ಕೊಚ್ಚಿ | ಕಂಪನಿಯ ಟಾರ್ಗೆಟ್‌ ಪೂರೈಸದ್ದಕ್ಕೆ ಸಿಬ್ಬಂದಿಗಳಿಗೆ ಅಮಾನವೀಯ ಶಿಕ್ಷೆ, ಕ್ರೌರ್ಯ

Date:

ಉದ್ಯೋಗಿಗಳ ಮೇಲೆ ಉದ್ಯೋಗದಾರರ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳಗಳು ಆಗ್ಗಾಗ್ಗೆ ವರದಿಯಾಗುತ್ತಿವೆ. ಮಾತ್ರವಲ್ಲ, ದೌರ್ಜನ್ಯಗಳು ಮಿತಿಮೀರುತ್ತಿವೆ. ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡದಿಂದಾಗಿ ಹಲವು ಉದ್ಯೋಗಿಗಳು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಇದೀಗ, ಕಂಪನಿಯೊಂದು ತಾನು ಹಾಕಿದ್ದ ಟಾರ್ಗೆಟ್‌ ಪೂರೈಸದ ಕಾರಣಕ್ಕೆ, ಉದ್ಯೋಗಿಗಳಿಗೆ ಅಮಾನವೀಯವಾಗಿ ಶಿಕ್ಷೆ ನೀಡಿ, ದೌರ್ಜನ್ಯ ಎಸಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

- Advertisement -

ಕೊಚ್ಚಿಯಲ್ಲಿರುವ ‘ಹಿಂದುಸ್ತಾನ್ ಪವರ್ ಲಿಂಕ್ಸ್‌’ ಎಂಬ ಕಂಪನಿಯು ತಮ್ಮ ಸಿಬ್ಬಂದಿಗಳಿಗೆ ನಾಯಿಯಂತೆ ಕುತ್ತಿಗೆಗೆ ಸರಪಳಿ ಹಾಕಿ, ನಾಯಿಯಂತೆ ನಡೆಸಿ, ನಾಯಿಯಂತೆ ಆಹಾರ ತಿನ್ನುವಂತೆ ಮಾಡಿದೆ. ಮಾತ್ರವಲ್ಲದ, ಸಿಬ್ಬಂದಿಗಳು ಪರಸ್ಪರರ ಗುಪ್ತಾಂಗವನ್ನು ಹಿಡಿದುಕೊಳ್ಳುವಂತೆ ಒತ್ತಾಯಿಸಿ ಕ್ರೌರ್ಯ ಮೆರೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಂಪನಿಯ ಕ್ರೌರ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಸರಪಳಿ ಹಾಕಿದ್ದು, ಅವರನ್ನು ನಾಯಿಯಂತೆ ನಡೆಸಿದ್ದು, ನಾಯಿಯ ರೀತಿಯಲ್ಲಿಯೇ ಆಹಾರ ತಿನ್ನುವಂತೆ ಮಾಡಿರುವುದು, ಬಾಯಿಂದ ನಾಣ್ಯಗಳನ್ನು ಎತ್ತಿಕೊಳ್ಳುವಂತೆ ಒತ್ತಾಯಿಸುವುದು ಸೆರೆಯಾಗಿದೆ.

ಕಂಪನಿಯ ಮ್ಯಾನೇಜರ್‌ ಈ ರೀತಿ ಕ್ರೌರ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇಂತಹ ಅಮಾನವೀಯ ಕ್ರೌರ್ಯದ ಶಿಕ್ಷೆಗೆ ಒಳಗಾಗಿರುವ ಸಿಬ್ಬಂದಿಗಳು ಕಂಪನಿಯ ಮಾರ್ಕೆಟಿಂಗ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮನೆ-ಮನೆಗೆ ತೆರಳಿ ಕಂಪನಿಯ ಉತ್ಪನ್ನಗಳನ್ನು ಮಾರಾಟ ಮಾಡಬೇಕಿತ್ತು. ಆದರೆ, ತಿಂಗಳ ಟಾರ್ಗೆಟ್‌ನಷ್ಟು ಉತ್ಪನ್ನಗಳನ್ನು ಮಾರಾಟ ಮಾಡಲಾಗದ ಕಾರಣ ಅವರ ಮೇಲೆ ಇಂತಹ ಕ್ರೌರ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಈ ವರದಿ ಓದಿದ್ದೀರಾ?: ವಕ್ಫ್ ಮಸೂದೆ ಬಗ್ಗೆ ಚರ್ಚೆ ವೇಳೆ ರಾಹುಲ್ ಗಾಂಧಿ ಮೌನ ಸರಿಯೇ?

ಕ್ರೌರ್ಯದ ವಿಡಿಯೋ ವೈರಲ್ ಆದ ಬಳಿಕ, ಘಟನೆ ಬಗ್ಗೆ ತನಿಖೆ ನಡೆಸುವಂತೆ ಕೇರಳ ಕಾರ್ಮಿಕ ಸಚಿವ ವಿ ಶಿವನ್‌ಕುಟ್ಟಿ ಆದೇಶಿಸಿದ್ದಾರೆ. ಆದರೆ, ಕಂಪನಿ ವಿರುದ್ದದ ಆರೋಪವನ್ನು ಕಂಪನಿಯ ಮಾಲೀಕ ನಿರಾಕರಿಸಿದ್ದಾರೆ. ಘಟನೆಗೂ ತಮ್ಮ ಕಂಪನಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಮತ್ತೊಂದು ಗಮನಾರ್ಹ ವಿವಾರವೆಂದರೆ, ಇದೇ ಕಂಪನಿಯ ಮಾಲೀಕನನ್ನು ಈ ಹಿಂದೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆತ ಈಗ ಜಾಮೀನು ಪಡೆದು ಹೊರಬಂದಿದ್ದಾರೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...