ತಾಯಿಯಾಗಿ ನನ್ನ ಕರ್ತವ್ಯ ನಿರ್ವಹಿಸಿದೆ: ಏನಿದು ಕಿರಣ್ ಬೇಡಿ ವಿರುದ್ಧದ ಕಣ್ಗಾವಲು ದುರುಪಯೋಗ ಆರೋಪ?

Date:

“ತಾಯಿಯಾಗಿ ನಾನು ನನ್ನ ಕರ್ತವ್ಯ ನಿರ್ವಹಿಸಿದೆ” – ತನ್ನ ಮಗಳ ಮೇಲೆ ನಿಗಾ ವಹಿಸಲು ಕಣ್ಗಾವಲು ದುರುಪಯೋಗ ಮಾಡಿದ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ ದೇಶದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ ಕಿರಣ್‌ ಬೇಡಿ ಹೇಳಿದ ಮಾತಿದು.

- Advertisement -

ಪುದುಚೇರಿಯ ಮಾಜಿ ಲೆಫ್ಟಿನೆಂಟ್ ಗವರ್ನರ್, ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ವಿರುದ್ಧ ಕಣ್ಗಾವಲು ದುರುಪಯೋಗ ಮತ್ತು ಸಾಕ್ಷಿಯನ್ನು ಮುಚ್ಚಿಟ್ಟ ಆರೋಪ ಮಾಡಿ ದಿ ನ್ಯೂಸ್ ಮಿನಿಟ್ ಸೋಮವಾರ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಮುಸ್ಲಿಮರಿಗೆ ‘ಎಚ್ಚರಿಕೆ’ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಕಿರಣ್ ಬೇಡಿ ಅವರು, “22 ವರ್ಷಗಳ ಹಿಂದೆ ನನ್ನ ಮಗಳನ್ನು ಗುರಿಯಾಗಿಸಿದಾಗ, ಅವಳನ್ನು ಸಿಲುಕಿಸಿದಾಗ ನಾನು ಮುಗ್ಧ ಜೀವವನ್ನು ಕಾಪಾಡುವಂತೆ ಪೊಲೀಸರಿಗೆ ಮನವಿ ಮಾಡಿದೆ. ಪೊಲೀಸರು ಅವರ ಕರ್ತವ್ಯ ಮಾಡಿದ್ದಾರೆ. ತಾಯಿಯಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ” ಎಂದು ಹೇಳಿದ್ದಾರೆ.

2003ರಲ್ಲಿ ದೆಹಲಿ ಪೊಲೀಸ್ ವ್ಯಾಪ್ತಿಯಲ್ಲಿ ತನ್ನ ಸಂಪರ್ಕವನ್ನು ಬಳಸಿ ಮಾಜಿ ಐಪಿಎಸ್ ಅಧಿಕಾರಿ ತನ್ನ 20 ವರ್ಷದ ಮಗಳ ಮೇಲೆ ಮತ್ತು ಆಕೆಯ ಪ್ರಿಯಕರನ ಮೇಲೆ ಕಣ್ಗಾವಲು ಇರಿಸಿದ್ದರು ಎಂಬುದು ಆರೋಪವಾಗಿದೆ. ಈ ಆರೋಪ ನಿಜವಾದರೆ ಕಿರಣ್ ಬೇಡಿ ಖಾಸಗಿತನಕ್ಕೆ ಧಕ್ಕೆ ತಂದಾಗುತ್ತದೆ ಮತ್ತು ತನ್ನ ಅಧಿಕಾರ ದುರ್ಬಳಕೆ ಮಾಡಿದಂತಾಗುತ್ತದೆ.

ಈ ಕಣ್ಗಾವಲಿನ ಸಂದರ್ಭದಲ್ಲಿ 2003ರ ಸ್ವಿಸ್ ಡಿಪ್ಲೊಮಟ್ ಲೈಂಗಿಕ ದೌರ್ಜನ್ಯ ಪ್ರಕರಣದ ಮಾಹಿತಿಯೂ ದೊರೆತಿತ್ತು. ಆದರೆ ಅದನ್ನು ಬಹಿರಂಗಪಡಿಸಿಲ್ಲ. ತನಿಖೆಯಾದರೆ ತನ್ನ ಮಗಳೂ ಈ ಪ್ರಕರಣದಲ್ಲಿ ಸಿಲುಕಬಹುದು ಎಂಬ ಕಾರಣಕ್ಕೆ ಮಾಹಿತಿಯನ್ನು ಮುಚ್ಚಿಹಾಕಿದ್ದಾರೆ ಎಂಬ ಆರೋಪವಿದೆ.

ಇದನ್ನು ಓದಿದ್ದೀರಾ? ವಿಜಯಪುರ‌ | ಗುಳೆ ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮ; ಸಬಲೀಕರಣದತ್ತ ಮಹಿಳೆಯರ ಹೆಜ್ಜೆ

ಇನ್ನು ಕಾನೂನುಬಾಹಿರವಾಗಿ ಹಣ ಗಳಿಸುವ ಯೋಜನೆಯ ಬಗ್ಗೆಯೂ ಕಿರಣ್ ಮತ್ತು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಎಲ್ಲಾ ವಿಚಾರ ತಿಳಿದಿದ್ದರೂ ಕೂಡಾ ಕಿರಣ್ ಪುತ್ರಿ ಮತ್ತು ಸ್ನೇಹಿತನ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇಮೇಲ್‌ನಲ್ಲಿ ಈ ಮಾಹಿತಿ ಬಹಿರಂಗವಾಗಿದೆ ಎನ್ನಲಾಗಿದೆ.

ಈ ಇಮೇಲ್ ಲಭಿಸಿದ್ದೆಲ್ಲಿ, ಇದು ಖಾಸಗಿತನದ ಉಲ್ಲಂಘನೆ, ಆದ್ದರಿಂದ ಈ ಬಗ್ಗೆಯೂ ತನಿಖೆಯಾಗಬೇಕು ಎಂಬುದು ಕಿರಣ್ ವಾದ. “ನನ್ನ ಇಮೇಲ್ ಹ್ಯಾಕ್ ಮಾಡಲಾಗಿದೆ” ಎಂದು ಕಿರಣ್ ಹೇಳಿಕೊಂಡಿದ್ದಾರೆ. ಈ ಆರೋಪ ಪ್ರತ್ಯಾರೋಪದ ನಡುವೆ ಹಲವು ಗೊಂದಲ ಪ್ರಶ್ನೆಗಳು ಎದ್ದಿವೆ.

ಕಿರಣ್ ಬೇಡಿ ಮೇಲಿರುವ ಎಲ್ಲಾ ಆರೋಪಗಳು ನಿಜವಾದರೆ ಅಧಿಕಾರಿಯಾಗಿ ಪ್ರಕರಣವನ್ನು ಮುಚ್ಚಿ ಹಾಕಿದ್ದು ಎಷ್ಟು ಸರಿಯೆಂಬ ಪ್ರಶ್ನೆ ಬರುತ್ತದೆ. ತನ್ನ ಮಗಳನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಮಾಡಿದ ವಿಚಾರಕ್ಕೆ ಬಂದಾಗ ತಾಯಿ ಮನಸು ಮತ್ತು ಕಾನೂನಿನ ನಡುವಿನ ಸಮರ ಸೃಷ್ಟಿಯಾಗುತ್ತದೆ. ಅದರಲ್ಲೂ ಓರ್ವ ಮಹಿಳೆಗಾದ ಲೈಂಗಿಕ ದೌರ್ಜನ್ಯ, ಅಕ್ರಮ ಹಣ ಗಳಿಕೆಯಂತಹ ಪ್ರಕರಣಗಳನ್ನು ಮುಚ್ಚಿ ಹಾಕಿರುವುದು ಅತೀ ಗಂಭೀರ ವಿಚಾರ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...