ಕೋಲ್ಕತ್ತಾ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಒಂದು ವರ್ಷ: ಬೃಹತ್ ಪ್ರತಿಭಟನೆ; ಸಂತ್ರಸ್ತೆಯ ಪೋಷಕರ ಮೇಲೆ ಪೊಲೀಸರಿಂದ ಹಲ್ಲೆ

Date:

ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವೈದ್ಯರ್ಥಿನಿ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣ ನಡೆದು ಒಂವು ವರ್ಷವಾಗಿದೆ. ಆದರೆ, ಪ್ರಕರಣದ ತನಿಖೆಯು ಗಮನಾರ್ಹ ಹಂತಕ್ಕೆ ತಲುಪಿಲ್ಲ. ಹೀಗಾಗಿ, ಸಂತ್ರಸ್ತೆಯ ಪೋಷಕರು ಮತ್ತು ಬಿಜೆಪಿಗರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ ನಡೆಸಿದ್ದು, ಮಮತಾ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

- Advertisement -

ಪ್ರತಿಭಟನಾ ಮೆರವಣಿಗೆ ತೆರಳುತ್ತಿದ್ದ ವೇಳೆ, ಮಹಿಳಾ ಪೊಲೀಸರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ, ತಲೆಗೆ ಪೆಟ್ಟು ಬಿದ್ದಿದೆ. ನನ್ನ ಕೈಯಲ್ಲಿದ್ದ ಬಳೆಗಳು ಒಡೆದಿವೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ನಡೆಸಲು ನ್ಯಾಯಾಲಯವು ಅನುಮತಿ ನೀಡಿದ್ದರೂ, ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸದಂತೆ ನಮ್ಮನ್ನು ಪೊಲೀಸರು ತಡೆದಿದ್ದಾರೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ವಿದ್ಯಾಸಾಗರ್ ಸೇತುವೆ ಬಳಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಆ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರತಿಭಟನಾಕಾರರು ಯತ್ನಿಸಿದ್ದರಿಂದ, ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ನಡೆಸಿದ ಲಾಠಿಚಾರ್ಜ್‌ನಿಂದ ಸಂತ್ರಸ್ತೆಯ ಪೋಷಕರು, ಬಿಜೆಪಿ ನಾಯಕರು ಸೇರಿದಂತೆ 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

2024ರ ಆಗಸ್ಟ್‌ 9ರಂದು ಕೋಲ್ಕತ್ತದ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...