ಇಲ್ಲಿಯವರೆಗೂ ನಡೆದ 4 ಹಂತದ ಲೋಕಸಭಾ ಚುನಾವಣೆಗಳಲ್ಲಿ ಶೇ.67.45 ರಷ್ಟು ಮತದಾನ ವಾಗಿದ್ದು, ಮುಂದಿನ ಮೂರು ಹಂತದಲ್ಲಿ ಮತ್ತಷ್ಟು ಮತದಾನವನ್ನು ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಏ.19,26 ಹಾಗೂ ಮೇ.7 ಮತ್ತು 13 ರಂದು 23 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 379 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 45.1 ಕೋಟಿ ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಆಯೋಗ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು
ಇನ್ನು ಮೇ.20, ಮೇ.25 ಹಾಗೂ ಜೂನ್ 1ರಂದು 3 ಹಂತಗಳಲ್ಲಿ 13 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 164 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮತ ಎಣಿಕೆ ಜೂ.4 ರಂದು ನಡೆಯಲಿದೆ.
ಉಳಿದ ಹಂತಗಳಲ್ಲಿ ಮತದಾನವನ್ನು ಮತ್ತಷ್ಟು ಹೆಚ್ಚಿಸಲು ವಿವಿಧ ರೀತಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಆಯೋಗ ಹೇಳಿದೆ.
