ಅಭಿಷೇಕ್ ನನ್ನ ಮಗನಂತೆ, ಕ್ಷಮಿಸುವುದು ತಂದೆಯ ಕರ್ತವ್ಯ: ಕಲ್ಯಾಣ್ ಬ್ಯಾನರ್ಜಿ ಯೂಟರ್ನ್

Date:

ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಸಾರ್ವಜನಿಕವಾಗಿ ಟೀಕಿಸಿದ್ದ, ಅಭಿಷೇಕ್ ಅಥವಾ ನನ್ನ ಪೈಕಿ ಯಾರು ನಿಮಗೆ ಬೇಕು ಎಂದು ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಎಚ್ಚರಿಕೆ ನೀಡಿದ್ದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಈಗ ಯೂಟರ್ನ್ ಹೊಡೆದಿದ್ದಾರೆ. “ಅಭಿಷೇಕ್ ನನ್ನ ಮಗನಂತೆ, ಮಗನ ತಪ್ಪನ್ನು ಕ್ಷಮಿಸುವುದು ತಂದೆಯ ಕರ್ತವ್ಯ” ಎಂದು ಹೇಳಿದ್ದಾರೆ.

- Advertisement -

ಈ ಹಿಂದೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದ ಕಲ್ಯಾಣ್ ಬ್ಯಾನರ್ಜಿ, “ಅಭಿಷೇಕ್ ಬ್ಯಾನರ್ಜಿ ದುರಹಂಕಾರಿ. ಅಭಿಷೇಕ್ ಬ್ಯಾನರ್ಜಿಯಿಂದಾಗಿ, ಇಂದು ಪಕ್ಷ ನಾಶವಾಗಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಎಲ್ಲರೂ ಇದನ್ನೇ ಹೇಳುತ್ತಿದ್ದಾರೆ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಇದನ್ನು ಓದಿದ್ದೀರಾ? ಕಲ್ಯಾಣ್ ಬ್ಯಾನರ್ಜಿ – ಮೊಯಿತ್ರಾ ಸಂಘರ್ಷ: ಟಿಎಂಸಿಯಲ್ಲಿ ಶುರುವಾಯಿತೇ ಆಂತರಿಕ ಜಗಳ?

ಅಷ್ಟು ಮಾತ್ರವಲ್ಲದೆ, “ನಾನು ಅಥವಾ ಅಭಿಷೇಕ್ ನಡುವೆ ಪಕ್ಷಕ್ಕೆ ಯಾರು ಬೇಕು ಎಂದು ಆರಿಸಿಕೊಳ್ಳಿ. ನಿಮ್ಮ ಸೋದರಳಿಯನನ್ನು ನೀವು ಬೆಂಬಲಿಸುವುದಾದರೆ ನಾನು ಬೇರೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ” ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದ್ದರು. ಆದರೆ ಶನಿವಾ ಈ ಹೇಳಿಕೆಗೆ ತದ್ವಿರುದ್ಧವಾದ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ರಾಜಕೀಯ ಪರಿಸ್ಥಿತಿಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿ, ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ.

“ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಪಶ್ಚಿಮ ಬಂಗಾಳವು ಎಂದಿಗೂ ವಿರೋಧ ಪಕ್ಷಗಳನ್ನು ನಾಶಮಾಡುವ ಪರಿಸ್ಥಿತಿಯನ್ನು ಎದುರಿಸಲಿಲ್ಲ. ಈ ಮುಖ್ಯಮಂತ್ರಿ ಪ್ರತೀಕಾರಕ. ಇದು ಪ್ರಜಾಪ್ರಭುತ್ವಕ್ಕೆ ಅಪಾಯ” ಎಂದು ಹೇಳಿದರು.

ಭಿನ್ನಮತೀಯ ಸಂಸದರ ಗುಂಪೊಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಂಪರ್ಕಿಸಲು ತಯಾರಿ ನಡೆಸುತ್ತಿದೆ ಎಂಬ ವರದಿಗಳಿಗೂ ಕಲ್ಯಾಣ್ ಪ್ರತಿಕ್ರಿಯಿಸಿದರು. “ಅವರು ಏನು ಬೇಕಾದರೂ ಮಾಡಲಿ. ಅವರು ಬಿಜೆಪಿಯ ಆಶ್ರಯದಲ್ಲಿ ಬದುಕಬೇಕಾಗುತ್ತದೆ. ಇದೆಲ್ಲವೂ ಒಂದು ತಂತ್ರ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ತೋಟಗಾರಿಕೆ ಇಲಾಖೆ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯೋತ್ಸವ...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಹೆಚ್‌ಡಿಕೆ ನಿವಾಸದಲ್ಲಿ ಮೊಬೈಲ್ ಹಸ್ತಾಂತರ, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್ ಸೀಮಂತ್ ಸಿಂಗ್

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...

ಮತಕಳವು ಸಾಮಾನ್ಯ ಕಳ್ಳತನವಲ್ಲ, ಇದು ದೇಶದ್ರೋಹ: ಗ್ಯಾನೇಶ್, ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

​"ಮತಕಳವು ಯಾವುದೇ ಅಂಗಡಿಯೊಂದರಲ್ಲಿ ನಡೆಯುವಂತಹ ಸಾಮಾನ್ಯ ಕಳ್ಳತನವಲ್ಲ. ಬದಲಾಗಿ, ಇದು ದೇಶದ...

ಬೀದರ್‌ | ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ : ಪಿ.ಪಿ.ಅಪ್ಪಣ್ಣ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆದು, ಕಾರ್ಮಿಕರಿಗೆ ನ್ಯಾಯಯುತವಾಗಿ...