ಶೀಘ್ರದಲ್ಲೇ ತೆಲಂಗಾಣದಲ್ಲಿ ಕಿಂಗ್‌ಫಿಶರ್‌ ಬಿಯರ್‌ ಗ್ರಾಹಕರಿಗೆ ಅಲಭ್ಯ

Date:

Advertisements

ತೆಲಂಗಾಣ ರಾಜ್ಯದಲ್ಲಿ ಕಿಂಗ್‌ಫಿಶರ್ ಮತ್ತು ಹೈನೆಕೆನ್ ಬಿಯರ್‌ಗಳ ತಯಾರಕರಾದ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ , ತೆಲಂಗಾಣ ಬೆವರೇಜಸ್ ಕಾರ್ಪೊರೇಷನ್ ಲಿಮಿಟೆಡ್‌ಗೆ ತನ್ನ ಬಿಯರ್ ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

2 ವರ್ಷದಿಂದಲೂ ತೆಲಂಗಾಣದಲ್ಲಿ ಬಿಯರ್‌ ಮೂಲ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕಂಪನಿ ಮನವಿ ಮಾಡಿತ್ತು. ಆದರೆ ತೆಲಂಗಾಣ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಭಾರೀ ಪ್ರಮಾಣದ ನಷ್ಟವಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ 2019-20ನೇ ಹಣಕಾಸು ವರ್ಷದಿಂದ ಯುನೈಟೆಡ್ ಬ್ರೇವರಿಸ್‌ ಬಿಯರ್‌ನ ಮೂಲ ಬೆಲೆಯನ್ನು ಟಿಜಿಬಿಸಿಎಲ್ ಪರಿಷ್ಕರಿಸಿಲ್ಲ, ಇದು ರಾಜ್ಯದಲ್ಲಿ ಕಂಪನಿಗೆ ಆರ್ಥಿಕ ನಷ್ಟಕ್ಕೆ ಕಾರಣ ಎಂದು ಕಂಪನಿ ದೂರಿದೆ.

ಹೆಚ್ಚುತ್ತಿರುವ ಬಿಯರ್‌ ತಯಾರಿಕೆಗೆ ಕಚ್ಚಾ ವಸ್ತುಗಳ ಬೆಲೆಗಳಿಂದ ಉತ್ಪಾದನಾ ವೆಚ್ಚದಲ್ಲಿ ಶೇ. 40 ರಷ್ಟು ಹೆಚ್ಚಳವನ್ನು ಸರಿದೂಗಿಸಲು 2024ರ ನವೆಂಬರ್‌ನಲ್ಲಿ ತೆಲಂಗಾಣ ಸರ್ಕಾರವನ್ನು ಕಂಪನಿ ಒತ್ತಾಯಿಸಿತ್ತು. ಅಂದರೆ ಪ್ರತಿ ಬಾಟಲಿಗೆ ಕನಿಷ್ಠ 10 ರೂ.ಗಳಷ್ಟು ಬಿಯರ್ ಬೆಲೆಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿತ್ತು. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬಿಯರ್ ಕಂಪನಿಗಳ ಬೇಡಿಕೆಗಳನ್ನು ತಿರಸ್ಕರಿಸಿದ್ದರು.

Advertisements

2019 ರಿಂದ ಉತ್ಪಾದನಾ ವೆಚ್ಚವನ್ನು ಆಧರಿಸಿದ ದರವೇ ಇಂದಿಗೂ ಇದೆ. ಇದು ಪ್ರತಿ ಬಿಯರ್ ಕೇಸ್‌ ಮೇಲೆ ಅಂದಾಜು 100 ರೂ. ನಷ್ಟಕ್ಕೆ ಕಾರಣವಾಗುತ್ತಿದೆ ಎಂದು ಕಂಪನಿ ಅಳಲು ತೋಡಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬೆಳೆಸಿದ ಮಧ್ಯಮವರ್ಗ; ಮಧ್ಯಮವರ್ಗ ಮುಗಿಸಿದ ಮೋದಿ

ಟಿಜಿಬಿಸಿಎಲ್ ಕಂಪನಿಗೆ 3,900 ಕೋಟಿ ರೂ. ಪಾವತಿಸಿಲ್ಲ. ಇದು ಕಂಪನಿಯ ನಷ್ಟಕ್ಕೆ ಕಾರಣವಾಗಿದೆ. ಬ್ರೇವರಿಸ್‌ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಕೂಡ ಮದ್ಯ ತಯಾರಿಕಾ ವಲಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದೆ. ಇಲ್ಲಿಯವರೆಗೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಆದರೂ ಆರ್ಥಿಕ ಒತ್ತಡ ಪರಿಸ್ಥಿತಿಯ ನಡುವೆಯೂ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಮದ್ಯ ಪೂರೈಸಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.

ನಷ್ಟದಿಂದಾಗಿ ಬಿಯರ್‌ನ್ನು ಟಿಜಿಬಿಸಿಎಲ್‌ಗೆ ನಿರಂತರವಾಗಿ ಪೂರೈಸಲು ಸಾಧ್ಯವಿಲ್ಲ. ಯುನೈಟೆಡ್ ಬ್ರೇವರಿಸ್‌ ಕಂಪನಿಯು ಮದ್ಯ ಪೂರೈಕೆ ಮತ್ತು ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕವಾಗಿ 24,500 ಕೋಟಿ ರೂ. ಆದಾಯ ಬರುತ್ತಿದೆ. ಆದರೆ, ಕಂಪನಿಗಳಿಗೆ ಲಾಭವಾಗುತ್ತಿಲ್ಲ. ಸರ್ಕಾರವು ಕೂಡಲೇ ಮದ್ಯದ ಬೆಲೆ ಏರಿಕೆಗೆ ಕ್ರಮಕೈಗೊಳ್ಳಬೇಕು ಎಂದು ಮದ್ಯ ತಯಾರಕರು ಒತ್ತಾಯಿಸಿದ್ದಾರೆ. ಇದಕ್ಕೆ ಸರ್ಕಾರ ಒಪ್ಪದಿದ್ದರೆ ಇನ್ಮುಂದೆ ತೆಲಂಗಾಣದಲ್ಲಿ ಕಿಂಗ್‌ ಫಿಶರ್‌ ಬಿಯರ್‌ ಪೂರೈಕೆ ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X