ಪಶ್ಚಿಮ ಬಂಗಾಳ | ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

Date:

ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಕೂಡಲೇ ಎಲ್ಲಾ ದಾಖಲೆಗಳನ್ನು ಸಿಬಿಐಗೆ ಒಪ್ಪಿಸುವಂತೆ ಕೋರ್ಟ್ ಸೂಚಿಸಿದೆ.

ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿ ದೇಶದಾದ್ಯಂತ ಹಲವಾರು ರಾಜ್ಯಗಳಲ್ಲಿ ವೈದ್ಯರು ಪ್ರತಿಭಟನೆ ಆರಂಭಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಂತೂ ಆಸ್ಪತ್ರೆ ಸೇವೆಯ ಮೇಲೆ ಪ್ರಭಾವ ಬೀರಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಶೆಡ್‌ಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬೆನ್ನಲ್ಲೇ ಕೋಲ್ಕತ್ತಾ ಹೈಕೋರ್ಟ್ ಈ ಪ್ರಕರಣದ ಸಿಬಿಐ ತನಿಖೆಗೆ ಆದೇಶಿಸಿದೆ. “ತನಿಖೆಯಲ್ಲಿ ಗಮನಾರ್ಹ ಪ್ರಗತಿಯಿಲ್ಲದೆ, ಸಾಕ್ಷಿ ನಾಶವಾಗುತ್ತದೆ ಎಂದು ಮೃತರ ಪೋಷಕರ ಮನವಿಯನ್ನು ನಾವು ಆಲಿಸಿದ್ದೇವೆ. ಹಾಗಾಗಿ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುತ್ತೇವೆ” ಎಂದು ಕೋರ್ಟ್ ಹೇಳಿದೆ.

ಇನ್ನು ಬೇರೆ ಸಾಮಾನ್ಯ ಸಂದರ್ಭಗಳಲ್ಲಿ ನಾವು ವರದಿಯನ್ನು ಕೇಳುತ್ತಿದ್ದೆವು. ಆದರೆ ಈ ಪ್ರಕರಣವು ವಿಚಿತ್ರವಾಗಿದೆ. ಸಮಯ ನಷ್ಟವಿಲ್ಲದೆಯೇ ಸತ್ಯವನ್ನು ಹೊರತರುವ ನಿಟ್ಟಿನಲ್ಲಿ ಸೂಕ್ತ ಆದೇಶ ನೀಡಲಾಗಿದೆ ಎಂದು ಕೋರ್ಟ್ ತಿಳಿಸಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. CBI ಹಾಗು ಬಹುತೇಕ ಕೋರ್ಟುಗಳು ವಿರೋಧಿಪಕ್ಷಗಳ ವಿರುದ್ಧ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಕಾಣಿಸುತ್ತಿರುವಾಗ CBI ನಿಂದ ನಿಷ್ಪಕ್ಷ ನ್ಯಾಯಯುತ ತನಿಖೆ ನಡೆಯುವುದು ಅನುಮಾನ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶುಕ್ರವಾರ ರಾತ್ರಿ ತನ್ನ...

ಮಧ್ಯಪ್ರದೇಶ । ಹಾಡಹಗಲೇ ಮಹಿಳೆ ಮೇಲೆ ಅತ್ಯಾಚಾರ; ಕಾಮುಕನ ಕೃತ್ಯ ನೋಡುತ್ತ ನಿಂತ ಜನ

ಕಾಮುಕನೊಬ್ಬ ಮಹಿಳೆಯ ಮೇಲೆ ಹಾಡಹಗಲೆ ಸಾರ್ವಜನಿಕ ಸ್ಥಳದಲ್ಲಿ ಅತ್ಯಾಚಾರ ಎಸಗಿರುವ ಆಘಾತಕಾರಿ...

ಕ್ರಿಸ್ಟಿಯಾನೊ ರೊನಾಲ್ಡೊ ಎಂಬ ದಾಖಲೆಗಳ ದಿಗ್ಗಜ; 900 ಗೋಲುಗಳ ಸರದಾರ

900 ಗೋಲುಗಳನ್ನು ಹೊಡೆದಿರುವ ಕ್ರಿಸ್ಟಿಯಾನೊ ರೊನಾಲ್ಡೊ, ಫುಟ್‌ಬಾಲ್‌ ಲೋಕದ ಜನಪ್ರಿಯ ಆಟಗಾರ....

ಮಾಧವಿ ಬುಚ್ ವಿರುದ್ಧ ತಿರುಗಿಬಿದ್ದ ಸೆಬಿ ಉನ್ನತಾಧಿಕಾರಿಗಳು

ಸೆಬಿ ಮುಖ್ಯಸ್ಥೆ ಮಾಧವಿ ಬುಚ್ ವಿರುದ್ಧ ಸಂಸ್ಥೆಯ ಉನ್ನತಾಧಿಕಾರಿಗಳು ತಮ್ಮ ಸಂಸ್ಥೆಯ...