ಲಿವ್-ಇನ್‌ ಜೋಡಿಗೆ ಪೊಲೀಸ್‌ ರಕ್ಷಣೆ ಇಲ್ಲ: ಪಂಜಾಬ್-ಹರಿಯಾಣ ಹೈಕೋರ್ಟ್!

Date:

ಮನೆ ಬಿಟ್ಟು ಓಡಿಬಂದು ಲಿವ್-ಇನ್ ಸಂಬಂಧದಲ್ಲಿ ಜೀವಿಸುತ್ತಿರುವ ಜೋಡಿಯೊಂದಕ್ಕೆ ಪೊಲೀಸ್ ರಕ್ಷಣೆ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿದೆ. ಲಿವ್-ಇನ್ ಸಂಬಂಧಗಳನ್ನು ಇಂದಿನ ಸಮಾಜದ ಒಂದು ವರ್ಗ “ಆಧುನಿಕ ಜೀವನಶೈಲಿ” ಎಂದು ಒಪ್ಪಿಕೊಳ್ಳುತ್ತಿದೆಯಾದರೂ, ಪೋಷಕರ ಅನುಮತಿಯಿಲ್ಲದೆ ಮನೆ ಬಿಟ್ಟು ಓಡಿಹೋಗುವ ಮಕ್ಕಳು ತಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ತರುತ್ತಾರೆ ಮತ್ತು ಪೋಷಕರ ಘನತೆ ಹಾಗೂ ಗೌರವಕ್ಕೆ ಧಕ್ಕೆ ತರುತ್ತಾರೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

- Advertisement -

ಯುವ ಜೋಡಿಯೊಂದು ಸಲ್ಲಿಸಿದ್ದ ರಕ್ಷಣೆಯ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಂದೀಪ್ ಮೌದ್ಗಿಲ್ ಅವರ ಪೀಠವು, ಕೇವಲ ಕೆಲವು ದಿನಗಳ ಕಾಲ ಒಟ್ಟಿಗೆ ವಾಸಿಸುವುದನ್ನು ನೈಜ ಲಿವ್-ಇನ್ ಸಂಬಂಧ ಎಂದು ಪರಿಗಣಿಸಲು ಸಾಧ್ಯವಿಲ್ಲ. ಅದರಲ್ಲೂ ಭವಿಷ್ಯದಲ್ಲಿ ಮದುವೆಯಾಗುವುದಾಗಿ ಅವರೇ ಒಪ್ಪಿಕೊಂಡಿರುವಾಗ, ಇಂತಹ ಸಂದರ್ಭಗಳಲ್ಲಿ ಪೊಲೀಸ್ ರಕ್ಷಣೆ ನೀಡುವುದು ನ್ಯಾಯಾಲಯವೇ ಈ “ಅಕ್ರಮ ಸಂಬಂಧ”ಕ್ಕೆ ಪರೋಕ್ಷವಾಗಿ ಅನುಮೋದನೆ ನೀಡಿದಂತಾಗುತ್ತದೆ. ಭಾರತೀಯ ಸಂವಿಧಾನದ ವಿಧಿ 21ರ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು, ಘನತೆಯಿಂದ ಬದುಕುವ ಹಕ್ಕನ್ನು ಒಳಗೊಂಡಿದೆ. ಅರ್ಜಿದಾರರು ತಮ್ಮ ಪೋಷಕರ ಮನೆಯಿಂದ ಓಡಿಹೋಗುವ ಮೂಲಕ ಕುಟುಂಬಕ್ಕೆ ಕೆಟ್ಟ ಹೆಸರು ತರುತ್ತಿರುವುದು ಮಾತ್ರವಲ್ಲದೆ, ಪೋಷಕರು ಗೌರವದಿಂದ ಬದುಕುವ ಹಕ್ಕನ್ನು ಸಹ ಉಲ್ಲಂಘಿಸುತ್ತಿದ್ದಾರೆ” ಎಂದು ಕೋರ್ಟ್‌ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಭಾರತವು ವೈವಿಧ್ಯಮಯ ತತ್ವಗಳು, ಸಂಪ್ರದಾಯಗಳು, ಆಚರಣೆಗಳು ಮತ್ತು ನಂಬಿಕೆಗಳನ್ನು ಹೊಂದಿರುವ ದೇಶವಾಗಿದ್ದು, ಇವುಗಳೇ ಇಲ್ಲಿನ ಕಾನೂನಿನ ಪ್ರಮುಖ ಮೂಲಗಳಾಗಿವೆ. ಮದುವೆ ಎಂಬುದು ಕಾನೂನಾತ್ಮಕ ಪರಿಣಾಮಗಳು ಮತ್ತು ಹೆಚ್ಚಿನ ಸಾಮಾಜಿಕ ಗೌರವವನ್ನು ಹೊಂದಿರುವ ಒಂದು ಪವಿತ್ರ ಸಂಬಂಧವಾಗಿದೆ. ಕಾಲ ಬದಲಾದಂತೆ ಸಮಾಜವು ಭಾರತೀಯ ಸಂಸ್ಕೃತಿಗಿಂತ ಸಂಪೂರ್ಣವಾಗಿ ಭಿನ್ನವಾಗಿರುವ ಪಾಶ್ಚಾತ್ಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಪ್ರಾರಂಭಿಸಿದೆ. ಇಂತಹ ಪ್ರಕರಣಗಳಲ್ಲಿ ರಕ್ಷಣೆ ನೀಡುತ್ತಾ ಹೋದರೆ ಸಮಾಜದ ಒಟ್ಟಾರೆ ಸಾಮಾಜಿಕ ವ್ಯವಸ್ಥೆಯೇ ತಲ್ಲಣಗೊಳ್ಳಬಹುದು ಎಂಬ ಕಾರಣಕ್ಕೆ ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಕೋರ್ಟ್‌ಗಳು ಲಿವ್-ಇನ್ ಜೋಡಿಗಳಿಗೆ ರಕ್ಷಣೆ ನೀಡಲು ನಿರಾಕರಿಸಿವೆ ಎಂಬುದನ್ನು ಕೋರ್ಟ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ರಾಮಮಂದಿರ ಚಂದಾ ವಿವಾದ: ಉನ್ನತ ಮಟ್ಟದ ತನಿಖೆಗೆ ಅಯೋಧ್ಯೆ ಸಂಸದ ಅವಧೇಶ್ ಪ್ರಸಾದ್ ಒತ್ತಾಯ

“ಅರ್ಜಿದಾರ ಜೋಡಿಯು, ತಾವು ಇಬ್ಬರೂ ಮೇಜರ್ (18 ವರ್ಷ ಮೇಲ್ಪಟ್ಟವರು) ಆಗಿದ್ದು, ಅವಿವಾಹಿತರಾಗಿದ್ದಾರೆ ಎಂದು ತಿಳಿಸಿದ್ದರು. ತಾವಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಭವಿಷ್ಯದಲ್ಲಿ ಮದುವೆಯಾಗುವ ಉದ್ದೇಶದಿಂದ ಸದ್ಯಕ್ಕೆ ಲಿವ್-ಇನ್ ಸಂಬಂಧದಲ್ಲಿದ್ದೇವೆ ಎಂದು ಕೋರಿದ್ದರು. ಯುವತಿಯ ಕುಟುಂಬದವರು ತಮಗೆ ಕಿರುಕುಳ ನೀಡುತ್ತಿದ್ದು, ಯುವಕನ ಜೊತೆಗಿನ ಸಂಬಂಧವನ್ನು ಮುರಿದುಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ. ಒಂದು ವೇಳೆ ಮಾತು ಕೇಳದಿದ್ದರೆ ಯುವಕನ ಮೇಲೆ ಸುಳ್ಳು ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ತಮಗೆ ರಕ್ಷಣೆ ನೀಡುವಂತೆ ಜೂನ್ 1 ರಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೂ (SP) ಮನವಿ ಸಲ್ಲಿಸಲಾಗಿತ್ತು ಎಂದು ಜೋಡಿಯು ಕೋರ್ಟ್‌ಗೆ ತಿಳಿಸಿತ್ತು.

ಈ ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ವಕೀಲೆ ಕೋಮಲ್ ಸಿಧು ವಾದ ಮಂಡಿಸಿದರೆ, ರಾಜ್ಯ ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ರಾಜೀವ್ ವರ್ಮಾ ಹಾಜರಾಗಿದ್ದರು. ಆದರೆ, ಕೋರ್ಟ್ ಇವರ ರಕ್ಷಣೆಯ ಅರ್ಜಿಯನ್ನು ವಜಾಗೊಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಕೊಪ್ಪಳ ಜಿಲ್ಲೆಯ ಇಬ್ಬರು ಜಾನಪದ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ಕನ್ನಡ ನಾಡು, ನುಡಿ ಹಾಗೂ ಜಾನಪದ ಕಲೆಯ ಉಳಿವು ಮತ್ತು ಬೆಳವಣಿಗೆಗೆ...

ಚಿಟಗುಪ್ಪ | ಆರೋಗ್ಯವಂತ ಬದುಕಿಗೆ ಯೋಗವೇ ಮದ್ದು: ಚಂದ್ರಕಾಂತ ಗಂಗಶೆಟ್ಟಿ

ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡುವಲ್ಲಿ ಯೋಗಾಭ್ಯಾಸ ಮಹತ್ವದ...

‘ಕದನ ವಿರಾಮ ಎಂಬುದು ಬರಿ ಕಣ್ಣೊರೆಸುವ ತಂತ್ರ’; ಇಸ್ರೇಲ್ ವಿರುದ್ಧ ವಿಶ್ವಸಂಸ್ಥೆ ಆಕ್ರೋಶ

ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದಲ್ಲಿ ಇಸ್ರೇಲ್ ಪಡೆಗಳು ನಡೆಸುತ್ತಿರುವ ಹಿಂಸಾಚಾರ ಮತ್ತು ಮಾನವಹಕ್ಕುಗಳ...

ಸೋಮನಾಥ ದೇಗುಲದ ಸುತ್ತ ಮಾಂಸಾಹಾರ ನಿಷೇಧ ಮುಂದುವರಿಕೆ; ಏಕಸದಸ್ಯ ಪೀಠದ ಆದೇಶಕ್ಕೆ ಗುಜರಾತ್ ಹೈಕೋರ್ಟ್ ತಡೆ

ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಂಸಾಹಾರ ತಯಾರಿಕೆ, ಮಾರಾಟ...