ಲಖೀಂಪುರ್ ಖೇರಿ ಪ್ರಕರಣ: ವಿಚಾರಣಾ ನ್ಯಾಯಾಧೀಶರ ಮೇಲೆ ಸಂತ್ರಸ್ತರಿಗೆ ಅನುಮಾನ; ಹೈಕೋರ್ಟ್ ಪರಿಶೀಲನೆಗೆ ಸುಪ್ರೀಂ ಸೂಚನೆ

Date:

ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಧೀಶರ ನಡವಳಿಕೆ ಮತ್ತು ಸಾರ್ವಜನಿಕ ಅಭಿಯೋಜಕರ ಬದಲಾವಣೆ ಕುರಿತು ಸಂತ್ರಸ್ತರು ಗಂಭೀರ ಆಕ್ಷೇಪಣೆಗಳನ್ನು ಎತ್ತಿದ್ದಾರೆ. ಈ ಆಕ್ಷೇಪಣೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

- Advertisement -

ಸಂತ್ರಸ್ತರ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ. ಸಂತ್ರಸ್ತರ ಆಕ್ಷೇಪಣೆಗಳನ್ನು ಪರಿಶೀಲಿಸುವಂತೆ ಹೈಕೋರ್ಟ್‌ಗೂ, ಪ್ರಕರಣದ ವಿಚಾರಣೆಯನ್ನು ಅನುಭವಸ್ಥ ಹಿರಿಯ ಸಾರ್ವಜನಿಕ ಅಭಿಯೋಜಕರಿಗೆ (ಪಬ್ಲಿಕ್ ಪ್ರಾಸಿಕ್ಯೂಟರ್) ಹಸ್ತಾಂತರಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರಕ್ಕೂ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

2021ರ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಲ್ವರು ರೈತರು ಸೇರಿದಂತೆ ಎಂಟು ಜನರ ಮೇಲೆ ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಕಾರು ಹರಿದಿತ್ತು. ಘಟನೆಯಲ್ಲಿ ಎಂಟು ಮಂದಿಯೂ ಸಾವನ್ನಪ್ಪಿದ್ದರು. ಉದ್ದೇಶಪೂರ್ಣವಾಗಿಯೇ ಕಾರು ಹರಿಸಿ ಕೊಂದಿದ್ದಾರೆ ಎಂದು ಆಶಿಶ್‌ ಮಿಶ್ರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಆದರೆ, ನ್ಯಾಯಾಧೀಶರ ನಡವಳಿಕೆಗಳು ಆರೋಪಿಗಳ ಪರವಾಗಿವೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಸಂತ್ರಸ್ತರು ಮತ್ತು ದೂರುದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಪ್ರಸ್ತುತ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ನಡೆ ಆಘಾತಕಾರಿಯಾಗಿದೆ.  ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯ ಪ್ರಮಾಣಪತ್ರ ಸಲ್ಲಿಸಿದ್ದ ಪ್ರತ್ಯಕ್ಷದರ್ಶಿ ಸಾಕ್ಷಿಯೊಬ್ಬರಿಗೆ ನ್ಯಾಯಾಧೀಶರು ತಕ್ಷಣವೇ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ಘಟನಾ ಸ್ಥಳದ ನಕ್ಷೆ ನ್ಯಾಯಾಲಯದ ದಾಖಲೆಗಳಿಂದ ನಾಪತ್ತೆಯಾಗಿದೆ” ಎಂದು ಆರೋಪಿಸಿದ್ದಾರೆ.

Advertisements

ಅಲ್ಲದೆ, “ಪ್ರಕರಣವನ್ನು ಪರಿಣಾಮಕಾರಿಯಾಗಿ ನಡೆಸುತ್ತಿದ್ದ ಪ್ರಾಸಿಕ್ಯೂಟರ್ ಅವರನ್ನು ಏಕಾಏಕಿ ಬದಲಾಯಿಸಿ, ಅನುಭವವಿಲ್ಲದ ಹೊಸ ಪ್ರಾಸಿಕ್ಯೂಟರ್ ಅವರನ್ನು ನೇಮಿಸಲಾಗಿದೆ. ಈ ನ್ಯಾಯಾಧೀಶರು ಇತರ ನ್ಯಾಯಾಲಯಗಳಲ್ಲಿದ್ದ ಎನ್‌ಡಿಪಿಎಸ್ ಮತ್ತು ಎಸ್‌ಸಿ/ಎಸ್‌ಟಿ ಪ್ರಕರಣಗಳನ್ನು ತಮ್ಮ ಪೀಠಕ್ಕೆ ವರ್ಗಾಯಿಸಿಕೊಂಡು, ಅಂತಿಮ ಹಂತದಲ್ಲಿದ್ದ ಪ್ರಕರಣಗಳಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸುತ್ತಿದ್ದಾರೆ” ಎಂದು ಪ್ರಶಾಂತ್ ಭೂಷಣ್‌ ಅವರು ಸುಪ್ರೀಂ ಕೋರ್ಟ್‌ನ ಗಮನಕ್ಕೆ ತಂದಿದ್ದಾರೆ.

ವಾದವನ್ನು ಆಲಿಸಿದ ಪೀಠವು, “ಪ್ರಕರಣವನ್ನು ನಿಗದಿತ ಸಮಯದೊಳಗೆ ಮುಕ್ತಾಯಗೊಳಿಸಬೇಕೆಂಬ ಸುಪ್ರೀಂ ಕೋರ್ಟ್ ಒತ್ತಡದಿಂದಾಗಿ ವಿಚಾರಣಾ ನ್ಯಾಯಾಧೀಶರು ಇಂತಹ ನಿರ್ಧಾರ ತೆಗೆದುಕೊಂಡಿರಬಹುದು” ಎಂದು ಆರಂಭದಲ್ಲಿ ಅಭಿಪ್ರಾಯಪಟ್ಟಿತು. ಆದರೆ, ಪ್ರಾಸಿಕ್ಯೂಟರ್ ಪ್ರಮುಖ ಸಾಕ್ಷಿಗಳನ್ನು ಕೈಬಿಡುತ್ತಿರುವ ವಿಚಾರಕ್ಕೆ ನ್ಯಾಯಮೂರ್ತಿ ಬಾಗ್ಚಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಪ್ರಮುಖ ಸಾಕ್ಷಿಗಳನ್ನು ಬಿಟ್ಟುಬಿಡುವುದು ನ್ಯಾಯಸಮ್ಮತ ವಿಚಾರಣೆಯಾಗುವುದಿಲ್ಲ” ಎಂದು ಸರ್ಕಾರದ ವಕೀಲರಿಗೆ ನೆನಪಿಸಿದರು.

“ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆಗಳ ಪ್ರತಿಯನ್ನು ಅಲಹಾಬಾದ್ ಹೈಕೋರ್ಟ್‌ಗೆ ತಕ್ಷಣವೇ ರವಾನಿಸಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಈ ವಿಷಯವನ್ನು ಸ್ವತಃ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ತೆಗೆದುಕೊಂಡ ಕ್ರಮದ ಕುರಿತು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಬೇಕು” ಎಂದು ಪೀಠವು ನಿರ್ದೇಶನ ನೀಡಿದೆ.

ಅಲ್ಲದೆ, “ಪ್ರಕರಣವನ್ನು ಯಾವುದೇ ಲೋಪವಿಲ್ಲದೆ ನಡೆಸಲು ತಕ್ಷಣವೇ ಅನುಭವಸ್ಥ ಹಿರಿಯ ಸಾರ್ವಜನಿಕ ಅಭಿಯೋಜಕರನ್ನು ನೇಮಿಸಬೇಕು” ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ)...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...