ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

Date:

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ 102 ಕ್ಷೇತ್ರಗಳ 1,600ಕ್ಕೂ ಹೆಚ್ಚು ಅಭ್ಯರ್ಥಿಗಳ ಜನಾದೇಶ ಇಂದು ನಿರ್ಧಾರವಾಗಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 16.63 ಕೋಟಿಗೂ ಹೆಚ್ಚು ಮಂದಿ ಮತ ಚಲಾಯಿಸಲಿದ್ದಾರೆ.

- Advertisement -

ಚುನಾವಣೆಗೆ ಸ್ಪರ್ಧಿಸಿದವರಲ್ಲಿ ಎಂಟು ಮಂದಿ ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಒಬ್ಬರು ಮಾಜಿ ರಾಜ್ಯಪಾಲರು ಕೂಡ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸರ್ಬಾನಂದ ಸೋನೋವಾಲ್, ಭೂಪೇಂದ್ರ ಯಾದವ್, ಕಾಂಗ್ರೆಸ್‌ನ ಗೌರವ್ ಗೊಗೋಯ್, ಡಿಎಂಕೆಯ ಕನಿಮೋಳಿ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕೇಂದ್ರ ಸಚಿವರಾದ ಕಿರಣ್ ರಿಜಿಜು, ಸಂಜೀವ್ ಬಲಿಯಾನ್, ಜಿತೇಂದ್ರ ಸಿಂಗ್, ಅರ್ಜುನ್ ರಾಮ್ ಮೇಘಾ ವಾಲ್, ಎಲ್. ಮುರುಗನ್, ನಿಸಿತ್ ಪ್ರಮಾಣಿಕ್ ಕೂಡ ಕಣದಲ್ಲಿದ್ದಾರೆ.

ಮಾಜಿ ಸಿಎಂ ಬಿಪ್ಲಬ್ ಕುಮಾರ್ ದೇವ್, ನಬಾಮ್ ತುಕಿ ಮತ್ತು ಮಾಜಿ ರಾಜ್ಯಪಾಲೆ ತಮಿಳ್ಸಾಯ್ ಸೌಂದರ್ರಾಜನ್ ಅವರು ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಇದನ್ನು ಓದಿದ್ದೀರಾ?: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ದಿಗ್ಗಜರ ದಿಕ್ಕೆಡಿಸಿದ, ಅವಾಂತರಕಾರಿಗಳಿಗೆ ಮಣೆ ಹಾಕಿದ ಕ್ಷೇತ್ರ

ಏಳು ಹಂತಗಳಲ್ಲಿ ನಡೆಯಲಿರುವ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ, ಶುಕ್ರವಾರ ನಡೆಯಲಿರುವ ಹಂತವು ಅತಿ ದೊಡ್ಡದಾಗಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗಳ ಒಟ್ಟು 92 ಕ್ಷೇತ್ರಗಳಿಗೆ ಕೂಡ ಇಂದೇ ಮತದಾನ ನಡೆಯಲಿದೆ.

ಮತದಾನವು ಬೆಳಿಗ್ಗೆ 7 ಗಂಟೆಗೆ ಶುರುವಾಗಲಿದ್ದು, ಸಂಜೆ 6ಕ್ಕೆ ಮುಕ್ತಾಯವಾಗಲಿದೆ. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯನ್ನು ಒಂದೆಡೆಯಿಂದ ಇನ್ನೊಂದೆಡೆ ಕರೆದೊಯ್ಯಲು 41 ಹೆಲಿಕಾಪ್ಟರ್‌ಗಳು, 84 ವಿಶೇಷ ರೈಲುಗಳು ಹಾಗೂ ಸರಿಸುಮಾರು ಒಂದು ಲಕ್ಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮಾಹಿತಿ ನೀಡಿದೆ.

ಶೇಕಡ 50ಕ್ಕೂ ಹೆಚ್ಚಿನ ಮತಗಟ್ಟೆ ಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇರಲಿದೆ. ಅಲ್ಲದೆ, ಎಲ್ಲ ಮತಗಟ್ಟೆಗಳಿಗೆ ಸೂಕ್ಷ್ಮ ಪರಿವೀಕ್ಷಕರನ್ನು ನೇಮಿಸಲಾಗುತ್ತದೆ.

ಶುಕ್ರವಾರ ಮತದಾನ ನಡೆಯಲಿರುವ ರಾಜ್ಯಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ ಸೇರಿವೆ.

ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯ ಶುಕ್ರವಾರದಂದು ಚುನಾವಣೆಗಳು ನಡೆಯಲಿವೆ.

ಒಟ್ಟು ರಾಜ್ಯ, ಕೇಂದ್ರಾಡಳಿತ ಪ್ರದೇಶ 21

ಒಟ್ಟು ಲೋಕಸಭಾ ಕ್ಷೇತ್ರಗಳು 102

ಒಟ್ಟು ಅಭ್ಯರ್ಥಿಗಳು 1,625

ಮತದಾನ ಕೇಂದ್ರಗಳು 1.87 ಲಕ್ಷ

ಚುನಾವಣ ಸಿಬಂದಿ 18 ಲಕ್ಷ

ಒಟ್ಟು ಮತದಾರರು 16.63 ಕೋಟಿ

ಪುರುಷ ಮತದಾರರು 8.4 ಕೋಟಿ

ಮಹಿಳಾ ಮತದಾರರು 8.23 ಕೋಟಿ

ಲಿಂಗತ್ವ ಅಲ್ಪಸಂಖ್ಯಾತರು 11,371

ಮೊದಲ ಬಾರಿ ಹಕ್ಕು ಚಲಾಯಿಸುವವರು: 35.67 ಲಕ್ಷ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...