ಎಂಎಸ್‌ಪಿ | ಜನವರಿ 4ರಂದು ಕಿಸಾನ್ ಮಹಾ ಪಂಚಾಯತ್: ರೈತರ ಕರೆ

Date:

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಬೇಕು. ಎಂಎಸ್‌ಪಿಗೆ ಕಾನೂನು ಖಾತ್ರಿ ಒದಗಿಸಬೇಕೆಂದು ಒತ್ತಾಯಿಸಿ ಪಂಜಾಬ್-ಹರಿಯಾಣ ರೈತರು ಸುದೀರ್ಘ ಹೋರಾಟ ನಡೆಸುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಕೃಷಿ ಉತ್ಪನ್ನಗಳನ್ನು ಎಂಎಸ್‌ಪಿ ಮೂಲಕವೇ ಖರೀದಿಸುತ್ತವೆಂದು ಹೇಳಿರುವ ಕೇಂದ್ರ ಸರ್ಕಾರ, ಈವರೆಗೆ ಎಂಎಸ್‌ಪಿ ಜಾರಿಗೆ ತಂದಿಲ್ಲ. ಮಾತ್ರವಲ್ಲದೆ, ಕಾನೂನು ಖಾತ್ರಿಯನ್ನೂ ಒಗಿಸಿಲ್ಲ. ಹೀಗಾಗಿ, ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಡಿಸೆಂಬರ್ 30ರಂದು ಪಂಜಾಬ್‌ ಬಂದ್ ಮತ್ತು ಜನವರಿ 4ರಂದು ‘ಕಿಸಾನ್ ಮಹಾ ಪಂಚಾಯತ್’ ನಡೆಸಲು ಕರೆ ಕೊಟ್ಟಿದ್ದಾರೆ.

- Advertisement -

ಪಂಜಾಬ್ ರೈತರು ಪಂಜಾಬ್-ಹರಿಯಾಣ ನಡುವಿನ ಖನೌರಿ-ಶಂಭೂ ಗಡಿಯಲ್ಲಿ ಸುಮಾರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ರೈತ ನಾಯಕ ಜಗಜೀತ್ ಸಿಂಗ್ ದಲೈವಾಲ್ ಅವರು 33 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸದ ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಸಾಲದ ಹೊರೆಯಿಂದ ದೇಶಾದ್ಯಂತ ಏಳು ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರನ್ನು ರಕ್ಷಿಸುವುದು ಅನಿವಾರ್ಯ. ರೈತರ ಉಳಿವಿಗಾಗಿ ನಾನು ಉಪವಾಸ ಕುಳಿತಿದ್ದೇನೆ. ನನ್ನ ಮೇಲೆ ಯಾರ ಒತ್ತಡವೂ ಇಲ್ಲ. ನಾನು ಗೆಲ್ಲುತ್ತೇನೆ ಅಥವಾ ಸಾಯುತ್ತೇನೆ. ಆದರೆ, ನನ್ನನ್ನು ಮುಟ್ಟಲು ಸರ್ಕಾರ ಬಿಡಬೇಡಿ” ಎಂದು ದಲೈವಾಲ್ ಅವರು ಹೋರಾಟನಿರತ ರೈತರಿಗೆ ಹೇಳಿದ್ದಾರೆ.

ಇದೆಲ್ಲದರ ಬೆನ್ನಲ್ಲೇ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಹಾಗೂ ಕಿಸಾನ್ ಮಝ್ದೂರ್ ಮೋರ್ಚಾ ಸಂಘಟನೆಗಳು ಡಿಸೆಂಬರ್ ಡಿಸೆಂಬರ್ 30ರಂದು ಪಂಜಾಬ್ ಬಂದ್‌ಗೆ ಕರೆಕೊಟ್ಟಿದೆ. ಅಲ್ಲದೆ, ಜನವರಿ 4ರಂದು ಬೃಹತ್ ಕಿಸಾನ್ ಮಹಾ ಪಂಚಾಯತ್‌ ನಡೆಸಲು ನಿರ್ಧರಿಸಿವೆ.

“ನಾವು ಜನವರಿ 4ರಂದು ಖನೌರಿಯಲ್ಲಿ ಬೃಹತ್ ಕಿಸಾನ್ ಮಹಾ ಪಂಚಾಯತ್ ನಡೆಸಲಿದ್ದೇವೆ. ವಿವಿಧ ರಾಜ್ಯಗಳ ರೈತರು ಪಾಲ್ಗೊಳ್ಳಲಿದ್ದಾರೆ” ಎಸ್‌ಕೆಎಂ ನಾಯಕ ಕಾಕಾ ಸಿಂಗ್ ಕೋತ್ರಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...