ತಮಿಳುನಾಡು | ವಿಜಯ್ ಸರ್ಕಾರ ರಚಿಸಲಿ, ಡಿಎಂಕೆ ಆರು ತಿಂಗಳು ಹಸ್ತಕ್ಷೇಪ ಮಾಡಲ್ಲ: ಸ್ಟ್ಯಾಲಿನ್

Date:

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ನಿರ್ಗಮಿತ ಮುಖ್ಯಮಂತ್ರಿ ಎಂ ಕೆ ಸ್ಟ್ಯಾಲಿನ್, “ಟಿವಿಕೆ ಮುಖ್ಯಸ್ಥ ಸಿ ಜೋಸೆಫ್ ವಿಜಯ್ ಅವರು ಸರ್ಕಾರ ರಚಿಸಲಿ, ಮೊದಲ ಆರು ತಿಂಗಳು ಡಿಎಂಕೆ ಯಾವುದೇ ಹಸ್ತಕ್ಷೇಪವಿಲ್ಲದೆ ಆಡಳಿತ ನಡೆಸಲು ಅವಕಾಶ ನೀಡುತ್ತದೆ” ಎಂದು ಹೇಳಿದ್ದಾರೆ.

- Advertisement -

ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾಗೆ ಪ್ರತಿಕ್ರಿಯಿಸಿರುವ ಸ್ಟ್ಯಾಲಿನ್, “ಡಿಎಂಕೆ ರಾಜಕೀಯ ಅಸ್ಥಿರತೆಯನ್ನು ಹುಟ್ಟುಹಾಕುವ ಅಥವಾ ರಾಜ್ಯವನ್ನು ಮತ್ತೊಂದು ಚುನಾವಣೆಯತ್ತ ತಳ್ಳುವ ಆಸಕ್ತಿ ಹೊಂದಿಲ್ಲ. ಮುಂಬರುವ ಸರ್ಕಾರವು ಡಿಎಂಕೆ ಆಡಳಿತದಲ್ಲಿ ಪ್ರಾರಂಭಿಸಿದ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದುವರಿಸುವುದರ ಜತೆಗೆ ಟಿವಿಕೆ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಸಹ ಈಡೇರಿಸುತ್ತದೆ ನಾವು ನಿರೀಕ್ಷಿಸುತ್ತೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಇದನ್ನು ಓದಿದ್ದೀರಾ? ತಮಿಳುನಾಡು | ಕಷ್ಟದ ಸಮಯದಲ್ಲಿಯೂ ನಿಮ್ಮ ಬೆನ್ನಿಗೆ ನಿಲ್ಲುತ್ತೇನೆ: ಸ್ಟ್ಯಾಲಿನ್ ಭೇಟಿ ಮಾಡಿದ ರಜನಿಕಾಂತ್

“ಹೊಸ ಸರ್ಕಾರವು ಶಾಲಾ ಮಕ್ಕಳಿಗೆ ಉಚಿತ ಉಪಹಾರ ಯೋಜನೆಯನ್ನು ಮುಂದುವರಿಸಬೇಕು. ಮನೆಯ ಮುಖ್ಯಸ್ಥರಗಿರುವ ಮಹಿಳೆಯರಿಗೆ ಮಾಸಿಕ 1000 ರೂಪಾಯಿ ಭತ್ಯೆ ನೀಡುವ ಹಣಕಾಸು ಸಹಾಯ ಯೋಜನೆ ‘ಕಲೈಗ್ನರ್ ಮಗಲಿರ್ ಉರಿಮೈ ತೊಗೈ’ ಅನ್ನು ಮುಂದುವರೆಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲೇ ಮಹಿಳೆಯರಿಗೆ 2,500 ರೂ. ನೆರವು ನೀಡುವ ವಿಜಯ್ ಅವರ ಟಿವಿಕೆ ಪಕ್ಷದ ಭರವಸೆ ಕಾರ್ಯರೂಪಕ್ಕೆ ಬರುವ ಬಗ್ಗೆ ಸ್ಟ್ಯಾಲಿನ್ ಅನುಮಾನ ವ್ಯಕ್ತಪಡಿಸಿದ್ದಾರೆ. “ನಾವು ಮಾಡಿದಂತೆ ಅವರಿಗೆ ಕನಿಷ್ಠ 1,000 ರೂ.ಗಳನ್ನು ನೀಡಿ” ಎಂದು ಹೇಳಿದರು.

ಇನ್ನು ಸ್ಟ್ಯಾಲಿನ್ ತಮ್ಮ ಸರ್ಕಾರದ ಕಾರ್ಯಕ್ಷಮತೆಯನ್ನು ಸಮರ್ಥಿಸಿಕೊಂಡರು. 2021ರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇಕಡ 90ರಷ್ಟು ಈಡೇರಿಸಲಾಗಿದೆ. ನೀಟ್ ರದ್ದತಿ ಸೇರಿದಂತೆ ಕೆಲವು ಭರವಸೆಗಳು ಕೇಂದ್ರದ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಅವುಗಳನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ” ಎಂದು ಸ್ಪಷ್ಟಪಡಿಸಿದರು.

ಪಡಿತರ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಆರು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡುವ ಟಿವಿಕೆ ಭರವಸೆಯನ್ನು ಉಲ್ಲೇಖಿಸಿದ ಸ್ಟ್ಯಾಲಿನ್, “ಈ ಚುನಾವಣೆಯಲ್ಲಿಯೂ ಸಹ, ನಾವು ಪೂರೈಸಬಹುದಾದವುಗಳ ಬಗ್ಗೆ ಮಾತ್ರ ಭರವಸೆ ನೀಡಿದ್ದೇವೆ. ಟಿವಿಕೆ ತನ್ನ ಭರವಸೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುವುದಿಲ್ಲ. ಆದರೆ ಈ ಭರವಸೆಗಳನ್ನು ಜಾರಿ ಮಾಡಿದರೆ ನಾವು ಸಂತೋಷಪಡುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ...

ದೇಶ ಹಾದಿ ತಪ್ಪಿದೆ; ಮತ್ತೆ ಸರಿ ದಾರಿಗೆ ಬರುವ ಶಕ್ತಿ ಭಾರತಕ್ಕಿದೆ: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ

"ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶ ತನ್ನ ಹಾದಿಯನ್ನು ಕಳೆದುಕೊಂಡಿದೆ ಎಂದು ನನಗೆ ಅನಿಸುತ್ತದೆ....

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...