ಸಂಸದರ ಅಮಾನತು ಪೂರ್ವ ನಿರ್ಧಾರಿತ, ಪೂರ್ವ ನಿಯೋಜಿತ: ಧನಕರ್‌ಗೆ ಖರ್ಗೆ ಪತ್ರ

Date:

ಕಾಂಗ್ರೆಸ್ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಾದ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದು, ವಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿದ್ದು ಪೂರ್ವನಿರ್ಧಾರಿತ ಹಾಗೂ ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದು ತಿಳಿಸಿದ್ದಾರೆ.

- Advertisement -

“ಅಮಾನತುಗೊಳಿಸುವಿಕೆಯು ವಿವೇಚನಾ ರಹಿತವಾಗಿದ್ದು, ಸಂಸತ್ತಿನಲ್ಲಿ ಹಾಜರಿಯಿಲ್ಲದ ಇಂಡಿಯಾ ಒಕ್ಕೂಟದ ಸದಸ್ಯರೊಬ್ಬರನ್ನು ಅಮಾನುಗೊಳಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಯಾವುದಾದರೂ ಹಕ್ಕುಚ್ಯುತಿ ನಿರ್ಣಯದ ಅಸ್ತ್ರಗಳಿದ್ದರೆ ಅದನ್ನು ಪ್ರತಿಪಕ್ಷದ ಮೂಗಿಗೆ ಹಾಕಲಾಗುತ್ತದೆ. ಇದು ಸಂಸತ್ತನ್ನು ದುರ್ಬಲಗೊಳಿಸುವ ಸರ್ಕಾರದ ಉದ್ದೇಶಪೂರ್ವಕ ನಡೆಯಾಗಿದೆ. ಒಟ್ಟಾರೆ 146 ಸಂಸದರ ಅಮಾನತುಗೊಳಿಸಿರುವ ಕ್ರಮವು ಸರ್ಕಾರವು ಮತದಾರರ ಧ್ವನಿಯನ್ನು ಪರಿಣಾಮಕಾರಿಯಾಗಿ ಅಡಗಿಸುವುದಾಗಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಸಂಸತ್ತಿನ ಭದ್ರತಾ ಲೋಪದ ಕುರಿತು ಸದನದಲ್ಲಿ ಹೇಳಿಕೆ ನೀಡದ ಗೃಹ ಸಚಿವರು ಮತ್ತು ಕೇಂದ್ರವನ್ನು ಉಪರಾಷ್ಟ್ರಪತಿ ಕ್ಷಮಿಸಿರುವುದು ವಿಷಾದನೀಯ. ಸಂಸತ್ ಅಧಿವೇಶನದಲ್ಲಿದ್ದಾಗ ಗೌರವಾನ್ವಿತ ಗೃಹ ಸಚಿವರು ಟಿವಿ ಚಾನೆಲ್‌ನ ಮುಂದೆ ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯನ್ನು ನೀಡಿದರು. ಆದರೆ ಪ್ರಜಾಪ್ರಭುತ್ವದ ದೇವಾಲಯದಲ್ಲಿಅಪಹಾಸ್ಯ ಮಾಡಿರುವುದನ್ನು ಅಧ್ಯಕ್ಷರು ಗಮನಿಸದಿರುವುದು ಹೆಚ್ಚು ವಿಷಾದನೀಯ” ಎಂದು ಖರ್ಗೆ ಹೇಳಿದ್ದಾರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

“ಗೃಹ ಸಚಿವರು ರಾಜ್ಯಸಭೆಗೆ ಹಾಜರಾಗುವುದಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುವುದು ಎಂದು ಕೇಂದ್ರ ಸಚಿವರೊಬ್ಬರು ವಿರೋಧ ಪಕ್ಷದ ನಾಯಕರಿಗೆ ತಿಳಿಸಿದ್ದರು. ಇಂತಹ ಬೆದರಿಕೆಗಳ ಬಗ್ಗೆ ಸಭಾಧ್ಯಕ್ಷಕರು ಪರಿಶೀಲಿಸಬೇಕೆಂದು ನಾವು ಬಯಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಅಮಾನತುಗಳ ಪರಿಣಾಮವು ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸುವ ಮೂಲಕ ಶಾಸಕಾಂಗ ವ್ಯವಹಾರವನ್ನು ಸುಗಮಗೊಳಿಸಿದೆ ಎಂದು ಗೌರವಾನ್ವಿತ ಅಧ್ಯಕ್ಷರು ಭಾವಿಸುತ್ತಿರುವುದು ಬೇಸರವಾಗಿದೆ ”ಎಂದು ಹೇಳಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭದ್ರತಾ ಲೋಪಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕೆಂದು ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಲೋಕಸಭೆಯ 100 ಮತ್ತು ರಾಜ್ಯಸಭೆಯ 46 ಸಂಸದರನ್ನು ಒಳಗೊಂಡು 146 ಸಂಸದರನ್ನು ಅಮಾನತುಗೊಳಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...