ಎಂಎಸ್‌ಪಿ ಜಾರಿಯಿಂದ ದೇಶದ ಜಿಡಿಪಿ ವೃದ್ಧಿ: ರಾಹುಲ್ ಗಾಂಧಿ

Date:

ರೈತರಿಗೆ ಕಾನೂನು ಖಾತರಿಗೊಳಿಸುವ ಎಂಎಸ್‌ಪಿ ಜಾರಿಯಿಂದ ಬಜೆಟ್‌ನಲ್ಲಿ ಕೊರತೆ ಉಂಟಾಗುವ ಬದಲು ಜಿಡಿಪಿ ಬೆಳವಣಿಗೆಯಲ್ಲಿ ರೈತರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಎಂಎಸ್‌ಪಿ ಖಾತರಿ ಯೋಜನೆಯಿಂದ ಸರ್ಕಾರದ ಬಜೆಟ್‌ನಲ್ಲಿ ಕೊರತೆಯುಂಟಾಗುತ್ತದೆ ಎಂಬುದು ಸುಳ್ಳಾಗಿದೆ. ಕಾಂಗ್ರೆಸ್ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ನೀಡುವುದಾಗಿ ಭರವಸೆ ನೀಡಿದ ನಂತರ ಮೋದಿಯವರ ಪ್ರಚಾರ ಯಂತ್ರ ಹಾಗೂ ಅವರ ಮಾಧ್ಯಮ ಸ್ನೇಹಿತರು ಎಂಎಸ್‌ಪಿ ಬಗ್ಗೆ ಸುಳ್ಳಿನ ಸರಮಾಲೆಯನ್ನು ಹರಿದುಬಿಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಎಂಎಸ್‌ಪಿಗೆ ಕಾನೂನು ಖಾತರಿ ಒದಗಿಸಿದರೆ ಕೊರತೆಯುಂಟಾಗುತ್ತದೆ ಎನ್ನುವುದು ಸುಳ್ಳು. ನಿಜ ಏನೆಂದರೆ ಸಿಆರ್‌ಐಎಸ್‌ಐಎಲ್‌ ವರದಿಯ ಪ್ರಕಾರ 2022-23ಯಲ್ಲಿ ರೈತರಿಗೆ ಎಂಎಸ್‌ಪಿ ನೀಡಿದ್ದರೆ ಸರ್ಕಾರದಲ್ಲಿ ಹೆಚ್ಚುವರಿಯಾಗಿ 21 ಸಾವಿರ ಕೋಟಿ ರೂ,ಗಳು ಮಾತ್ರ ಖರ್ಚಾಗಿ  ಒಟ್ಟು ಆದಾಯದ 0.4 ರಷ್ಟು ಮಾತ್ರ ಆಗುತ್ತಿತ್ತು” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಭಾರತದಲ್ಲಿ ಸಾಲ ಮನ್ನಕ್ಕಾಗಿ ಬ್ಯಾಂಕುಗಳು 14 ಲಕ್ಷ ಕೋಟಿ ರೂ. ಸಾಲ ಮನ್ನಾ ಹಾಗೂ ಕಾರ್ಪೋರೇಟ್ ತೆರಿಗೆ ವಿನಾಯಿತಿಗಾಗಿ 1.8 ಲಕ್ಷ ಕೋಟಿ ರೂ. ಸಾಲ ಮನ್ನ ಮಾಡಿವೆ. ಈ ಹಿನ್ನೆಲೆಯಲ್ಲಿ ರೈತರಿಗೆ ಸ್ವಲ್ಪ ಹಣವನ್ನಾದರೂ ಖರ್ಚು ಮಾಡಲು ಬೇಸರ ವ್ಯಕ್ತಪಡಿಸುತ್ತಿರುವುದು ಏಕೆ ಎಂದು ರಾಹುಲ್ ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ಎಂಎಸ್‌ಪಿ ಕಾನೂನು ಖಾತರಿಯಿಂದ ಕೃಷಿಯಲ್ಲಿನ ರೈತರ ಹೂಡಿಕೆ ಹೆಚ್ಚುತ್ತದೆ. ಗ್ರಾಮೀಣ ಭಾರತದಲ್ಲಿ ಬೇಡಿಕೆ ಹೆಚ್ಚಾಗಿ ರೈತರು ವಿವಿಧ ರೀತಿಯ ಬೆಳೆಯನ್ನು ಬೆಳೆಯಲು ಆತ್ಮವಿಶ್ವಾಸ ಹೊಂದುತ್ತಾರೆ. ಇದು ದೇಶದ ಸಮೃದ್ಧಿಯ ಖಾತರಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.

“ಎಂಎಸ್‌ಪಿಯ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವವರು ಡಾ. ಸ್ವಾಮಿನಾಥನ್ ಹಾಗೂ ಅವರ ಕನಸುಗಳಿಗೆ ಅವಮಾನ ಮಾಡುತ್ತಿದ್ದಾರೆ. ಎಂಎಸ್‌ಪಿ ಜಾರಿ ಭಾರತೀಯ ಬಜೆಟ್‌ನಲ್ಲಿ ಕೊರತೆಯುಂಟಾಗದೆ ಜಿಡಿಪಿ ಹೆಚ್ಚಾಗುತ್ತದೆ” ಎಂದು ರಾಹುಲ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಸ್ವಾಮಿನಾಥನ್ ಆಯೋಗವನ್ನು ಜಾರಿಗೊಳಿಸುವ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ವಿಡಿಯೋವನ್ನು ರಾಹುಲ್ ಹಂಚಿಕೊಂಡಿದ್ದಾರೆ.

ಈ ನಡುವೆ ಕೇಂದ್ರ ಸರ್ಕಾರ ನೀಡಿರುವ ಎಂಎಸ್‌ಪಿ ಖಾತರಿ ಪ್ರಸ್ತಾಪವನ್ನು ರೈತ ಸಂಘಟನೆಗಳ ನಾಯಕರು ತಿರಸ್ಕರಿಸಿದ್ದು, ಫೆ.21ರಿಂದ ದೆಹಲಿ ಚಲೋ ಪುನಃ ಆರಂಭಿಸುವುದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...