ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ರೋಗಿಗಳನ್ನು ಶಿಫ್ಟ್ ಮಾಡಿ, ಆಸ್ಪತ್ರೆಯನ್ನು ಮುಚ್ಚಿ; ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Date:

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ವೈದ್ಯರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಒದಗಿಸಲಾಗದ ಸರ್ಕಾರದ ಸಾಮರ್ಥ್ಯವನ್ನು ಪ್ರಶ್ನಿಸಿದೆ. ಆರ್‌ಜಿ ಕರ್ ಆಸ್ಪತ್ರೆಯಿಂದ ರೋಗಿಗಳನ್ನು ಸ್ಥಳಾಂತರಿಸಿ, ಆಸ್ಪತ್ರೆಯನ್ನು ಮುಚ್ಚುವುದು ಉತ್ತಮ ಎಂದು ಹೇಳಿದೆ.

- Advertisement -

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾನಿರತ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಆಗಸ್ಟ್ 14ರ ಮಧ್ಯರಾತ್ರಿ ನಡೆದ ದಾಳಿಯ ಬಗ್ಗೆ ಕೋಲ್ಕತ್ತಾ ಹೈಕೋರ್ಟ್‌ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಆಸ್ಪತ್ರೆಗಳಲ್ಲಿ ಅತ್ಯಾಚಾರ-ಕೊಲೆಯಂತಹ ಘಟನೆಗಳು ಆರೋಗ್ಯ ವೃತ್ತಿಪರರಲ್ಲಿ ಭಯ ಮತ್ತು ಅನಿಶ್ಚಿತತೆಯನ್ನು ಸೃಷ್ಟಿಸುತ್ತದೆ ಎಂದು ಹೈಕೋರ್ಟ್‌ ಒತ್ತಿ ಹೇಳಿದೆ. ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವಲ್ಲಿ ರಾಜ್ಯ ಸರ್ಕಾರವು ತೆಗೆದುಕೊಳ್ಳಬೇಕಾದ ಕ್ರಮಗಳ ಅಗತ್ಯದ ಬಗ್ಗೆ ಗಮನ ಸೆಳೆದಿದೆ.

ಹಿಂಸಾಚಾರ ಅಥವಾ ಬೆದರಿಕೆಯ ಭಯವಿಲ್ಲದೆ ಆರೋಗ್ಯ ವೃತ್ತಿಪರರು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದೆ.

“ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಕ್ಷಣದ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ...

ಪೊಲೀಸ್ ವಿರುದ್ಧ ಲೈಂಗಿಕ ಕಿರುಕುಳ ದೂರಿನ ಬೆನ್ನಲ್ಲೇ ಜಾತಿನಿಂದನೆ ಕೇಸ್: ಯೂಟ್ಯೂಬರ್ ಯುವತಿ ಬಂಧಿಸದಂತೆ ಸುಪ್ರೀಂ ಆದೇಶ

ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಯುವ ಪತ್ರಕರ್ತೆ...