ಟೆಸ್ಟ್‌ಗೆ ವಿದಾಯ ಹೇಳಲು ಮುಂದಾದ ವಿರಾಟ್ ಕೊಹ್ಲಿ; ಬಿಸಿಸಿಐ ಹೇಳಿದ್ದೇನು?

Date:

ಭಾರತದ ಬ್ಯಾಟ್ಸ್‌ಮನ್, ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ಮುಂದಾಗಿದ್ದಾರೆ. ಈ ಕುರಿತು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

- Advertisement -

ಜೂನ್‌ನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್‌ ಟೆಸ್ಟ್‌ ಸರಣಿಗೂ ಮುನ್ನ ವಿದಾಯ ಹೇಳಲು ಮುಂದಾಗಿದ್ದಾರೆ. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ವಿಮರ್ಶಿಸಿಕೊಳ್ಳುವಂತೆ ಬಿಸಿಸಿಐ ಸಲಹೆ ನೀಡಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ತಂಡದ ನಾಯಕರಾಗಿದ್ದ ಅನುಭವಿ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಕೂಡ ಕೆಲ ದಿನಗಳ ಹಿಂದಷ್ಟೇ ಈ ಮಾದರಿಗೆ ವಿದಾಯ ಹೇಳಿದ್ದಾರೆ. ಇದೀಗ ಕೊಹ್ಲಿ ಟೆಸ್ಟ್‌ನಿಂದ ಹಿಂದೆ ಸರಿಯಲು ಇಚ್ಛಿಸಿದ್ದಾರೆ. ಅವರ ನಿರ್ಧಾರದ ಕುರಿತು ಅಂತಿಮ ತೀರ್ಮಾನ ಇನ್ನಷ್ಟೇ ಬರಬೇಕಿದೆ. ಒಂದು ವೇಳೆ ಅವರು ನಿವೃತ್ತಿ ನಿರ್ಧಾರಕ್ಕೆ ಬದ್ಧರಾದರೆ, ಭಾರತೀಯ ತಂಡದಲ್ಲಿ ನಾಯಕತ್ವ ಹಾಗೂ ಅನುಭವದ ಕೊರತೆಯ ಸಮಸ್ಯೆ ಉಂಟಾಗಬಹುದು.

ಕೊಹ್ಲಿ ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 2024ರ ಜೂನ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಭಾರತ ಗೆದ್ದ ನಂತರ, ಕೊಹ್ಲಿ ತಮ್ಮ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ ನಿವೃತ್ತಿ ಘೋಷಿಸಿದರು. ಆ ಫೈನಲ್ ಪಂದ್ಯದಲ್ಲಿ ಅವರು 59 ಎಸೆತಗಳಲ್ಲಿ 76 ರನ್ ಗಳಿಸಿ ಪಂದ್ಯಶ್ರೇಷ್ಠರಾಗಿದ್ದರು.

ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್‌, ವಿರಾಟ್‌, ರವೀಂದ್ರ ಜಡೇಜಾ ಬಿಸಿಸಿಐನ ಎ+ ಗುತ್ತಿಗೆ ರದ್ದತಿಯ ಭೀತಿಯಲ್ಲಿದ್ದಾರೆಯೆ ?

ವಿರಾಟ್ 2014 ರಿಂದ 2022 ರವರೆಗೆ ಟೆಸ್ಟ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಈ ಅವಧಿಯಲ್ಲಿ ಅವರು 68 ಟೆಸ್ಟ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿ, 40 ಗೆಲುವು ದಾಖಲಿಸಿದ್ದಾರೆ. ಇದು ಭಾರತೀಯ ಟೆಸ್ಟ್ ನಾಯಕನಾಗಿ ಅತ್ಯುತ್ತಮ ಸಾಧನೆಯಾಗಿದ್ದು, ಎಂ ಎಸ್ ಧೋನಿ ಅವರ 60 ಪಂದ್ಯಗಳ ನಾಯಕತ್ವದ ದಾಖಲೆ ಮುರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...