ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನನ್ನು ಅಮಾನತುಗೊಳಿಸಿದ ಬಾರ್ ಕೌನ್ಸಿಲ್

Date:

ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ನಡೆಯುತ್ತಿದ್ದ ವೇಳೆ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಪ್ರಕರಣದಲ್ಲಿ ವಕೀಲ ರಾಕೇಶ್ ಕಿಶೋರ್ ನನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಅಮಾನತುಗೊಳಿಸಿದೆ.

- Advertisement -

ನೂತನ ಆದೇಶದ ಅನ್ವಯ ಇನ್ಮುಂದೆ ಕಿಶೋರ್ ಗೆ ದೇಶದ ಯಾವುದೇ ನ್ಯಾಯಾಲಯದಲ್ಲಿ ವಕಾಲತ್ತು ಮಾಡುವುದಕ್ಕೆ ಅಥವಾ ವಾದಿಸಲು ಅವಕಾಶವಿರುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

71 ವರ್ಷದ ಕಿಶೋರ್, ದೆಹಲಿಯ ಮಯೂರ್ ವಿಹಾರ್ ನಿವಾಸಿಯಾಗಿದ್ದು, ಸೋಮವಾರ ಬೆಳಿಗ್ಗೆ 11.35 ರ ಸಮಯದಲ್ಲಿ ನ್ಯಾಯಾಲಯ ಸಂಖ್ಯೆ 1 ರಲ್ಲಿ ನಡೆಯುತ್ತಿದ್ದ ವಿಚಾರಣೆಯ ವೇಳೆ ತನ್ನ ಶೂ ಗಳನ್ನು ಸಿಜೆಐ ಪೀಠದ ಕಡೆ ಎಸೆಯಲು ಯತ್ನಿಸಿದ್ದ. ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನು ಹಿಡಿದು ಹೊರಗೆ ಕರೆದುಕೊಂಡು ಹೋದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೋಮಣ್ಣ, ಡಿಕೆಶಿ ಉದ್ಧಟತನ ಅಕ್ಷಮ್ಯ

ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ಪ್ರಕಟಿಸಿದ ಮಧ್ಯಂತರ ಆದೇಶದಲ್ಲಿ, ಈ ಕೃತ್ಯವು “ನ್ಯಾಯಾಲಯದ ಘನತೆಗೆ ವಿರುದ್ಧವಾದದ್ದು” ಮತ್ತು “ವೃತ್ತಿಪರ ನೀತಿಶಾಸ್ತ್ರದ ಉಲ್ಲಂಘನೆ” ಎಂದು ಉಲ್ಲೇಖಿಸಲಾಗಿದೆ. ಆದೇಶದಲ್ಲಿ, ಕಿಶೋರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು 15 ದಿನಗಳಲ್ಲಿ ಸ್ಪಷ್ಟನೆ ನೀಡಲು ನೋಟಿಸ್ ನೀಡಲಾಗಿದೆ.

ದೆಹಲಿಯ ಬಾರ್ ಕೌನ್ಸಿಲ್ ಈ ಆದೇಶವನ್ನು ಎಲ್ಲ ನ್ಯಾಯಾಲಯಗಳಿಗೆ ತಿಳಿಸಿ ಅದನ್ನು ಕಟ್ಟು ನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಲು ಸೂಚಿಸಲಾಗಿದೆ. ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಗಳು ಮತ್ತು ಜಿಲ್ಲಾ ನ್ಯಾಯಾಲಯಗಳು ಈ ಆದೇಶದ ಪ್ರತಿಗಳನ್ನು ಸಂಬಂಧಿತ ಬಾರ್ ಅಸೋಸಿಯೇಷನ್‌ ಗಳಿಗೆ ಹಂಚಲಿವೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...