ವಿದೇಶದಲ್ಲಿ ಜ್ಞಾನದ ಮಾತು, ತಾಯ್ನಾಡಿನಲ್ಲಿ ಏಕೆ ಮೌನ: ಆರ್‌ಎಸ್‌ಎಸ್ ಮುಖ್ಯಸ್ಥನಿಗೆ ಕಪಿಲ್ ಸಿಬಲ್ ಪ್ರಶ್ನೆ

Date:

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಭಾರತದ ವೈವಿಧ್ಯತೆ ಹಾಗೂ ಏಕತೆಯ ಕುರಿತು ನೀಡಿರುವ ಹೇಳಿಕೆಗೆ ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ತೀವ್ರ ವ್ಯಂಗ್ಯವಾಡಿದ್ದಾರೆ. “ವಿದೇಶದಲ್ಲಿ ಜ್ಞಾನದ ಮಾತುಗಳು, ದೇಶದಲ್ಲಿ ಮೌನ” ಎಂದು ಹೇಳುವ ಮೂಲಕ ಕಪಿಲ್ ಸಿಬಲ್, ಭಾಗವತ್ ಅವರ ನಿಲುವನ್ನು ಕಟುವಾಗಿ ವಿಮರ್ಶಿಸಿದ್ದಾರೆ. ಹಾಗೆಯೇ ಭಾರತದಲ್ಲಿ ಕೋಮು ಗಲಭೆಗಳಾದ ಸಂದರ್ಭದಲ್ಲಿ ಮೋಹನ್ ಭಾಗವತ್ ಅವರ ಮೌನವನ್ನು ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

- Advertisement -

ಅಮೆರಿಕ ಪ್ರವಾಸದಲ್ಲಿರುವ ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, “ವೈವಿಧ್ಯತೆಯು ನಮ್ಮ ಭಾರತದ ಅಂತರ್ಗತ ಏಕತೆಯ ಶೃಂಗಾರ. ಇದನ್ನು ಪ್ರತಿಯೊಬ್ಬರೂ ರಕ್ಷಿಸಬೇಕು” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಬಹುಮತವಿಲ್ಲದ ರಾಜ್ಯಗಳಲ್ಲಿ ಅಧಿಕಾರ ಪಡೆಯುವ ಬಿಜೆಪಿ ತಂತ್ರವನ್ನು ವಿವರಿಸಿದ ಕಪಿಲ್ ಸಿಬಲ್

ಹಾಗೆಯೇ, “ಭಾರತದ ಡಿಎನ್‌ಎಯಲ್ಲೇ ಏಕತೆ ಮತ್ತು ವೈವಿಧ್ಯತೆ ಅಡಗಿದೆ. ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಯಾವುದೇ ಹಿಂದು ಭಾವಿಸಿದರೆ, ಅವರು ಹಿಂದುವಾಗಿಯೇ ಉಳಿಯುವುದಿಲ್ಲ” ಎಂದು ಪ್ರತಿಪಾದಿಸಿದ್ದರು.

ಭಾಗವತ್ ಅವರ ಈ ಹೇಳಿಕೆಯನ್ನು ಉಲ್ಲೇಖಿಸಿ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಪಿಲ್ ಸಿಬಲ್, “ವಿದೇಶಕ್ಕೆ ಹೋದಾಗ ಜ್ಞಾನದ ಮಾತುಗಳನ್ನಾಡುವ ಭಾಗವತ್, ಸ್ವದೇಶದಲ್ಲಿ ನಡೆಯುವ ಘಟನೆಗಳ ಬಗ್ಗೆ ಮೌನ ವಹಿಸುತ್ತಾರೆ. ಕೇವಲ ಮಾತುಗಳು ಮುಖ್ಯವಲ್ಲ, ನಡೆ-ನುಡಿಗಳಲ್ಲಿ ಅದು ಕಾಣಿಸಬೇಕು” ಎಂದು ಟೀಕಿಸಿದ್ದಾರೆ.

ದೇಶದಲ್ಲಿ ವೈವಿಧ್ಯತೆ ಮತ್ತು ಏಕತೆಗೆ ಧಕ್ಕೆಯಾಗುವ ಘಟನೆಗಳು ಸಂಭವಿಸಿದಾಗ ಮೌನ ವಹಿಸಿ, ವಿದೇಶದ ವೇದಿಕೆಗಳಲ್ಲಿ ಮಾತ್ರ ಜ್ಞಾನೋಪದೇಶ ಮಾಡುವುದು ವಿಪರ್ಯಾಸ ಎಂದು ಸಿಬಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...