ಲೋಕಸಭಾ ಚುನಾವಣೆ | 6ನೇ ಹಂತದಲ್ಲಿ ಶೇ.59ರಷ್ಟು ಮತದಾನ: ಚುನಾವಣಾ ಆಯೋಗ

Date:

Advertisements

ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ 6ನೇ ಹಂತದ ಮತದಾನ ಪ್ರಕ್ರಿಯೆ ಮೇ 25ರಂದು ನಡೆದಿದ್ದು, 59.06 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮೇ 26ರಂದು ಅಧಿಕೃತ ಅಂಕಿ-ಅಂಶಗಳನ್ನು ಆಯೋಗದ ಅಧಿಕಾರಿಗಳು ಪ್ರಕಟಿಸಲಿದ್ದಾರೆ.

ಶನಿವಾರ ಆರನೇ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆದಿದ್ದು, ರಾತ್ರಿ 7.45ಕ್ಕೆ ಚುನಾವಣಾ ಆಯೋಗವು ಹೊರಡಿಸಿರುವ ಪ್ರಕಟಣೆಯಲ್ಲಿ 59.06 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ತಿಳಿಸಿದೆ.

ದೆಹಲಿಯಲ್ಲಿ ಶೇ.54.48ರಷ್ಟು ಮತದಾನ ದಾಖಲಾದರೆ, ಪಶ್ಚಿಮ ಬಂಗಾಳದಲ್ಲಿ 78.19ರಷ್ಟು ಮತದಾನ ದಾಖಲಾಗಿದೆ. ಆ ಮೂಲಕ ಆರನೇ ಹಂತದಲ್ಲಿ ಅತಿಹೆಚ್ಚು ಮತದಾನ ದಾಖಲಾದ ರಾಜ್ಯ ಎಂಬ ಖ್ಯಾತಿ ಪಶ್ಚಿಮ ಬಂಗಾಳದ್ದಾಗಿದೆ.

Advertisements

ಉಳಿದಂತೆ ಬಿಹಾರದಲ್ಲಿ 53.30%, ಹರಿಯಾಣದಲ್ಲಿ 58.37%, ಜಮ್ಮು-ಕಾಶ್ಮೀರದಲ್ಲಿ 52.28%, ಜಾರ್ಖಂಡ್‌ನಲ್ಲಿ 62.74%, ಒಡಿಶಾದಲ್ಲಿ 60.07%, ಉತ್ತರ ಪ್ರದೇಶದಲ್ಲಿ 54.03% ದಷ್ಟು ಮತದಾನ ನಡೆದಿರುವುದಾಗಿ ಆಯೋಗ ಮಾಹಿತಿ ನೀಡಿದೆ. ಜೂನ್ 1ರಂದು ಕೊನೆಯ ಹಾಗೂ 7ನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ.

EC 1

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದರು. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆದಿದೆ.

ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆದಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ಕ್ರಿಕೆಟಿಗರಾದ ಗೌತಮ್‌ ಗಂಭೀರ್‌, ಎಂ ಎಸ್ ಧೋನಿ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್, ಆಯಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಡಾ. ಸುಖ್‌ಬೀರ್ ಸಿಂಗ್ ಸಂಧು ಸೇರಿ ಹಲವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದರು. ಇದರೊಂದಿಗೆ ಆರನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X