ಭೂ ವಿವಾದ | ಮೂಲ ಅರ್ಜಿದಾರರು ಸತ್ತಿದ್ದಾರೆಂದು 66 ವರ್ಷಗಳ ಬಳಿಕ ಪ್ರಕರಣ ರದ್ದುಗೊಳಿಸಿದ ಕೋರ್ಟ್‌

Date:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂ ವಿವಾದ ಪ್ರಕರಣವೊಂದು ಬರೋಬ್ಬರಿ 66 ವರ್ಷಗಳ ಕಾಲ ವಿಚಾರಣೆ ನಡೆದಿದೆ. ಆದಾಗ್ಯೂ, ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯ ದೊರೆತಿಲ್ಲ. ಬದಲಾಗಿ, ವಿವಾದ ಸಂಬಂಧ ಅರ್ಜಿ ಸಲ್ಲಿಸಿದ್ದ ಮೂಲ ಅರ್ಜಿದಾರರು ಸಾವನ್ನಪ್ಪಿದ್ದಾರೆ ಎಂಬ ಕಾರಣಕ್ಕೆ, ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.

- Advertisement -

1959ರಲ್ಲಿ ಭೂ ವಿವಾದ ಸಂಬಂಧಿತ ಪ್ರಕರಣ ದಾಖಲಾಗಿತ್ತು. ಅರ್ಜಿದಾರ ಮೋಹನ್ ಲಾಲ್ ಎಂಬವರು ದೆಹಲಿಯ ಬಸಾಯಿ ದಾರಾಪುರ ಪ್ರದೇಶದಲ್ಲಿರುವ ತಮ್ಮ ಭೂಮಿಯಲ್ಲಿ ಡೆವಪರ್‌ಗಳು ಮನೆ ಕಟ್ಟಿದ್ದಾರೆಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಅರ್ಜಿ ದಾಖಲಿಸಿದ್ದ ಸಮಯದಲ್ಲಿ, “ತಮ್ಮ ಒಪ್ಪಿಗೆ ಇಲ್ಲದೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆ ಭೂಮಿಯಲ್ಲಿ ಡೆವಲಪರ್‌ಗಳು ಕಾರ್ಯಾಚರಣೆ ನಡೆಸದಂತೆ ತಡೆಯಾಜ್ಞೆ ನೀಡಬೇಕು. ತಮಗೆ ಪರಿಹಾರ ಕೊಡಿಸಬೇಕು” ಎಂದು ಅರ್ಜಿದಾರ ಮೋಹನ್ ಲಾಲ್ ವಾದಿಸಿದ್ದರು.

ಆ ಪ್ರಕರಣವನ್ನು ಪ್ರಸ್ತುತ ದೆಹಲಿಯ ನಗರ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಕಪಿಲ್ ಗುಪ್ತಾ ವಿಚಾರಣೆ ನಡೆಸುತ್ತಿದ್ದರು. ಆದಾಗ್ಯೂ, ಈಗ ಮೂಲ ಅರ್ಜಿದಾರರು (ಮೋಹನ್ ಲಾಲ್) ಸಾವನ್ನಪ್ಪಿದ್ದು, “ಅವರು ಪರಿಹಾರವನ್ನು ಮಾತ್ರವೇ ಕೋರಿದ್ದರಿಂದ, ಇಂತಹ ಪರಿಸ್ಥಿತಿಯಲ್ಲಿ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಪ್ರಕರಣವು ವಜಾಗೊಳಿಸಲು ಅರ್ಹವಾಗಿದೆ” ಎಂದಿರುವ ನ್ಯಾಯಾಧೀಶರು, ಪ್ರಕರಣವನ್ನು ರದ್ದುಗೊಳಿಸಿದ್ದಾರೆ.

“ಮೂರು ತಲೆಮಾರುಗಳ ಕಾಲ ನಡೆದ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಲು ಕ್ರಮ ತೆಗೆದುಕೊಂಡ ನ್ಯಾಯಾಧೀಶರಿಗೆ ಅಭಿನಂದನೆ ಸಲ್ಲಿಸಬೇಕು” ಎಂದು ಪ್ರತಿವಾದಿ ಪರ ವಕೀಲ ಅಮಿತ್ ಕುಮಾರ್ ಹೇಳಿದ್ದಾರೆ.

ಆದಾಗ್ಯೂ, ಮೊಕದ್ದಮೆ ಇನ್ನೂ ಸಂಪೂರ್ಣವಾಗಿ ಮುಕ್ತಾಯಗೊಂಡಿಲ್ಲ. ಏಕೆಂದರೆ ವಾದಿಗಳು ಉನ್ನತ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...