ಪಶ್ಚಿಮ ಬಂಗಾಳದ ಮಾಲ್ದಾ ಜಿಲ್ಲೆಯ ಹಲವು ಕಡೆಗಳಲ್ಲಿ ಸಿಡಿಲು ಬಡಿದು 11 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಮೃತರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದು, ಶಹಪುರದಿಂದ ತಮ್ಮ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇಬ್ಬರು ಗಂಜಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅದಿನಾ ಹಾಗೂ ರೌತಾ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಾಪುರ್ ಪ್ರದೇಶದವರಾಗಿದ್ದಾರೆ. ಹರಿಶ್ಚಂದ್ರಪುರದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ದಂಪತಿ ಮೃತಪಟ್ಟಿದ್ದಾರೆ.
ಇಂಗ್ಲಿಷ್ ಬಜಾರ್ ಹಾಗೂ ಮಾಣಿಕ್‌ಚಾಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು
ಇನ್ನು ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ದೇಹಗಳನ್ನು ಮಾಲ್ಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ವರ್ಗಾಯಿಸುವ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸಿದೆ.
ನಿಖರವಾದ ಸಾವಿನ ಸಂಖ್ಯೆಯನ್ನು ಕಂಡುಹಿಡಿಯಲು ಘಟಕ ಮಟ್ಟದ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತಿನ್ ಸಿಂಘಾನಿಯಾ ಹೇಳಿದ್ದಾರೆ.
ವಿಶೇಷ ಅನುಮತಿ ಪಡೆದ ನಂತರ ರಾತ್ರಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಪ್ರತಿ ಬ್ಲಾಕ್ ಘಟಕ ಮಟ್ಟದ ಅಧಿಕಾರಿಗಳು ಮೃತರ ಕುಟುಂಬಗಳನ್ನು ಭೇಟಿ ಮಾಡಿ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಿದ್ದಾರೆ ಎಂದು ನಿತಿನ್ ಸಿಂಘಾನಿಯಾ ಹೇಳಿದರು.
