ಕೋಲ್ಕತ್ತಾ ಟಿಎಂಸಿ ಕಚೇರಿ ಧ್ವಂಸ; ‘ಬಿಜೆಪಿ ಗೂಂಡಾಗಳಿಂದ ದಾಳಿ’ – ಅಭಿಷೇಕ್ ಬ್ಯಾನರ್ಜಿ ಆರೋಪ

Date:

ಕೋಲ್ಕತ್ತಾದ ಕ್ಯಾಮ್ಯಾಕ್ ಸ್ಟ್ರೀಟ್‌ನಲ್ಲಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಯ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿ, ಧ್ವಂಸಗೊಳಿಸಿದ್ದಾರೆ ಎಂದು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

- Advertisement -

ಅಭಿಷೇಕ್ ಬ್ಯಾನರ್ಜಿ ತಮ್ಮ ಸಾಮಾಜಿಕ ಜಾಲತಾಣ ‘X’ ನಲ್ಲಿ ಈ ಸಂಬಂಧ ಸಿಸಿಟಿವಿ ದೃಶ್ಯಾವಳಿ ಹಂಚಿಕೊಂಡಿದ್ದಾರೆ. ಗುರುವಾರ ಬೆಳಗಿನ ಜಾವ ಸುಮಾರು 4:30ರ ವೇಳೆಗೆ ಮಾರಕಾಸ್ತ್ರಗಳನ್ನು ಹಿಡಿದು ಬಂದ ದುಷ್ಕರ್ಮಿಗಳ ಗುಂಪು ಕಚೇರಿಗೆ ನುಗ್ಗಿದೆ. ಕಚೇರಿಯಲ್ಲಿದ್ದ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದೆ. ಅಲ್ಲದೆ, ಪೀಠೋಪಕರಣಗಳು, ಟಿವಿ ಸೇರಿದಂತೆ ಹಲವು ಇಲೆಕ್ಟ್ರಾನಿಕ್ ಸಾಧನಗಳನ್ನು ಧ್ವಂಸಗೊಳಿಸಿ ಅದನ್ನು ಸಾಗಿಸಿದ್ದಾರೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನೂ ಓದಿ: ‘ನನ್ನ ಹಾಗೂ ಅಭಿಷೇಕ್ ಬ್ಯಾನರ್ಜಿ ಜೀವಕ್ಕೆ ಬಿಜೆಪಿಯಿಂದ ಅಪಾಯ’: ಮಮತಾ ಬ್ಯಾನರ್ಜಿ

ಇನ್ನು ದಾಳಿಯ ಸಮಯದಲ್ಲಿ ಕೊಲ್ಕತ್ತಾ ಪೊಲೀಸರಿಗೆ ತುರ್ತು ಕರೆ ಹಾಗೂ ಇಮೇಲ್ ಮೂಲಕ ಮಾಹಿತಿ ನೀಡಿದರೂ, ಸುಮಾರು ಎರಡು ಗಂಟೆಗಳ ಕಾಲ ಯಾವುದೇ ಸೂಕ್ತ ಸ್ಪಂದನೆ ಸಿಗಲಿಲ್ಲ ಎಂದು ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಾಜ್ಯಪಾಲರು, ಕೇಂದ್ರ ಗೃಹ ಸಚಿವಾಲಯ ಹಾಗೂ ಕಲ್ಕತ್ತಾ ಹೈಕೋರ್ಟ್ ತಕ್ಷಣ ಗಮನಹರಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಘಟನೆಯ ಕುರಿತು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿರುವ ಅಭಿಷೇಕ್, “ಇದು ರಾಜಕೀಯ ಗೂಂಡಾಗಿರಿ” ಎಂದು ಬಣ್ಣಿಸಿದ್ದಾರೆ. ಇನ್ನೊಂದೆಡೆ, ಈ ಆರೋಪಗಳನ್ನು ಬಿಜೆಪಿ ಸಂಪೂರ್ಣವಾಗಿ ತಳ್ಳಿಹಾಕಿದೆ. “ಟಿಎಂಸಿ ತನ್ನ ರಾಜಕೀಯ ಹಿತಾಸಕ್ತಿಗಾಗಿ ಹಾಗೂ ಸುದ್ದಿಯಲ್ಲಿರಲು ಈ ನಾಟಕವನ್ನು ಸೃಷ್ಟಿಸಿದೆ. ಈ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ” ಎಂದು ಬಿಜೆಪಿ ನಾಯಕರು ಪ್ರತ್ಯಾರೋಪ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಕೋಲ್ಕತ್ತಾ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಈಗಾಗಲೇ ಆರು ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...

‘ವೋಟ್ ಚೋರಿ’ಗೆ ಪ್ರಧಾನಿ ಮೋದಿ, ಅಮಿತ್ ಶಾ, ಸಿಸಿಇ ಸೂಕ್ತ ಬೆಲೆ ತೆರಲಿದ್ದಾರೆ: ಗೋವಾದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ವ್ಯವಸ್ಥಿತವಾದ ದಾಳಿ ನಡೆಯುತ್ತಿದ್ದು, ಮತಗಳ ಕಳವು...

ಗ್ವಾಲಿಯರ್ ಭೀಕರ ಅಪಘಾತ: ಎಸ್‌ಪಿ, 8 ಪೋಲಿಸ್ ಸಿಬ್ಬಂದಿ ಅಮಾನತು; ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಶೀತ್ಲಾ ಮಾತಾ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ ಸಮೂಹದ ಮೇಲೆ...