ಕೋಲ್ಕತ್ತಾ ಪ್ರಕರಣ: ನ್ಯಾಯ, ಸುರಕ್ಷತೆಗಾಗಿ ಕಿರಿಯ ವೈದ್ಯರ ಉಪವಾಸ ಸತ್ಯಾಗ್ರಹ

Date:

ಕೋಲ್ಕತ್ತಾದ ಆರ್‌.ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ, ಕೆಲಸದ ಸ್ಥಳಗಳಲ್ಲಿ ಸುರಕ್ಷತೆಗಾಗಿ ಒತ್ತಾಯಿಸಿ ಟ್ರೈನಿ ವೈದ್ಯರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಇದೀಗ, ತಮ್ಮ ಹೋರಾಟವನ್ನು ಉಪವಾಸ ಸತ್ಯಾಗ್ರಹಕ್ಕೆ ಬದಲಿಸಿದ್ದು, ಭಾನುವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

- Advertisement -

ಅತ್ಯಾಚಾರ-ಕೊಲೆಗೀಡಾದ ಸಹೋದ್ಯೋಗಿಗೆ ನ್ಯಾಯ ಒದಗಿಸಬೇಕು. ಆರ್.ಜಿ ಕರ್ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು. ಆರೋಗ್ಯ ಕಾರ್ಯಕರ್ತರಿಗೆ ಕೆಲಸದ ಸ್ಥಳದಲ್ಲಿ ಭದ್ರತೆ ಒದಗಿಸಬೇಕು. ಆರೋಗ್ಯ ಸೌಲಭ್ಯಗಳಲ್ಲಿರುವ ‘ಬೆದರಿಕೆ ಸಂಸ್ಕೃತಿ’ಯನ್ನು ಕೊನೆಗಾಣಿಸಬೇಕು ಎಂದು ಪ್ರತಿಭಟನಾನಿರತ ವೈದ್ಯರು ಒತ್ತಾಯಿಸಿದ್ದಾರೆ. ತಮ್ಮ ಈ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಶನಿವಾರ ರಾತ್ರಿ 8:30ರವರಗೆ ಗಡುವು ನೀಡಿದ್ದರು. ಆದರೆ, ಸರ್ಕಾರವು ತಮ್ಮ ಬೇಡಿಕೆಗಳನ್ನು ಇನ್ನೂ ಈಡೇರಿಸದ ಕಾರಣ, ಇದೀಗ ಆರು ಮಂದಿ ಟ್ರೈನಿ ವೈದ್ಯರು ಉಪವಾಸ ಸತ್ಯಾಗ್ರಹ ಆರಂಬಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅವರ ಹೋರಾಟಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಸಾರ್ವಜನಿಕರು, ಹಿರಿಯ ವೈದ್ಯರು ಸೇರಿದಂತೆ ಎಲ್ಲರೂ ಪ್ರತಿಭಟನಾ ಸ್ಥಳದಲ್ಲಿ ನೆರದಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಉಪವಾಸ ಸತ್ಯಾಗ್ರಹದ ವೇಳೆ ತಮ್ಮ ಸಹೋದ್ಯೋಗಿಗಳಲ್ಲಿ ಯಾರಾದರೂ ಅಸ್ವಸ್ಥರಾದರೆ ರಾಜ್ಯವೇ ಹೊಣೆಯಾಗಲಿದೆ ಎಂದು ಕಿರಿಯ ವೈದ್ಯರು ಎಚ್ಚರಿಸಿದ್ದಾರೆ.

“ಜನರ ಬೆಂಬಲವು ನಮ್ಮ ಸಹೋದ್ಯೋಗಿಯ ಭೀಕರ ಹತ್ಯೆಯ ವಿರುದ್ಧದ ನಮ್ಮ ಪ್ರತಿಭಟನೆಯನ್ನು ಮುಂದುವರಿಸಲು ಧೈರ್ಯ ಮತ್ತು ಉತ್ಸಾಹ ನೀಡಿದೆ. ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೂ, ಇನ್ನೂ ನ್ಯಾಯ ಸಿಕ್ಕಿಲ್ಲ ಎಂಬುದನ್ನು ಜನರು ಮರೆತಿಲ್ಲ” ಎಂದು ಪ್ರತಿಭಟನಾನಿರತ ವೈದ್ಯರಲ್ಲಿ ಒಬ್ಬರಾದ ದೇಬಾಶಿಶ್ ಹಲ್ದರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...