ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

Date:

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಗಾಯಗೊಂಡಿದ್ದಾರೆ.

- Advertisement -

69 ವರ್ಷದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ನಲ್ಲಿ ಕುಳಿತುಕೊಳ್ಳಲು ಹೋಗುವಾಗ ಎಡವಿ ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಭದ್ರತಾ ಸಿಬ್ಬಂದಿ ಬ್ಯಾನರ್ಜಿ ಮೇಲೆದ್ದು ಹೆಲಿಕಾಪ್ಟರ್‌ನ ಸೀಟ್‌ನಲ್ಲಿ ಕುಳಿತುಕೊಳ್ಳಲು ಸಹಾಯ ಮಾಡಿದ್ದಾರೆ. ಅದಾದ ಬಳಿಕ ಮಮತಾ ಅಸನ್ಸೋಲ್‌ಗೆ ಪ್ರಯಾಣ ಮುಂದುವರಿಸಿದ್ದಾರೆ.

ಇದನ್ನು ಓದಿದ್ದೀರಾ?  ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡ ಮಮತಾ ಬ್ಯಾನರ್ಜಿ

ಒಂದು ತಿಂಗಳ ಹಿಂದೆ, ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತಾದ ಕಾಳಿಘಾಟ್ ನಿವಾಸದಲ್ಲಿ ಬಿದ್ದು ಅವರ ಹಣೆಯ ಮೇಲೆ ಗಾಯವಾಗಿತ್ತು. ಬಳಿಕ ಅವರನ್ನು ಕೋಲ್ಕತ್ತಾದ ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಎಸ್‌ಎಸ್‌ಕೆಎಂ ಆಸ್ಪತ್ರೆಯ ನಿರ್ದೇಶಕ ಮಣಿಮೊಯ್ ಬಂಡೋಪಾಧ್ಯಾಯ ಅವರು ತಮ್ಮ ಹೇಳಿಕೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ‘ಹಿಂಭಾಗದಿಂದ ತಳ್ಳಿದ’ ನಂತರ ಅವರು ಬಿದ್ದು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...