ಲೋಕಸಭಾ ಚುನಾವಣೆಗೆ 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Date:

Advertisements

ಏಪ್ರಿಲ್‌ 19ರಿಂದ ಆರಂಭವಾಗುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 6ನೇ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ನಿಡಲಾಗಿರುವ ಐದು ಮಂದಿ ಅಭ್ಯರ್ಥಿಗಳಲ್ಲಿ ನಾಲ್ವರು ರಾಜಸ್ಥಾನ ಹಾಗೂ ಒಬ್ಬರು ತಮಿಳುನಾಡಿನಿಂದ ಸ್ಪರ್ಧೆ ಮಾಡಲಿದ್ದಾರೆ.

ರಾಜಸ್ಥಾನದ ಕೋಟದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ಪ್ರಹ್ಲಾದ್ ಗುಂಜಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.

ಅಜ್ಮೀರ್‌ನಿಂದ ರಾಮಚಂದ್ರ ಚೌಧರಿ, ರಜಸಮಾಂಡ್‌ನಿಂದ ಸುದರ್ಶನ್ ರಾವತ್, ಬಿಲ್ವಾರದಿಂದ ದಾಮೋದರ್ ಗುರ್ಜರ್ ಹಾಗೂ ತಮಿಳುನಾಡಿನ ತಿರುನಲ್ವೇಲಿ ಕ್ಷೇತ್ರದಿಂದ ಸಿ ರಾಬರ್ಟ್ ಬ್ರೂಸ್ ಸ್ಪರ್ಧಿಸಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ – ಐಪಿಎಲ್‌ ಕ್ರಿಕೆಟ್‌ನಲ್ಲಿ ಅಪ್ಪ-ಮಗನ ಆಟ

ಬಿಜೆಪಿಯಲ್ಲಿದ್ದ ಪ್ರಹ್ಲಾದ್ ಗುಂಜಾಲ್ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಗುಂಜಾಲ್ ಅವರು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ ಅವರ ನಿಕಟವರ್ತಿಯಾಗಿದ್ದು, ಉತ್ತರ ಕೋಟದಿಂದ ಎರಡು ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಫರಾಭವಗೊಂಡಿದ್ದರು.

ಏಳು ಹಂತದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಇಲ್ಲಿಯವರೆಗೂ 190 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Download Eedina App Android / iOS

X