ನಾಲ್ವರು ನಾಗರಿಕರ ಹತ್ಯೆ: ಕೇಂದ್ರ, ಮಣಿಪುರ ಸರ್ಕಾರಕ್ಕೆ 3 ದಿನಗಳ ಗಡುವು ನೀಡಿದ ನಾಗಾ ಸಂಘಟನೆ

Date:

ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶುಕ್ರವಾರ (ನವೆಂಬರ್ 13) ಶಂಕಿತ ಉಗ್ರರ ಗುಂಡಿನ ದಾಳಿಗೆ ನಾಲ್ವರು ನಾಗಾ ನಾಗರಿಕರು ಬಲಿಯಾದ ಘಟನೆಗೆ ಸಂಬಂಧಿಸಿದಂತೆ, ತಾಂಗ್‌ಖುಲ್ ನಾಗಾ ಸಮುದಾಯದ ಅತ್ಯುನ್ನತ ಸಂಘಟನೆಯಾದ ‘ತಾಂಗ್‌ಖುಲ್ ನಾಗಾ ಲಾಂಗ್’ ಕೇಂದ್ರ ಮತ್ತು ಮಣಿಪುರ ರಾಜ್ಯ ಸರ್ಕಾರಗಳಿಗೆ ಮೂರು ದಿನಗಳ ಗಡುವು ನೀಡಿದೆ.

- Advertisement -

ಶುಕ್ರವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಇಂಫಾಲ್-ಉಖ್ರುಲ್ ನಡುವಿನ ರಾಷ್ಟ್ರೀಯ ಹೆದ್ದಾರಿ-202ರಲ್ಲಿ (NH-202) ನ್ಯೂ ಹೆವೆನ್ (New Haven) ಪ್ರದೇಶದ ಬಳಿ ಎರಡು ಪ್ರತ್ಯೇಕ ವಾಹನಗಳಲ್ಲಿ ಇಂಫಾಲ್‌ನತ್ತ ಪ್ರಯಾಣಿಸುತ್ತಿದ್ದ ನಾಗರಿಕರ ಮೇಲೆ ಶಂಕಿತ ಶಸ್ತ್ರಸಜ್ಜಿತ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ದಾಳಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶಾಂಗ್‌ಶಾಕ್ ಗ್ರಾಮದ ಕಪಾಂಗ್‌ಖುಯಿ ಆರ್.ಎಸ್. ಮತ್ತು ಹಾವೊಲೀಲಾ ಆರ್.ಎಸ್. ಹಾಗೂ ತಾಶರ್ ಗ್ರಾಮದ ಆಗಸ್ಟ್ ಗಾಲುಂಗ್ ಮತ್ತು ಖಾನ್ಮಿಲಾ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮಣಿಪುರ | ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ: ಮೂವರು ಸಾವು

ಘಟನೆಯ ಬೆನ್ನಲ್ಲೇ ತಾಂಗ್‌ಖುಲ್ ನಾಗರಿಕ ಸಮಾಜ ಸಂಘಟನೆಗಳ ತುರ್ತು ಸಭೆ ನಡೆಸಿ ಈ ಗಡುವು ನೀಡಿದೆ. ನಾಗಾ ಪ್ರಾಬಲ್ಯದ ಪ್ರದೇಶಗಳಿಂದ ಕುಕಿ ಉಗ್ರಗಾಮಿಗಳನ್ನು ತಕ್ಷಣವೇ ಹೊರಹಾಕಬೇಕು. ಆ ಭಾಗದಲ್ಲಿ ನಿಯೋಜಿಸಲಾಗಿರುವ ಕೇಂದ್ರ ಭದ್ರತಾ ಪಡೆಗಳ ಮೇಲೆ ಸ್ಥಳೀಯರು ಸಂಪೂರ್ಣ ನಂಬಿಕೆ ಕಳೆದುಕೊಂಡಿದ್ದು, ಅವರನ್ನು ತಕ್ಷಣವೇ ಹಿಂಪಡೆಯಬೇಕು. ಈ ಹತ್ಯೆ ಪ್ರಕರಣದ ತನಿಖೆಯನ್ನು ತಕ್ಷಣವೇ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಹಸ್ತಾಂತರಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಹಾಗೆಯೇ “ನಮ್ಮ ಬೇಡಿಕೆಗಳು ಈಡೇರುವವರೆಗೆ ಮೃತಪಟ್ಟ ನಾಲ್ವರ ಶವಗಳನ್ನು ಕುಟುಂಬಸ್ಥರು ಸ್ವೀಕರಿಸುವುದಿಲ್ಲ. ಒಂದು ವೇಳೆ ಮೂರು ದಿನಗಳ ಒಳಗಾಗಿ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಸಂಪೂರ್ಣ ನ್ಯಾಯ ಸಿಗುವವರೆಗೂ ಸಾರ್ವಜನಿಕರು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಇಳಿಯುವುದು ಅನಿವಾರ್ಯವಾಗುತ್ತದೆ,” ಎಂದು ತಾಂಗ್‌ಖುಲ್ ನಾಗಾ ಲಾಂಗ್ ಎಚ್ಚರಿಕೆ ನೀಡಿದೆ. ಸದ್ಯ ಮೃತದೇಹಗಳನ್ನು ಇಂಫಾಲ್‌ನ ಜೆಎನ್‌ಐಎಂಎಸ್ ಶವಾಗಾರದಲ್ಲಿ ಇರಿಸಲಾಗಿದ್ದು, ವಿವಿಧ ಸಮುದಾಯಗಳ ನೂರಾರು ಜನರು ಅಲ್ಲಿ ಜಮಾಯಿಸಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕುಕಿ ಮಹಿಳೆಯೊಬ್ಬರ ಹತ್ಯೆಯಾದ ಮರುದಿನವೇ ಈ ದಾಳಿ ನಡೆದಿರುವುದು ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ನಾಗಾ ಮತ್ತು ಕುಕಿ ಸಮುದಾಯಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಮಣಿಪುರ ಮುಖ್ಯಮಂತ್ರಿ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಶನಿವಾರ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ.

ದುಷ್ಕರ್ಮಿಗಳನ್ನು ಬಂಧಿಸಲು ಕೂಂಬಿಂಗ್ ಕಾರ್ಯಾಚರಣೆ ಮುಂದುವರಿಸಲು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು (ಮಣಿಪುರ ಪೊಲೀಸ್, ಬಿಎಸ್‌ಎಫ್, ಸೇನೆ ಮತ್ತು ಅಸ್ಸಾಂ ರೈಫಲ್ಸ್) ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ರೈತರ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಭಗವಂತ ಖೂಬಾ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರಾಕೃತಿಕ ವಿಕೋಪದಿಂದ ರೈತರು ತೀವ್ರ ಸಂಕಷ್ಟಕ್ಕೆ...

​’ಅಪ್ರಾಪ್ತೆಯ ಜೊತೆ ವಿವಾಹವಾದರೆ ಪೋಕ್ಸೊದಿಂದ ಪಾರಾಗುವುದಿಲ್ಲ’: ದೆಹಲಿ ಹೈಕೋರ್ಟ್

ಅಪ್ರಾಪ್ತೆಯನ್ನು ವಿವಾಹವಾದ ವ್ಯಕ್ತಿಯೊಬ್ಬನ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (ಪೋಕ್ಸೊ) ಪ್ರಕರಣವನ್ನು...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ, ತಾವೇ ಜೈಲು ಸೇರಿದ್ದ ನ್ಯಾಯಮೂರ್ತಿ ಕರ್ಣನ್!

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ,...

‘ಅಬ್ ಕೀ ಬಾರ್, ಎಕ್ಯೂಐ ಚಾರ್‌ ಸೋ ಪಾರ್’: ದೆಹಲಿ ವಾಯುಮಾಲಿನ್ಯದ ವಿಚಾರದಲ್ಲಿ ಪ್ರಧಾನಿ ಮೋದಿಗೆ ಕಾಂಗ್ರೆಸ್ ಟಾಂಗ್

ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟ ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶನಿವಾರ ಪ್ರಧಾನಿ...