ಕಲ್ಲೀಕೋಟೆ ವಿವಿ ಪರೀಕ್ಷೆಯಲ್ಲಿ ಕಳೆದ ವರ್ಷದ ಪ್ರಶ್ನೆ ಪತ್ರಿಕೆಯೇ ಮತ್ತೆ ಪ್ರತ್ಯಕ್ಷ!

Date:

ಕೇರಳದ ಕಲ್ಲೀಕೋಟೆ ವಿಶ್ವವಿದ್ಯಾಲಯದಲ್ಲಿ ನಡೆದ ಮಲ್ಟಿ ಡಿಸಿಪ್ಲಿನರಿ ಕೋರ್ಸ್ (ಎಂಡಿಸಿ) ಪದವಿಯ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಕಳೆದ ವರ್ಷ ಬಳಸಲಾಗಿದ್ದ ಪ್ರಶ್ನೆ ಪತ್ರಿಕೆಯನ್ನೇ ಪುನರಾವರ್ತನೆಯಾಗಿ ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಇದು ಪರೀಕ್ಷೆಯ ವಿಶ್ವಾಸಾರ್ಹತೆ ಕುರಿತು ವಿದ್ಯಾರ್ಥಿ ಮತ್ತು ಬೋಧಕ ವಲಯದಲ್ಲಿ ತೀವ್ರ ಚರ್ಚೆಗೊಳಗಾಗಿದೆ.

- Advertisement -

ನವೆಂಬರ್ 25ರಂದು ಎಂಡಿಸಿ ಸೈಕಾಲಜಿಯ ಮೊದಲ ಸೆಮಿಸ್ಟರ್‌ನ ‘ಆರ್ಟ್ ಆಫ್ ಸ್ಟ್ರೆಸ್ ಮ್ಯಾನೇಜ್‌ಮೆಂಟ್’ ಪರೀಕ್ಷೆ ನಡೆದಿದೆ. ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಪ್ರಶ್ನೆ ಪತ್ರಿಕೆಯಲ್ಲಿ ಕಳೆದ ವರ್ಷದ ಪರೀಕ್ಷೆಯಲ್ಲಿ ನೀಡಲಾಗಿದ್ದ ಪಶ್ನೆಗಳೇ ಯಥಾಪ್ರಕಾರ ಇದ್ದವೆಂದು ಹೇಳಲಾಗಿದೆ. ಕಳೆದ ವರ್ಷದ ಪ್ರಶ್ನೆಗಳನ್ನೇ ಮತ್ತೆ ನೀಡಲಾಗಿದೆ ಎಂದು ಪರೀಕ್ಷಾ ನಿಯಂತ್ರಣ ಕಚೇರಿ ದೃಢಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆಯು ಬೆಳಕಿಗೆ ಬಂದ ಬಳಿಕ, ಹೊಸ ಪರೀಕ್ಷೆ ನಡೆಸಬೇಕೇ ಅಥವಾ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಅಧ್ಯಯನ ಮಂಡಳಿ ನಿರ್ಧಾರ ಕೈಗೊಳ್ಳಲಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ವೇಳೆ ಶಿಕ್ಷಕರು ಸಾಮಾನ್ಯವಾಗಿ ಮೂರು ಸೆಟ್‌ಗಳನ್ನು ಸಲ್ಲಿಸುತ್ತಾರೆ. ಆದರೆ ಈ ಬಾರಿ ಸಲ್ಲಿಸಲಾದ ಸೆಟ್‌ಗಳಲ್ಲಿ ಒಂದು ಕಳೆದ ವರ್ಷದ ನಕಲು ಆಗಿದ್ದು, ಕ್ರಾಸ್-ಚೆಕಿಂಗ್ ಪ್ರಕ್ರಿಯೆಯಲ್ಲಿ ಇದು ಪತ್ತೆಯಾಗದೇ ಉಳಿದಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...