ಚಂಡೀಗಢಕ್ಕೆ ಲೆಫ್ಟಿನೆಂಟ್ ಗವರ್ನರ್ ನೇಮಕ; ಕೇಂದ್ರದ ಮಸೂದೆಗೆ ಪಂಜಾಬ್ ವಿರೋಧ

Date:

ಹರಿಯಾಣ ಮತ್ತು ಪಂಜಾಬ್‌ ರಾಜ್ಯಗಳ ರಾಜಧಾನಿಯಾಗಿರುವ ಚಂಡೀಗಢವನ್ನು ಸಂವಿಧಾನದ 240ನೇ ವಿಧಿಯಡಿ ಸೇರಿಸಿ, ಪ್ರತ್ಯೇಕ ಲೆಫ್ಟಿನೆಂಟ್ ಗವರ್ನರ್ ನೇಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅದಕ್ಕಾಗಿ, ಮಸೂದೆಯ್ನು ರೂಪಿಸುತ್ತಿದೆ. ಕೇಂದ್ರ ಸರ್ಕಾರದ ಮಸೂದೆ ಮತ್ತು ಪ್ರಸ್ತಾವವನ್ನು ಪಂಜಾಬ್ ಸರ್ಕಾರ ವಿರೋಧಿಸಿದೆ.

- Advertisement -

ಚಂಡೀಗಢವು ಕೇಂದ್ರಾಡಳಿತ ಪ್ರದೇಶವಾಗಿದೆ. ಇಲ್ಲಿ, ಪಂಜಾಬ್ ರಾಜ್ಯಪಾಲರು ಆಡಳಿತ ನಡೆಸುತ್ತಿದ್ದಾರೆ. ಆದಾಗ್ಯೂ, ರಾಷ್ಟ್ರಪತಿ ಮೂಲಕ ಪ್ರತ್ಯೇಕ ಲೆಫ್ಟಿನೆಂಟ್‌ ಗವರ್ನರ್ ನೇಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಸೆಂಬರ್ 1ರಿಂದ ಆರಂಭವಾಗುವ ಸಂಸತ್ ಅಧಿವೇಶನದಲ್ಲಿ ಸಂವಿಧಾನ 131 ತಿದ್ದುಪಡಿ ಮಸೂದೆ-2025ಅನ್ನು ಮಂಡಿಸಿ, ಅನುಮೋದನೆ ಪಡೆಯಲು ಸಿದ್ಧತೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೇಂದ್ರದ ಪ್ರಸ್ತಾಪಕ್ಕೆ ಪಂಜಾಬ್‌ನ ಆಡಳಿತಾರೂಢ ಎಎಪಿ ಮತ್ತು ವಿಪಕ್ಷ ಕಾಂಗ್ರೆಸ್‌ ಕಳವಳ ವ್ಯಕ್ತಪಡಿಸಿವೆ. ಹೊಸ ಪ್ರಸ್ತಾವವು ಪಂಜಾಬ್‌ನ ಹಕ್ಕನ್ನು ಮತ್ತಷ್ಟು ದುರ್ಬಲಗೊಳಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.

“ಕೇಂದ್ರ ಸರ್ಕಾರವು ರೂಪಿಸಿರುವ ‘ಸಂವಿಧಾನ (131 ನೇ ತಿದ್ದುಪಡಿ) ಮಸೂದೆ’ಯನ್ನು ನಾವು ಖಂಡಿಸುತ್ತೇವೆ. ಪ್ರಸ್ತಾವಿತ ತಿದ್ದುಪಡಿ ಪಂಜಾಬ್‌ನ ಹಕ್ಕುಗಳು ಮತ್ತು ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ” ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

“ಪ್ರಸ್ತಾವಿತ ಮಸೂದೆಯು ಪಂಜಾಬ್‌ ರಾಜಧಾನಿಯ ಮೇಲಿನ ಐತಿಹಾಸಿಕ, ಸಾಂವಿಧಾನಿಕ ಹಾಗೂ ಭಾವನಾತ್ಮಕ ಹಕ್ಕನ್ನು ದುರ್ಬಲಗೊಳಿಸುತ್ತದೆ. ಮಸೂದೆಯ ವಿರುದ್ಧ ಎಲ್ಲ ಪಕ್ಷಗಳು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು” ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ವಿಪಕ್ಷದ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...