ಬಿಹಾರ ಸಿಎಂ ನಿತೀಶ್‌ಗೆ ಕೊಲೆ ಬೆದರಿಕೆ: ಆರೋಪಿ ದಾವಣಗೆರೆಯಲ್ಲಿ ಬಂಧನ

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

- Advertisement -

ಬಂಧಿತನನ್ನು ಸೋನು ಪಾಸ್ವಾನ್‌ ಎಂದು ಗುರುತಿಸಲಾಗಿದ್ದು, ಬಿಹಾರದ ಸಮಷ್ಟಿಪುರ ನಿವಾಸಿಯಾದ ಈತ ದಾವಣಗೆರೆಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆರೋಪಿಯನ್ನು ಪಾಟ್ನಾಕ್ಕೆ ಕರೆದೊಯ್ಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಜನವರಿ 30ರಂದು ಬಿಹಾರದ ಪೊಲೀಸ್ ಮಹಾ ನಿರ್ದೇಶಕ ಆರ್‌ ಎಸ್‌ ಬಟ್ಟಿ ಅವರಿಗೆ ವಾಟ್ಸಾಪ್‌ ಮೂಲಕ ಸಂದೇಶ ಕಳಿಸಿದ್ದ ಸೋನು ಪಾಸ್ವಾನ್, ಬಿಜೆಪಿಯೊಂದಿಗೆ ಸಂಬಂಧ ಕಡಿದುಕೊಳ್ಳದಿದ್ದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಇತರ ಶಾಸಕರನ್ನು ಬಾಂಬ್ ಸ್ಫೋಟಿಸಿ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

ಈ ಬಗ್ಗೆ ತನಿಖೆ ನಡೆಸಿದ್ದ ರಾಜ್ಯ ಆರ್ಥಿಕ ಅಪರಾಧ ಘಟಕ ಪೋನ್‌ ನಂಬರ್‌ಅನ್ನು ತನಿಖೆಗೊಳಪಡಿಸಿತ್ತು. ಫೋನ್ ಸಂಖ್ಯೆಯ ಲೊಕೇಷನ್‌ ಪತ್ತೆ ಹಚ್ಚಿದಾಗ ಕರ್ನಾಟಕದ ದಾವಣಗೆರೆಯಲ್ಲಿರುವುದು ಪತ್ತೆಯಾಗಿತ್ತು. ತರುವಾಯು ಕರ್ನಾಟಕ ಪೊಲೀಸರ ಸಹಕಾರದೊಂದಿಗೆ ಸ್ಥಳವನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಲಾಯಿತು.

ಬಿಹಾರದಲ್ಲಿ ನಿರುದ್ಯೋಗ ಹಾಗೂ ಬಡತನ ಪ್ರಮಾಣ ಹೆಚ್ಚಾಗುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಆರೋಪಿ ನಿತೀಶ್ ಕುಮಾರ್ ಆರ್‌ಜೆಡಿಯೊಂದಿಗೆ ಮೈತ್ರಿ ಕಡಿದುಕೊಂಡಿರುವುದಕ್ಕೆ ಈ ರೀತಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...