ವೆನೆಜುವೆಲಾ ಮೇಲೆ ಅಮೆರಿಕ ದಾಳಿಗೆ ಖಂಡನೆ: ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಎಡಪಕ್ಷಗಳು

Date:

ವೆನೆಜುವೆಲಾ ವಿರುದ್ಧ ಅಮೆರಿಕ ನಡೆಸಿದ ಆಕ್ರಮಣವನ್ನು ಎಡಪಕ್ಷಗಳು ಖಂಡಿಸಿದ್ದು, ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರ ಬಂಧನವನ್ನು ‘ಅಪಹರಣ’ ಎಂದು ಹೇಳಿದೆ. ಹಾಗೆಯೇ ಅಮೆರಿಕದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಗೆ ಎಡಪಕ್ಷಗಳು ಕರೆ ನೀಡಿವೆ.

- Advertisement -

ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್)ಎಲ್, ಆರ್‌ಎಸ್‌ಪಿ ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷಗಳು, ತೈಲ ನಿಕ್ಷೇಪಗಳನ್ನು ವಶಪಡಿಸಿಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ನೀಡಿರುವ ಹೇಳಿಕೆಯು ಈ ದಾಳಿಯ ಹಿಂದಿನ ‘ನಿಜವಾದ ಉದ್ದೇಶಗಳನ್ನು’ ಬಯಲು ಮಾಡಿದೆ ಎಂದು ಹೇಳಿದೆ. ಹಾಗೆಯೇ ಅಮೆರಿಕದ ಆಕ್ರಮಣವನ್ನು ಖಂಡಿಸುವ ಇತರೆ ದೇಶಗಳೊಂದಿಗೆ ಧ್ವನಿಗೂಡಿಸುವಂತೆ, ವೆನೆಜುವೆಲಾದೊಂದಿಗೆ ದೃಢವಾಗಿ ನಿಲ್ಲುವಂತೆ ಮೋದಿ ಸರ್ಕಾರವನ್ನು ಒತ್ತಾಯಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಮಾತುಕತೆ ನಡೆಸಿ ‘ಶಾಂತಿಯುತವಾಗಿ’ ಸಮಸ್ಯೆ ಪರಿಹರಿಸಿಕೊಳ್ಳಿ: ಅಮೆರಿಕ, ವೆನೆಜುವೆಲಾಗೆ ಭಾರತ ಒತ್ತಾಯ

ಈ ಬಗ್ಗೆ ಎಡ ಪಕ್ಷಗಳ ಪ್ರಧಾನ ಕಾರ್ಯದರ್ಶಿಗಳಾದ ಎಂಎ ಬೇಬಿ (ಸಿಪಿಐ-ಎಂ), ಡಿ ರಾಜಾ (ಸಿಪಿಐ), ದೀಪಂಕರ್ ಭಟ್ಟಾಚಾರ್ಯ (ಸಿಪಿಐ-ಎಂಎಲ್ಎಲ್), ಜಿ ದೇವರಾಜನ್ (ಎಐಎಫ್‌ಬಿ) ಮತ್ತು ಮನೋಜ್ ಭಟ್ಟಾಚಾರ್ಯ (ಆರ್‌ಎಸ್‌ಪಿ) ಅವರು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ ವೆನೆಜುವೆಲಾದ ತೈಲ ನಿಕ್ಷೇಪಗಳನ್ನು ವಶಪಡಿಸಿಕೊಳ್ಳುವುದಾಗಿ ಹೇಳಿದ್ದರು. ಈ ಮೂಲಕ ಈ ಆಕ್ರಮಣದ ಹಿಂದಿನ ನಿಜವಾದ ಉದ್ದೇಶಗಳನ್ನು ಬಹಿರಂಗಪಡಿಸಿದ್ದರು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಒಂದು ಹೆಜ್ಜೆ ಮುಂದೆ ಹೋಗಿ ಕ್ಯೂಬಾ ಮತ್ತು ಮೆಕ್ಸಿಕೊ ಅವರ ಮುಂದಿನ ಗುರಿಯಾಗಲಿದೆ ಎಂದು ಎಚ್ಚರಿಸಿದ್ದಾರೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

“ಅಮೆರಿಕದ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ 2025 ಬಿಡುಗಡೆಯಾದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ. ಇದು ಅಮೆರಿಕದ ಸಾಮ್ರಾಜ್ಯಶಾಹಿ ಇಡೀ ಪ್ರಪಂಚದ ಮೇಲೆ ತನ್ನ ಪ್ರಾಬಲ್ಯವನ್ನು ಹೇರಲು ಪ್ರಯತ್ನಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸುತ್ತವೆ” ಎಂದು ನಾಯಕರುಗಳು ಹೇಳಿದ್ದಾರೆ.

“ಇಡೀ ಪಶ್ಚಿಮ ಗೋಳಾರ್ಧವನ್ನು ತನ್ನ ಹಿತ್ತಲಿನಂತೆ ಪರಿಗಣಿಸುವ ಮತ್ತು ತನ್ನ ಅಧಿಕಾರವನ್ನು ಚಲಾಯಿಸುವ ಕುಖ್ಯಾತ ಮನ್ರೋ ಸಿದ್ಧಾಂತದ ಟ್ರಂಪ್ ಇಡೀ ವಿಶ್ವದಲ್ಲೇ ಪ್ರಾಬಲ್ಯ ಹೊಂದಲು ಬಯಸುತ್ತಿದ್ದಾರೆ” ಎಂದು ದೂರಿದರು.

“ವೆನೆಜುವೆಲಾದ ಹೋರಾಟದ ಜನರಿಗೆ ನಾವು ನಮ್ಮ ಪೂರ್ಣ ಹೃದಯದ ಬೆಂಬಲವಿದೆ. ನಾವು, ಎಡ ಪಕ್ಷಗಳು, ಅಮೆರಿಕದ ಆಕ್ರಮಣದ ವಿರುದ್ಧ ಮತ್ತು ಲ್ಯಾಟಿನ್ ಅಮೆರಿಕದ ಜನರೊಂದಿಗೆ ಒಗ್ಗಟ್ಟಿನಿಂದ ದೇಶಾದ್ಯಂತ ಪ್ರತಿಭಟನೆಗಳಿಗೆ ಕರೆ ನೀಡುತ್ತೇವೆ. ನಮ್ಮ ದೇಶದ ಎಲ್ಲಾ ಶಾಂತಿಪ್ರಿಯ, ಸಾಮ್ರಾಜ್ಯಶಾಹಿ ವಿರೋಧಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಗಳಲ್ಲಿ ಭಾಗವಹಿಸಬೇಕು ಎಂದು ನಾವು ಮನವಿ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...