ನೀಟ್ ಅಕ್ರಮವನ್ನು ಪ್ರಶ್ನಿಸೋಣ: ಬಿಜೆಪಿಗೆ ‘ಕಾಕ್ರೋಚ್’ ಪಂಥಾಹ್ವಾನ

Date:

ಸಿಬಿಎಸ್‌ಇ ಮೌಲ್ಯಮಾಪನ ಅಕ್ರಮಗಳು ಹಾಗೂ 2026ರ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದವು ದೇಶದಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸುವ ನಿಟ್ಟಿನಲ್ಲಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಕೈಜೋಡಿಸುವಂತೆ ಆಡಳಿತಾರೂಢ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಕಾಕ್ರೋಚ್ ಜನತಾ ಪಾರ್ಟಿ ಆಹ್ವಾನ ನೀಡಿದೆ.

- Advertisement -

ಪಕ್ಷಭೇದ ಮರೆತು ಈ ವಿಷಯದಲ್ಲಿ ಸರ್ಕಾರದ ಜವಾಬ್ದಾರಿಯನ್ನು ಪ್ರಶ್ನಿಸಬೇಕಿದೆ ಎಂದು ಖ್ಯಾತ ಪರಿಸರವಾದಿ ಸೋನಂ ವಾಂಗ್ಚುಕ್ ಕರೆ ನೀಡಿದ್ದಾರೆ. ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಿರುದ್ಯೋಗಿ ಯುವಜನತೆಯನ್ನು ಜಿರಳೆಗಳು ಮತ್ತು ಸಮಾಜದ ಪರಾವಲಂಬಿಗಳು ಎಂದು ನ್ಯಾಯಾಲಯದ ಕಲಾಪವೊಂದರಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಉಲ್ಲೇಖಿಸಿದ್ದಾರೆನ್ನಲಾದ ಹೇಳಿಕೆಯನ್ನು ವಿರೋಧಿಸಿ ಅಮೆರಿಕಾದ ಬೋಸ್ಟನ್ ವಿಶ್ವವಿದ್ಯಾಲಯದ ಪದವೀಧರರಾದ ಅಭಿಜೀತ್ ದೀಪ್ಕೆ ಅವರು ಈ ಕಾಕ್ರೋಚ್ ಜನತಾ ಪಾರ್ಟಿಯನ್ನು ಹುಟ್ಟುಹಾಕಿದರು. ಆರಂಭದಲ್ಲಿ ಇದೊಂದು ಕೇವಲ ವಿಡಂಬನಾತ್ಮಕ ಆನ್‌ಲೈನ್ ಅಭಿಯಾನವಾಗಿ ಶುರುವಾದರೂ ಕೇವಲ ಹತ್ತೇ ದಿನಗಳಲ್ಲಿ ಲಕ್ಷಾಂತರ ಯುವಜನರು ಬೆಂಬಲ ಸೂಚಿಸುವ ಮೂಲಕ ಈಗ ದೇಶದ ಅತಿದೊಡ್ಡ ಯುವ ಹೋರಾಟವಾಗಿ ಮಾರ್ಪಟ್ಟಿದೆ. ಈ ಪಕ್ಷಕ್ಕೆ ಇದೀಗ 2 ಕೋಟಿಗೂ ಅಧಿಕ ಫಾಲೋವರ್ಸ್ ಇದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಪೌರತ್ವ ನಿಗದಿ ಆಗದಿರುವುದು ನಾಚಿಕೆಗೇಡು

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸರಣಿ ಸೋರಿಕೆ ಮತ್ತು ಸಿಬಿಎಸ್‌ಇ ಮೌಲ್ಯಮಾಪನದಲ್ಲಿನ ಅಕ್ರಮಗಳ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಎನ್ನುವುದು ಪ್ರಮುಖ ಬೇಡಿಕೆಯಾಗಿದೆ. ಶಿಕ್ಷಣ ವ್ಯವಸ್ಥೆ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ ಬೇರೂರಿರುವ ಭ್ರಷ್ಟಾಚಾರವನ್ನು ಕೊನೆಗಾಣಿಸಿ ಭವಿಷ್ಯದಲ್ಲಿ ಯುವಜನರ ಬದುಕಿನ ಜೊತೆ ಚೆಲ್ಲಾಟವಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದು ಕೇವಲ ಒಂದು ಸಂಘಟನೆಯ ಹೋರಾಟವಲ್ಲ ಹೀಗಾಗಿ ವ್ಯವಸ್ಥೆಯನ್ನು ಸರಿದಾರಿಗೆ ತರಲು ವಿಪಕ್ಷಗಳ ಜೊತೆಗೆ ಆಡಳಿತಾರೂಢ ಬಿಜೆಪಿ ನಾಯಕರೂ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದೆ.

ಈ ಪ್ರತಿಭಟನೆಯು ಕೇವಲ ಪರೀಕ್ಷಾ ಅಕ್ರಮಗಳ ವಿರುದ್ಧ ಮಾತ್ರವಲ್ಲದೆ ದೇಶದಲ್ಲಿ ಮಿತಿಮೀರುತ್ತಿರುವ ನಿರುದ್ಯೋಗ ಸಮಸ್ಯೆಯ ವಿರುದ್ಧದ ಯುವಜನರ ಆಕ್ರೋಶದ ರೂಪವಾಗಿದೆ. ದೇಶದಲ್ಲಿ ಇಪ್ಪತ್ತೈದು ವರ್ಷದೊಳಗಿನ ಪದವೀಧರರ ಪೈಕಿ ಶೇಕಡಾ ನಲವತ್ತರಷ್ಟು ಯುವಜನರು ನಿರುದ್ಯೋಗಿಗಳಾಗಿದ್ದಾರೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಲಭ್ಯವಿರುವ ಕೇವಲ 1.33 ಲಕ್ಷ ಸೀಟುಗಳಿಗಾಗಿ ದೇಶಾದ್ಯಂತ ಇಪ್ಪತ್ತು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೈಪೋಟಿ ನಡೆಸುತ್ತಾರೆ ಎನ್ನುವುದು ಅತ್ಯಂತ ಆತಂಕಕಾರಿ.

ಪರಿಸರವಾದಿ ಸೋನಂ ವಾಂಗ್ಚುಕ್ ಅವರು ತಮ್ಮನ್ನು ಗೌರವ ಜಿರಳೆ ಎಂದು ಕರೆದುಕೊಂಡಿದ್ದು ಹೋರಾಟಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಆನ್‌ಲೈನ್ ಪೋಸ್ಟ್‌ಗಳಿಂದ ಜನ್ಮತಾಳಿದ ಕಾಕ್ರೋಚ್ ಜನತಾ ಪಾರ್ಟಿ ಇದೀಗ ಭೌತಿಕವಾಗಿ ಬೀದಿಗಿಳಿದು ಸರ್ಕಾರದ ಹೊಣೆಗಾರಿಕೆಯನ್ನು ನೇರವಾಗಿ ಪ್ರಶ್ನಿಸುವ ಮಟ್ಟಿಗೆ ಬೆಳೆದಿದ್ದು ಭಾರತದ ರಾಜಕಾರಣ ಹಾಗೂ ಯುವ ಹೋರಾಟದ ದಿಕ್ಕಿನಲ್ಲಿ ಹೊಸ ಸಂಚಲನ ಮೂಡಿಸಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...