ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ 10 ಎಫ್‌ಐಆರ್‌, 35 ಪ್ರಕರಣ, 200 ನೋಟಿಸ್‌ ಜಾರಿ

Date:

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಸುತ್ತ ಹಲವಾರು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಅವುಗಳನ್ನು ಭೇದಿಸುತ್ತಿರುವ ಕೋಲ್ಕತ್ತಾ ಪೊಲೀಸರು ಈವರೆಗೆ 10 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 35 ಪ್ರಕರಣಗಳನ್ನು ದಾಖಲಿಕೊಂಡಿದ್ದಾರೆ. ನ್ಯಾಯಕ್ಕೆ ಅಡ್ಡಿಪಡಿಸುವ, ಹಿಂಸಾಚಾರವನ್ನು ಪ್ರಚೋದಿಸುವ ಅಥವಾ ಸಾರ್ವಜನಿಕ ಅಶಾಂತಿಯನ್ನು ಪ್ರಚೋದಿಸುವ ಸುಳ್ಳು ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಹರಡುವುದನ್ನು ತಡೆಯಲು ಕಳೆದ 24 ಗಂಟೆಗಳಲ್ಲಿ ಹಲವರಿಗೆ 200ಕ್ಕೂ ಹೆಚ್ಚು ನೋಟಿಸ್‌ಗಳನ್ನು ಪೊಲೀಸರು ನೀಡಿದ್ದಾರೆ.

- Advertisement -

ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿಗಳು ಹೇರಳವಾಗಿ ವೈರಲ್ ಆಗುತ್ತಿವೆ. ಅವುಗಳ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ಗಳಲ್ಲಿ ಕ್ರಿಮಿನಲ್ ಪಿತೂರಿ ಆರೋಪ ಮತ್ತು ಐಟಿ ಕಾಯ್ದೆಯ ಹಲವು ಸೆಕ್ಷನ್‌ಗಳನ್ನು ಸೇರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಕರಣ ದಾಖಲಾಗಿರುವ ಆರೋಪಿಗಳಲ್ಲಿ ಪತ್ರಕರ್ತರು, ರಾಜಕಾರಣಿಗಳು, ವೈದ್ಯರು ಮತ್ತು ಇತರ ಸಾಮಾಜಿಕ ಮಾಧ್ಯಮ ಬಳಕೆದಾರರು ಸೇರಿದ್ದಾರೆ. ಪ್ರಕರಣ ಮತ್ತು ಘಟನೆಗೆ ಸಂಬಂಧಿಸಿದಂತೆ ತಪ್ಪಾದ ಮಾಹಿತಿಗಳು, ವೀಡಿಯೊಗಳು, ಧ್ವನಿ ಟಿಪ್ಪಣಿಗಳು, ನಕಲಿ ಮರಣೋತ್ತರ ವರದಿ ಸೇರಿದಂತೆ ನಾನಾ ಸುಳ್ಳುಗಳನ್ನು ಹರಿಬಿಡುಲಾಗುತ್ತಿದೆ. ಪೊಲೀಸರು ಹೆಚ್ಚಿನ ನೋಟಿಸ್‌ಗಳನ್ನು ಕಳುಹಿಸುವ ಮೂಲಕ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಕೋಲ್ಕತ್ತಾ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಅಪರಾಧದ ಬಗ್ಗೆ ತನಿಖೆಗಳು ನಡೆಯುತ್ತಿರುವಾಗ ಸುಳ್ಳು ನಿರೂಪಣೆಗಳು ಮತ್ತು ಪರಿಶೀಲಿಸದ ಮಾಹಿತಿಗಳನ್ನು ಫೇಸ್‌ಬುಕ್, ‘ಎಕ್ಸ್’ ಮತ್ತು ವಾಟ್ಸಾಪ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಕೆಲವು ಪೋಸ್ಟ್‌ಗಳು ತನಿಖೆಯ ಸತ್ಯಗಳನ್ನು ದಾರಿ ತಪ್ಪಿಸುವಂತಿವೆ. ಆಧಾರರಹಿತ ತಪ್ಪು ಮಾಹಿತಿಯಿಂದ ಉಂಟಾಗುವ ಗಂಭೀರ ಅಪಾಯಗಳನ್ನು ಎದುರಿಸುತ್ತಿರುವಾಗ ನಾವು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಲೋಕಸಭಾ ಚುನಾವಣೆ | ಮೋದಿ 173 ಭಾಷಣಗಳ ಪೈಕಿ 110 ‘ಮುಸ್ಲಿಂ ದ್ವೇಷ’ದಿಂದ ಕೂಡಿವೆ

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ನಡೆದ ಬಳಿಕ ವೈದ್ಯರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅತ್ಯಾಚಾರದಂತಹ ಕೃತ್ಯಗಳನ್ನು ಕೊನೆಗಾಣಿಸುವಂತೆ ವೈದ್ಯರು ಸೇರಿದಂತೆ ಎಲ್ಲ ಕ್ಷೇತ್ರದ ಮಹಿಳೆಯರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಕೃತ್ಯ ನಡೆದ ಬಳಿಕ ಆಸ್ಪತ್ರೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಆದಾಗ್ಯೂ, ಗುರುವಾರ ರಾತ್ರಿ, ಸುಮಾರು 40-50 ಅಪರಿಚಿತ ದುಷ್ಕರ್ಮಿಗಳ ಗುಂಪು ಆರ್‌ಜಿ ಕರ್ ಆಸ್ಪತ್ರೆಗೆ ನುಂಗಿ ಹಿಂಸಾಚಾರ ನಡೆಸಿದೆ.

“ಗೂಂಡಾಗಳು ಕ್ಯಾಂಪಸ್‌ಗೆ ನುಗ್ಗಿ ಧರಣಿ ನಿರತ ವೈದ್ಯರಿಗೆ ಥಳಿಸಿದ್ದಾರೆ. ಇದು ನಮ್ಮ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನವಾಗಿದೆ. ಹಿಂಸಾಚಾರಕ್ಕೆ ಹೆದರಿ ನಾವು ಪ್ರತಿಭಟನೆಯಿಂದ ಹಿಂದೆ ಸರಿಯುತ್ತೇವೆ ಎಂದು ಭಾವಿಸಿದ್ದಾರೆ. ಆದರೆ, ಇಂತಹ ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ನಮ್ಮ ಹೋರಾಟ ಮತ್ತಷ್ಟು ಗಟ್ಟಿಗೊಳ್ಳುತ್ತದೆ” ಎಂದು ಧರಣಿನಿರತ ವೈದ್ಯರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...