‘ವಕೀಲರು ನಾಚಿಕೆ ಬಿಟ್ಟು ನ್ಯಾಯಾಲಯಗಳಿಗೆ ಅಡ್ಡಿ ಮಾಡುತ್ತಿದ್ದಾರೆ; ಒತ್ತಡಕ್ಕೆ ನ್ಯಾಯಾಂಗ ಮಣಿಯುವುದಿಲ್ಲ’; P-H ಹೈಕೋರ್ಟ್ ಕಿಡಿ

Date:

‘ಕಾನೂನು ನೆರವು ರಕ್ಷಣಾ ಸಲಹೆಗಾರ’ (LADC) ಯೋಜನೆಯನ್ನು ವಿರೋಧಿಸಿ ಪಂಜಾಬ್‌ನಾದ್ಯಂತ ಕಳೆದ 27 ದಿನಗಳಿಂದ ವಕೀಲರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. “ವಕೀಲರು ನಾಚಿಕೆ ಬಿಟ್ಟು, ನ್ಯಾಯಾಲಯಗಳ ಕಾರ್ಯವನ್ನು ತಡೆಯುತ್ತಿದ್ದಾರೆ. ವ್ಯವಸ್ಥೆಯ ಮೇಲೆ ಒತ್ತಡ ಹೇರುವ ಪ್ರಯತ್ನಕ್ಕೆ ನ್ಯಾಯಾಂಗ ಎಂದಿಗೂ ಮಣಿಯುವುದಿಲ್ಲ” ಎಂದು ಹೈಕೋರ್ಟ್ ಕಟುವಾಗಿ ಹೇಳಿದೆ.

- Advertisement -

‘ವಕೀಲರ ಮುಷ್ಕರದಿಂದ ಸಾಮಾನ್ಯ ನಾಗರಿಕರು ನ್ಯಾಯ ಪಡೆಯುವ ಮೂಲಭೂತ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಮುಷ್ಕರವನ್ನು ಕೊನೆಗೊಳಿಸುವಂತೆ ನಿರ್ದೇಶನ ನೀಡಬೇಕು’ ಎಂದು ಸಲ್ಲಿಸಲಾಗಿದ್ದ ಪಿಐಎಲ್‌ಅನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಶ್ವಿನಿ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ರೋಹಿತ್ ಕಪೂರ್ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿದೆ. ವಕೀಲರ ಮುಷ್ಕರದಿಂದ ನ್ಯಾಯಾಂಗ ವ್ಯವಸ್ಥೆಯೇ ಸ್ಥಗಿತಗೊಂಡಿರುವುದನ್ನು ತೀವ್ರವಾಗಿ ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಯಾರಾದರೂ ಹೆಚ್ಚು ಒತ್ತಡ ತಂದರೆ, ನ್ಯಾಯಾಂಗ ಮಣಿಯುತ್ತದೆ ಎಂದು ಭಾವಿಸಿದ್ದರೆ, ಅದು ತಪ್ಪು ಕಲ್ಪನೆ. ಅಸಮಂಜಸವಾದ ಬೇಡಿಕೆಗಳನ್ನು ಒತ್ತಡದ ಮೂಲಕ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ನಾವು ಯಾವುದೇ ರೀತಿಯ ಒತ್ತಡಕ್ಕೆ ಮಣಿಯುವುದಿಲ್ಲ” ಎಂದು ನ್ಯಾಯಪೀಠ ಮೌಖಿಕವಾಗಿ ಸ್ಪಷ್ಟಪಡಿಸಿದೆ.

ಈ ಲೇಖನ ಓದಿದ್ದೀರಾ?: ನೀಟ್ ವೈಫಲ್ಯ- ಇಡೀ ವ್ಯವಸ್ಥೆಯ ಕುಸಿತಕ್ಕೆ ಸಾಕ್ಷಿ

“ಕಳೆದ 27 ದಿನಗಳಿಂದ ಪಂಜಾಬ್‌ನಲ್ಲಿ ನ್ಯಾಯಾಲಯಗಳ ಮೂಲಕ ನ್ಯಾಯ ಪಡೆಯುವ ವ್ಯವಸ್ಥೆಯೇ ಬಹುತೇಕ ಸ್ಥಗಿತಗೊಂಡಿದೆ. ಇದನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ನ್ಯಾಯಾಂಗದ ಕಾರ್ಯಕ್ಕೆ ಅಡ್ಡಿಯಾಗುವ ಯಾವುದೇ ಕ್ರಮವನ್ನು ನಾವು ಲಘುವಾಗಿ ಪರಿಗಣಿಸುವುದಿಲ್ಲ. ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇವೆ” ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ವಿವಾದವೇನು?

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (NALSA) ದೇಶಾದ್ಯಂತ ಜಾರಿಗೆ ತಂದಿರುವ ‘ಲೀಗಲ್ ಏಡ್ ಡಿಫೆನ್ಸ್ ಕೌನ್ಸೆಲ್’ (LADC) ಯೋಜನೆಯನ್ನು ಪಂಜಾಬ್‌ನ ಹಲವು ವಕೀಲರ ಸಂಘಗಳು ವಿರೋಧಿಸುತ್ತಿವೆ. ಈ ಯೋಜನೆಯಿಂದ ಹಿಂದೆ ಪ್ಯಾನೆಲ್ ವಕೀಲರಿಗೆ ದೊರೆಯುತ್ತಿದ್ದ ಅವಕಾಶಗಳು ಕಡಿಮೆಯಾಗುತ್ತವೆ ಮತ್ತು ವಕೀಲರ ವೃತ್ತಿಪರ ಹಿತಾಸಕ್ತಿಗೆ ಧಕ್ಕೆ ಉಂಟಾಗುತ್ತದೆ” ಎಂದು ಆರೋಪಿಸಿರುವ ವಕೀಲರ ಸಂಘಗಳು ಅನಿರ್ದಿಷ್ಟಾವಧಿಯ ‘ನೋ ವರ್ಕ್’ ಮುಷ್ಕರಕ್ಕೆ ಕರೆ ನೀಡಿವೆ. ಇದರ ಪರಿಣಾಮವಾಗಿ ಪಂಜಾಬ್‌ನ ಜಿಲ್ಲಾ ನ್ಯಾಯಾಲಯಗಳಲ್ಲಿ ಸಾವಿರಾರು ಪ್ರಕರಣಗಳ ವಿಚಾರಣೆ ಮುಂದೂಡಲ್ಪಟ್ಟಿದ್ದು, ನ್ಯಾಯಾಂಗದ ಕಾರ್ಯಾಚರಣೆ ಮೇಲೆ ಗಂಭೀರ ಪರಿಣಾಮ ಬೀರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 18,94,144 ಮತದಾರರು:

ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಚುನಾವಣಾ ಆಯೋಗದ...

SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ...

ಪ್ರಶಾಂತ್ ಕಿಶೋರ್ ಆಪ್ತ, ‘ಜನ್ ಸುರಾಜ್’ ಡಿಜಿಟಲ್ ಮ್ಯಾನೇಜರ್ ರೈಲಿನಿಂದ ನಾಪತ್ತೆ, ನಿಗೂಢ ಸಾವು

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ್ ಸುರಾಜ್ ಪಾರ್ಟಿ'ಯ (ಜೆಎಸ್‌ಪಿ)...