ಕಿಸಾನ್ ಮಹಾಪಂಚಾಯತ್‌ | ದೆಹಲಿಯತ್ತ ರೈತರು; ಅರೆಸೇನಾ ಪಡೆ ಮೊರೆಹೋದ ಪೊಲೀಸರು

Date:

ಗುರುವಾರ ಕಿಸಾನ್ ಮಹಾಪಂಚಾಯತ್‌ಗಾಗಿ ಪಂಜಾಬ್‌ನಿಂದ ಸಾವಿರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಮಹಾಪಂಚಾಯತ್ ಆಯೋಜಿಸಿದೆ.

- Advertisement -

ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಆದರೆ, ಒಂದು ವೇಳೆ, ರೈತರು ದೆಹಲಿ ಪ್ರವೇಶಿಸದಂತೆ ತಡೆದರೆ ಧರಣಿ ನಡೆಸಿ, ರೈಲು ಸಂಚಾರ ನಿರ್ಬಂಧಿಸುತ್ತೇವೆ ಎಂದು ಎಸ್‌ಕೆಎಂ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಸ್‌ಕೆಎಂ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ಮಾತನಾಡಿ, “ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಸಾವಿರಾರು ರೈತರು, ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಜನರು ದೆಹಲಿಯತ್ತ ಪಾದಯಾತ್ರೆ ಆರಂಭಿಸಿದ್ದಾರೆ. ರೈತರನ್ನು ರಾಷ್ಟ್ರ ರಾಜಧಾನಿ ತಲುಪದಂತೆ ತಡೆದರೆ, ಧರಣಿ ಮತ್ತು ರೈಲು ರೋಕೋ ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಪಂಜಾಬ್‌ನಿಂದ 50,000ಕ್ಕೂ ಹೆಚ್ಚು ರೈತರು ಬಸ್‌ಗಳು, ಟ್ರಕ್‌ಗಳು ಮತ್ತು ರೈಲುಗಳಲ್ಲಿ ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ನಾವು ರೈತರಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಿದ್ದೇವೆ. ಅವರು ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿ ಮಾಡುವುದಿಲ್ಲವೆಂದು ರೈತರು ಭರವಸೆ ನೀಡಿದ್ದಾರೆ” ಎಂದು ದೆಹಲಿ ಕೇಂದ್ರ ಡಿಸಿಪಿ ಎಂ ಹರ್ಷವರ್ಧನ್ ಹೇಳಿದ್ದಾರೆ.

“ರಾಮಲೀಲಾ ಮೈದಾನದಲ್ಲಿ 5,000 ಜನರು ಸೇರಲು ಅವಕಾಶ ನೀಡಲಾಗಿದೆ. ಯಾವುದೇ ಟ್ರ್ಯಾಕ್ಟರ್-ಟ್ರಾಲಿ ಅಥವಾ ಮೆರವಣಿಗೆಗೆ ಅವಕಾಶವಿಲ್ಲ” ಎಂದು ಡಿಸಿಪಿ ಹೇಳಿದ್ದಾರೆ. ಅಲ್ಲದೆ, ಅರೆಸೇನಾ ಪಡೆಗಳನ್ನು ನಿಯೋಜಿಸಲು ಸರ್ಕಾರವನ್ನು ಕೋರಿರುವುದಾಗಿ ತಿಳಿಸಿದ್ದಾರೆ.

“ಪ್ರಚೋದನಾಕಾರಿ ಭಾಷಣ ಮಾಡಿದರೆ, ವೇದಿಕೆಯಿಂದ ಸ್ಪೀಕರ್‌ಗಳನ್ನು ತೆಗೆದುಹಾಕುವುದಾಗಿ ರೈತರಿಗೆ ಸೂಚಿಸಿದ್ದೇವೆ. ಮಧ್ಯಾಹ್ನ 3 ಗಂಟೆ ಒಳಗೆ ಕಾರ್ಯಕ್ರಮ ಮುಗಿಸಲು ಕೇಳಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...