ದೆಹಲಿಯಲ್ಲಿ ಲಾಠಿಚಾರ್ಜ್ | ಮೋದಿ ದೇಶದ ಇತಿಹಾಸದಲ್ಲೇ ಅತ್ಯಂತ ಯುವವಿರೋಧಿ ಪ್ರಧಾನಿ: ರಾಹುಲ್ ಗಾಂಧಿ

Date:

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗ ಮತ್ತು ಲಾಠಿ ಚಾರ್ಜ್ ನಡೆಸಿರುವುದನ್ನು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು “ಭಾರತದ ಇತಿಹಾಸದಲ್ಲೇ ಅತ್ಯಂತ ಯುವವಿರೋಧಿ ಪ್ರಧಾನಿ” ಎಂದು ಟೀಕಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ Xನಲ್ಲಿ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಈ ದೇಶದಲ್ಲಿ ಬಹುಪಾಲು ಯುವಕರಿದ್ದಾರೆ. ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಯುವಕರು ಅಪರಾಧಿಗಳಲ್ಲ. ಅವರು ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ. ಅವರಿಗೆ ಗೌರವ ನೀಡುವ, ನ್ಯಾಯಯುತ ಮತ್ತು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಶಿಕ್ಷಣ ವ್ಯವಸ್ಥೆ ಬೇಕೆಂಬುದೇ ಅವರ ಬೇಡಿಕೆ. ನ್ಯಾಯಯುತ ಶಿಕ್ಷಣ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ವಿದ್ಯಾರ್ಥಿಗಳು ಮಾಡುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಸರ್ಕಾರ ಮತ್ತು ಪೊಲೀಸರು ನಡೆದುಕೊಳ್ಳುತ್ತಿರುವ ರೀತಿ ಅಸಹ್ಯಕರವಾಗಿದೆ. ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಪ್ರಯೋಗ ಮಾಡುವುದು, ಲಾಠಿ ಚಾರ್ಜ್ ನಡೆಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ. ಇದು ಭಾರತದ ಸಂಪ್ರದಾಯವೂ ಅಲ್ಲ. ಪ್ರತಿಭಟನಾಕಾರರ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಪ್ರಧಾನಿ ಮೋದಿ ಅವುಗಳನ್ನು ಒಪ್ಪಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಶಿಕ್ಷಣ ವ್ಯವಸ್ಥೆ ಕುರಿತು ಹಲವು ವರ್ಷಗಳಿಂದ ಕಾಂಗ್ರೆಸ್ ಪ್ರಶ್ನೆ ಎತ್ತುತ್ತಿದ್ದು, ದೇಶದ ಶಿಕ್ಷಣ ವ್ಯವಸ್ಥೆಯನ್ನು ಆರ್‌ಎಸ್‌ಎಸ್ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ ಎಂದು ಆರೋಪಿಸಿದರು. “ದೇಶದ ಎಲ್ಲಾ ಪ್ರಮುಖ ಸಂಸ್ಥೆಗಳು ಒಂದೇ ಸಂಘಟನೆಯ ನಿಯಂತ್ರಣದಲ್ಲಿವೆ ಎಂಬ ಭಾವನೆ ಮೂಡಿದೆ. ಯುವಕರ ಅಸಮಾಧಾನ ಸಹಜ ಪ್ರತಿಕ್ರಿಯೆಯಾಗಿದ್ದು, ಅದನ್ನು ಗೌರವಿಸಬೇಕು” ಎಂದರು.

ಪ್ರತ್ಯೇಕ ಪೋಸ್ಟ್‌ನಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧವೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. “ದೇಶದ ಇತಿಹಾಸದಲ್ಲೇ ಯುವಕರಿಗೆ ವಿರೋಧಿಯಾದ ಪ್ರಧಾನಿಯಾಗಿರುವ ಮೋದಿ, ವಿಫಲ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕೇಳುವ ಧೈರ್ಯವನ್ನೂ ತೋರಿಸುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಹರಿದ್ವಾರ | ಅನ್ಯ ಧರ್ಮದ ಸ್ನೇಹಿತೆಯನ್ನು ಭೇಟಿ ಮಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ; ನಾಯಿ ಬೆಲ್ಟ್‌ ಕಟ್ಟಿ ಅವಮಾನ

“152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. 7.5 ಕೋಟಿ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ. ಆದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮವಾಗಿಲ್ಲ. ಶಿಕ್ಷೆಯಾಗಿರುವುದು ಕಷ್ಟಪಟ್ಟು ಓದುತ್ತಿರುವ ಯುವಕರಿಗಷ್ಟೇ” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿದ್ದು, ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿದ ವಿದ್ಯಾರ್ಥಿಗಳಿಗೆ ಅಶ್ರುವಾಯು ಮತ್ತು ಲಾಠಿ ಚಾರ್ಜ್ ಮೂಲಕ ಉತ್ತರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ, ಪ್ರತಿಭಟನೆಯ ವೇಳೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ಬಂಧಿಸಲಾಗಿದೆ ಎಂಬ ಪಕ್ಷದ ಆರೋಪವನ್ನು ದೆಹಲಿ ಪೊಲೀಸರು ತಳ್ಳಿಹಾಕಿದ್ದು, ಅವರು ವೇದಿಕೆಯಲ್ಲೇ ಇದ್ದರು, ಬಂಧನದ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163ರಡಿ ನಿಷೇಧಾಜ್ಞೆ ಜಾರಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...