ಲಿವ್-ಇನ್ ಸಂಬಂಧ ಮಧ್ಯಮ ವರ್ಗದ ಮೌಲ್ಯಕ್ಕೆ ವಿರುದ್ಧ, ಮಹಿಳೆಯರಿಗೆ ಹೆಚ್ಚು ಹಾನಿ ಮಾಡುತ್ತದೆ: ಅಲಹಾಬಾದ್ ಹೈಕೋರ್ಟ್‌

Date:

ಲಿವ್-ಇನ್ ಸಂಬಂಧವು ಮಹಿಳೆಯರಿಗೆ ಹೆಚ್ಚು ಹಾನಿ ಮಾಡುತ್ತದೆ. ಸಂಬಂಧದಿಂದ ಬೇರ್ಪಟ್ಟಾಗ ಮಹಿಳೆಯರಿಗೆ ಸಮಸ್ಯೆಯಾಗುತ್ತದೆ. ಪುರುಷರು ಮದುವೆಯಾಗಿ ತಮ್ಮ ಜೀವನ ಮುಂದುವರಿಸುತ್ತಾರೆ. ಆದರೆ ಮಹಿಳೆಯರಿಗೆ ಜೀವನ ಸಂಗಾತಿಯನ್ನು ಹುಡುಕುವುದು ಕಷ್ಟ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

- Advertisement -

ನ್ಯಾಯಮೂರ್ತಿ ಸಿದ್ಧಾರ್ಥ್ ಅವರನ್ನು ಒಳಗೊಂಡ ಏಕಸದಸ್ಯ ಪೀಠವು ಲಿವ್‌-ಇನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಲಿವ್‌-ಇನ್ ಎಂಬುದು ಮಧ್ಯಮ ವರ್ಗದ ಭಾರತೀಯ ಸಮಾಜದ ಸ್ಥಿರವಾದ ಮಾನದಂಡಗಳಿಗೆ ವಿರುದ್ಧವಾಗಿವೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಹಿಂದೂಗಳ ವಿವಾಹ ‘ಪವಿತ್ರವಾದುದ್ದು’ ವರ್ಷದಲ್ಲೇ ರದ್ದುಗೊಳಿಸಲಾಗದು: ಅಲಹಾಬಾದ್ ಹೈಕೋರ್ಟ್

“ಲಿವ್-ಇನ್ ಸಂಬಂಧ ಪರಿಕಲ್ಪನೆಯು ಮಹಿಳೆಯರ ಹಿತಾಸಕ್ತಿಗೆ ವಿರುದ್ಧವಾಗಿದೆ. ಲಿವ್‌-ಇನ್ ಸಂಬಂಧದ ಬಳಿಕವೂ ಪುರುಷರು ಹಲವು ಬೇರೆ ಮದುವೆಯಾಗಬಹುದು, ಬೇರೆ ಮಹಿಳೆಯೊಂದಿಗೆ ಸಂಬಂಧವೂ ಇಟ್ಟುಕೊಳ್ಳಬಹುದು. ಆದರೆ ಮಹಿಳೆಯರಿಗೆ ಬೇರೆ ಸಂಗಾತಿಯನ್ನು ಹುಡುಕುವುದು ಕಷ್ಟ” ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್‌ ಲಿವ್-ಇನ್ ಸಂಬಂಧವನ್ನು ಕಾನೂನುಬದ್ಧಗೊಳಿಸಿದ ಬಳಿಕ ನ್ಯಾಯಾಲಯದಲ್ಲಿ ಅಂತಹ ಪ್ರಕರಣಗಳೇ ತುಂಬಿದೆ. ಈ ಪ್ರಕರಣವನ್ನು ಮಧ್ಯಮ ವರ್ಗದ ಸಮಾಜದಲ್ಲಿ ಇತ್ಯರ್ಥಪಡಿಸಲು ಸಾಧ್ಯವಾಗದ ಕಾರಣದಿಂದಾಗಿ ನ್ಯಾಯಾಲಯದವರೆಗೂ ಬರುತ್ತಿದೆ” ಎಂದು ಕೋರ್ಟ್ ತಿಳಿಸಿದೆ.

ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಈ ಹೇಳಿಕೆ ನೀಡಿದ್ದಾರೆ. ವಿವಾಹದ ಸುಳ್ಳು ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ ಆರೋಪದ ಪ್ರಕರಣ ಇದಾಗಿದೆ.

ಅಲಹಾಬಾದ್ ಹೈಕೋರ್ಟ್‌ ನ್ಯಾಯಾಮೂರ್ತಿಗಳ ಈ ಅಭಿಪ್ರಾಯವು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಪುರುಷರು ಹೇಗಿದ್ದರೂ ನಡೆಯುತ್ತದೆ, ಆದರೆ ಮಹಿಳೆ ಮಾತ್ರ ಸಮಾಜ ಬೆಳೆಸಿದ ನಿಯಮಗಳಿಗೆ ಬದ್ಧವಾಗಿರಬೇಕು ಎಂಬಂತಹ ಹೇಳಿಕೆ ನೀಡಿರುವುದು ವಿಷಾದನೀಯ. ಸುಪ್ರೀಂ ಕೋರ್ಟ್‌ ಲಿವ್‌-ಇನ್‌ ಸಂಬಂಧಗಳನ್ನು ಕಾನೂನುಬದ್ಧಗೊಳಿಸಿದೆ. ಲಿವ್-ಇನ್ ಸಂಬಂಧಗಳನ್ನು ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿಯಲ್ಲಿಯೂ ಗುರುತಿಸಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...