ಕೊಲ್ಕತ್ತಾ | ಅಪರಿಚಿತ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು 3 ಪ್ಲಾಸ್ಟಿಕ್​ ಚೀಲಗಳಲ್ಲಿ ಪತ್ತೆ

Date:

Advertisements

ಮೂರು ಪ್ಲಾಸ್ಟಿಕ್‌ ಚೀಲಗಳಲ್ಲಿ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಕೊಳೆತ ಸ್ಥಿತಿಯಲ್ಲಿ ಖಾಲಿ ಕಟ್ಟಡವೊಂದರಲ್ಲಿ ಪತ್ತೆಯಾದ ಭಯಾನಕ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ವಾಟ್‌ಗುಂಗೆ ಪ್ರದೇಶದ ಸಸ್ಥಿತಾಲಾ ರಸ್ತೆಯಲ್ಲಿರುವ ಸಿಐಎಸ್​ಎಫ್​ ಕ್ವಾಟರ್ಸ್‌ನ ಪಾಳು ಬಿದ್ದ ಕಟ್ಟಡದಲ್ಲಿ ಮೃತದೇಹ ಪತ್ತೆಯಾಗಿದೆ.

ಮಂಗಳವಾರ ಮಧ್ಯಾಹ್ನ ಕಟ್ಟಡದಿಂದ ದುರ್ವಾಸನೆ ಬರುತ್ತಿರುವ ಹಿನ್ನೆಲೆ, ಸ್ಥಳೀಯ ಕೆಲ ನಿವಾಸಿಗಳು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು ಬಂದಾಗ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಮೂರು ಕಪ್ಪು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಲಾಗಿದ್ದ ಮಹಿಳೆಯ ಕತ್ತರಿಸಿದ ದೇಹದ ಭಾಗಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿ ಮಾಡಿದೆ.

“ಮೂರು ಪ್ಲಾಸ್ಟಿಕ್ ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಪರಿಚಿತ ಮಹಿಳೆಯ ಕೊಳೆತ ದೇಹದ ಭಾಗಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆಘಾತವನ್ನುಂಟು ಮಾಡಿದೆ. ಮಹಿಳೆಯ ದೇಹದ ಇನ್ನೂ ಹಲವಾರು ಭಾಗಗಳು ಕಾಣೆಯಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಮಹಿಳೆ ವಯಸ್ಸು 30-35ರ ಆಸುಪಾಸು ಇರಬಹುದು ಅಂದಾಜಿಸಲಾಗಿದೆ. ಆಕೆಯ ಹಣೆ ಮೇಲೆ ಸಿಂಧೂರವಿದ್ದ ಕಾರಣ ಮದುವೆಯಾಗಿರಬಹುದು ಎಂದು ಅಂದಾಜಿಸಿದ್ದಾರೆ. ಮಹಿಳೆಯನ್ನು ಆ ರೀತಿ ಭಯಾನಕವಾಗಿ ಹತ್ಯೆ ಮಾಡಿರುವ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಂಗಳವಾರ ತಡರಾತ್ರಿವರೆಗೂ ಪೊಲೀಸರು ಮಹಿಳೆಯ ಗುರುತು ಪತ್ತೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಇದುವರೆಗೂ ತಿಳಿದುಬಂದಿಲ್ಲ.

“ನಾವು ಮೂರು ಪ್ಲಾಸ್ಟಿಕ್ ಚೀಲಗಳಲ್ಲಿನ ಅಪರಿಚಿತ ಮಹಿಳೆಯ ದೇಹದ ಭಾಗಗಳನ್ನು ವಶಪಡಿಸಿಕೊಂಡಿದ್ದೇವೆ. ಸಂತ್ರಸ್ತೆಯ ಹಣೆಯ ಮೇಲೆ ಸಿಂಧೂರವಿದ್ದು, ಅವಳು ಮದುವೆಯಾಗಿರಬಹುದು ಎಂದು ಇದು ಸೂಚಿಸುತ್ತದೆ. ಚೀಲದೊಳಗೆ ಇಟ್ಟಿಗೆ ಇತ್ತು. ಪ್ಲಾಸ್ಟಿಕ್ ಚೀಲಗಳನ್ನು ನದಿ ಅಥವಾ ಕಾಲುವೆಗೆ ಎಸೆಯಲು ಪ್ರಯತ್ನಿಸಲಾಗಿದೆ ಎಂದು ತಿಳಿದುಬಂದಿದೆ” ಎಂದು ತನಿಖೆಯಲ್ಲಿ ಸ್ಥಳೀಯ ವಾಟ್‌ಗುಂಗೆ ಪೊಲೀಸರಿಗೆ ಸಹಾಯ ಮಾಡುತ್ತಿರುವ ಪತ್ತೇದಾರಿ ವಿಭಾಗದ ನರಹತ್ಯೆ ವಿಭಾಗದ ತನಿಖಾಧಿಕಾರಿ ಹೇಳಿದರು.

“ಅಪರಿಚಿತ ಮಹಿಳೆಯ ಕೈಗಳು, ಪಾದಗಳು ಹಾಗೂ ದೇಹದ ಹೊಟ್ಟೆಯ ಭಾಗ ಕಾಣೆಯಾಗಿದೆ” ಎಂದು ಜಂಟಿ ಸಿಪಿ (ಅಪರಾಧ) ಸೈಯದ್ ವಕ್ವಾರ್ ರಜಾ ಖಚಿತಪಡಿಸಿದ್ದಾರೆ.

ಮಹಿಳೆಯನ್ನು ಅದೇ ಪ್ರದೇಶದಲ್ಲಿ ಕೊಲೆ ಮಾಡಲಾಗಿದೆಯೇ ಅಥವಾ ಬೇರೆಡೆಗೆ ಕೊಲೆ ಮಾಡಿ ಅಲ್ಲಿ ತಂದು ಎಸೆಯಲಾಗಿದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ. ಚಲಿಸುವ ವಾಹನದಿಂದ ಯಾರೋ ಈ ಚೀಲಗಳನ್ನು ಎಸೆದಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ. ಕೋಲ್ಕತ್ತಾ ಪೊಲೀಸ್‌ನ ನರಹತ್ಯೆ ವಿಭಾಗದ ಅಧಿಕಾರಿಗಳು ಕೂಡ ಸ್ನಿಫರ್ ಡಾಗ್‌ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಪಿಎಸ್​ಸಿ ಸದಸ್ಯತ್ವ ಕೊಡಿಸುತ್ತೇವೆಂದು ₹4 ಕೋಟಿ ವಂಚನೆ; ನಾಲ್ವರ ಬಂಧನ

ಕಟ್ಟಡದ ಒಳಗೆ ಹೋದ ಸ್ಥಳೀಯರು ಪ್ಲಾಸ್ಟಿಕ್ ಚೀಲಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಡಿಸಿ ಹರಿಕೃಷ್ಣ ರೈ ತಿಳಿಸಿದ್ದಾರೆ.

“ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ದೇಹದ ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಹಾಕಿ ನಾನಾ ಸ್ಥಳಗಳಲ್ಲಿ ಎಸೆದಿದ್ದಾರೆ ಎಂದು ತೋರುತ್ತಿದೆ. ನಾವು ಆಕೆಯ ಗುರುತನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ. ದೇಹದ ಇತರ ಭಾಗಗಳನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಅವರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X