ್ರಸ್ತುತ ಸುತ್ತಿನ ಚುನಾವಣೆ ಮುಗಿದ ನಂತರ, ಸಂವಿಧಾನ ತಿದ್ದುಪಡಿಗಳ ಕುರಿತು ಚರ್ಚಿಸಲು ಎಲ್ಲ ವಿರೋಧ ಪಕ್ಷಗಳು ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದೆ. ಆದ್ದರಿಂದ ನಿಮ್ಮ ವಾದ ಸತ್ಯಕ್ಕೆ ವಿರುದ್ಧವಾಗಿದೆ” ಎಂದೂ ಹೇಳಿದರು.

ಅಧಿವೇಶನದ ಸಮಯವು ಕಳವಳವನ್ನು ಹುಟ್ಟುಹಾಕಿದೆ ಎಂದು ಖರ್ಗೆ ವಾದಿಸಿದ್ದಾರೆ. “ನಡೆಯುತ್ತಿರುವ ರಾಜ್ಯ ಚುನಾವಣೆಗಳ ಸಮಯದಲ್ಲಿ ವಿಶೇಷ ಸಭೆ ಕರೆಯುವುದು ಸರ್ಕಾರವು ಮಹಿಳೆಯರನ್ನು ನಿಜವಾಗಿಯೂ ಸಬಲೀಕರಣಗೊಳಿಸುವ ಬದಲು ‘ರಾಜಕೀಯ ಲಾಭ’ ಪಡೆಯಲು ಕಾನೂನಿನ ಅನುಷ್ಠಾನಕ್ಕೆ ಆತುರಪಡುತ್ತಿದೆ ಎಂಬ ಕಾಂಗ್ರೆಸ್‌ನ ನಂಬಿಕೆಯನ್ನು ಬಲಪಡಿಸಿದೆ” ಎಂದರು.

ಇದನ್ನು ಓದಿದ್ದೀರಾ? ಮಹಿಳಾ ಮೀಸಲಾತಿ: ಚುನಾವಣಾ ತಂತ್ರವಾಗಿಸಿಕೊಂಡಿತೇ ಮೋದಿ ಸರ್ಕಾರ?

“ನೋಟು ರದ್ದತಿ, ಜಿಎಸ್‌ಟಿ, ಜನಗಣತಿ ಅಥವಾ ಹಣಕಾಸು ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದು ಮತ್ತು ತೆರಿಗೆ ವಿಕೇಂದ್ರೀಕರಣದಂತಹ ಫೆಡರಲ್ ರಚನೆಗೆ ಸಂಬಂಧಿಸಿದ ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಸರ್ಕಾರದ ಹಿಂದಿನ ದಾಖಲೆಯು ಯಾವುದೇ ವಿಶ್ವಾಸವನ್ನು ಮೂಡಿಸುವಂತದ್ದು ಅಲ್ಲ ಎಂದು ಬರೆಯುವುದಕ್ಕೆ ನೋವುಂಟಾಗುತ್ತದೆ” ಎಂದು ಖರ್ಗೆ ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ‘ನಾರಿ ಶಕ್ತಿ ವಂದನ್ ಕಾಯಿದೆ’ಗೆ ಸಂಬಂಧಿಸಿದಂತೆ ಪ್ರಸ್ತುತ ಗಂಭೀರ ಚರ್ಚೆಗಳು ನಡೆಯುತ್ತಿವೆ. ಈ ಮೀಸಲಾತಿಯು 2029ರ ಸಾರ್ವತ್ರಿಕ ಚುನಾವಣೆಗಿಂತ ಮುಂಚಿತವಾಗಿ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಹೇಳಿದೆ. ಆದರೆ ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೆರಿ ಮತ್ತು ಅಸ್ಸಾಂ ಚುನಾವಣೆ ನಡುವೆ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಮುಂದಾಗಿರುವುದು ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಈ ಹಿಂದೆ ವಿಪಕ್ಷಗಳು ಈ ಕಾನೂನು ಜಾರಿಗೆ ಆಗ್ರಹಿಸುತ್ತಿದ್ದಾಗ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆಯಬೇಕು ಎಂದು ಹೇಳಿಕೊಳ್ಳುತ್ತಿದ್ದ ಕೇಂದ್ರ ಸರ್ಕಾರವು ಇದೀಗ ಇವೆರಡು ಪೂರ್ಣಗೊಳ್ಳದೆಯೇ ಮಹಿಳಾ ಮೀಸಲಾತಿ ಜಾರಿಗೆ ಮುಂದಾಗಿದೆ. ರಾಜಕೀಯ ಲಾಭ ಪಡೆಯುವ ಹುನ್ನಾರ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸ್ವಾತಂತ್ರ್ಯ ಹೋರಾಟ ಹಿನ್ನೆಲೆಯುಳ್ಳ BSP ನಾಯಕ ಸುಧೀಂದ್ರ ಭದೋರಿಯಾ ಕುಟುಂಬದ ಹೆಸರುಗಳು ಡಿಲೀಟ್‌

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಬಿಎಸ್‌ಪಿ ಹಿರಿಯ ನಾಯಕ, ಮಾಜಿ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...

ರಾಜ್ಯದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ...