ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ!

Date:

ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ ಎಂದು ಹೈಕೋರ್ಟ್ ನ್ಯಾಯಾಧೀಶ ಹೇಳಿದ್ದು ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂತಹ ನ್ಯಾಯಾಧೀಶರಿಂದ ಅಲ್ಪಸಂಖ್ಯಾತ ಸಮುದಾಯವು ಹೇಗೆ ನ್ಯಾಯವನ್ನು ನಿರೀಕ್ಷಿಸುವುದು” ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

- Advertisement -

ಭಾನುವಾರ ಪ್ರಯಾಗರಾಜ್‌ನಲ್ಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯತೆ ಕುರಿತು ಉಪನ್ಯಾಸ ನೀಡಿದರು. ಈ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್‌ನ ಕಾನೂನು ಘಟಕ ಆಯೋಜಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಬೆಂಗಳೂರು | ಅಕ್ರಮ ವಾಸ; ಪಾಕಿಸ್ತಾನ ಪ್ರಜೆ ಸೇರಿ ನಾಲ್ವರ ಬಂಧನ

“ಇದು ಹಿಂದೂಸ್ತಾನ, ಈ ದೇಶವು ಹಿಂದೂಸ್ತಾನದಲ್ಲಿ ವಾಸಿಸುವ ಬಹುಸಂಖ್ಯಾತರ ಇಚ್ಛೆಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಇದು ಕಾನೂನು. ಹೈಕೋರ್ಟ್ ನ್ಯಾಯಾಧೀಶರಾಗಿ ನೀವು ಹೀಗೆ ಹೇಳುತ್ತಿದ್ದೀರಾ ಎಂದು ನೀವು ಹೇಳುವಂತಿಲ್ಲ” ಎಂದು ಹೇಳಿದರು.

“ನಮ್ಮ ಕಾನೂನು ಬಹುಸಂಖ್ಯಾತರ ಪ್ರಕಾರ ಕಾರ್ಯನಿರ್ವಹಿಸುತ್ತದೆ. ಅದು ಹೇಗೆ ಎಂಬುದನ್ನು ಕುಟುಂಬ ಮತ್ತು ಸಮಾಜದ ಹಿನ್ನೆಲೆಯಲ್ಲಿ ನೋಡಿ. ಬಹುಸಂಖ್ಯಾತರ ಕಲ್ಯಾಣ ಮತ್ತು ಸಂತೋಷಕ್ಕೆ ಯಾವುದು ಕಾರಣವಾಗುತ್ತದೆಯೋ ಅದನ್ನು ಮಾತ್ರ ಒಪ್ಪಿಕೊಳ್ಳಲಾಗುತ್ತದೆ” ಎಂದು ತನ್ನ ಉಪನ್ಯಾಸದಲ್ಲಿ ತಿಳಿಸಿದರು.

ನ್ಯಾಯಾಧೀಶರಿಗೆ ನೆಟ್ಟಿಗರ ತರಾಟೆ

ನ್ಯಾಯಾಧೀಶರ ಹೇಳಿಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ನ್ಯಾಯಾಧೀಶನ ವಿರುದ್ಧವಾಗಿ ಬಾರ್‌ ಬೆಂಚ್ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ. “ಪ್ರಜಾಪ್ರಭುತ್ವ ದೇಶದಲ್ಲಿ ಇಂತಹ ನ್ಯಾಯಾಧೀಶರ ವಕೀಲಿ ಪರವಾನಗಿಯನ್ನು ರದ್ದು ಮಾಡಬೇಕು” ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ನ್ಯಾಯಾಧೀಶರ ಹೇಳಿಕೆಯನ್ನು ಟೀಕಿಸಿದ ಹೈದರಾಬಾದ್ ಸಂಸದ ಓವೈಸಿ, “ಭಾರತದ ಸಂವಿಧಾನವು ತನ್ನ ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತವನ್ನು ನಿರೀಕ್ಷಿಸುತ್ತದೆ” ಎಂದು ಹೇಳಿದರು.

“ವಿಎಚ್‌ಪಿಯನ್ನು ವಿವಿಧ ಸಂದರ್ಭಗಳಲ್ಲಿ ನಿಷೇಧಿಸಲಾಗಿದೆ. ಇದು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿದೆ. ಅಂತಹ ಸಂಘಟನೆಯ ಸಮಾವೇಶದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಭಾಗವಹಿಸಿದ್ದು ದುರದೃಷ್ಟಕರ. ನ್ಯಾಯಾಧೀಶರಿಗೆ ಸಂವಿಧಾನವು ನ್ಯಾಯಾಂಗವು ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತವನ್ನು ನಿರೀಕ್ಷಿಸುತ್ತದೆ ಎಂದು ನೆನೆಪಿಸುವುದು ಮುಖ್ಯವಾಗಿದೆ” ಎಂದು ತನ್ನ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...