ಕಾಂಗ್ರೆಸ್‌ಗೆ ಸೇರ್ಪಡೆಯಾದ ಬಿಜೆಪಿ ಸಂಸದ

Date:

Advertisements

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಮುನ್ನ ಬಿಹಾರದ ಬಿಜೆಪಿ ಸಂಸದ ಅಜಯ್‌ ಕುಮಾರ್ ನಿಶಾದ್ ಕಾಂಗ್ರೆಸ್‌ ಗೆ ಸೇರ್ಪಡೆಯಾಗಿದ್ದಾರೆ.

ಬಿಹಾರದ ಮುಜಾಫರಾಪುರ್‌ ಸಂಸದರಾದ ನಿಶಾದ್ 2014 ಹಾಗೂ 2019ರಲ್ಲಿ ಬಿಜೆಪಿಯಿಂದ ಸಂಸರಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿರುವುದಕ್ಕೆ ಕಾಂಗ್ರೆಸ್‌ಗೆ ಸೇರಿಕೊಂಡಿದ್ದಾರೆ.

ನಿಶಾದ್ ಕಾಂಗ್ರೆಸ್‌ ಸೇರ್ಪಡೆಯಿಂದ ಬಿಹಾರದ ಮುಜಾಫರಾಪುರ್‌, ದರ್‌ಬಂಗಾ, ಚಂಪಾರಣ್ ಹಾಗೂ ಮಧುಬನಿ ಕ್ಷೇತ್ರಗಳ ಹಿಂದುಳಿದ ವರ್ಗದ ಮತಗಳನ್ನು ಕ್ರೋಢೀಕರಿಸಲು ಕಾಂಗ್ರೆಸ್‌ಗೆ ಸಹಾಯಕವಾಗಲಿದೆ.

Advertisements

ಈ ಮೊದಲು ಬಿಹಾರದ ಚಿರು ಕ್ಷೇತ್ರದ ರಾಹುಲ್ ಕೇಶವನ್ ಹಾಗೂ ಹಿಸಾರ್ ಕ್ಷೇತ್ರಗಳ ಸಂಸದರಾದ ಬ್ರಿಜೇಂದ್ರ ಸಿಂಗ್‌ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ನಿಶಾದ್ ತಂದೆ ಜೈ ನಾರಾಯಣ್‌ ಪ್ರಸಾದ್ ನಿಶಾದ್ ಅವರು ಆರ್‌ಜೆಡಿಯಿಂದ 1996-2004 ಹಾಗೂ ಜೆಡಿಯುನಿಂದ 2009-14ರವರೆಗೆ ಮುಜಾಫರಾಪುರ್‌ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿದ್ದರು. ನಂತರ ತಂದೆ, ಮಗ ಇಬ್ಬರು ಬಿಜೆಪಿ ಸೇರ್ಪಡೆಗೊಂಡಿದ್ದರು.

ಬಿಹಾರದ ಕಾಂಗ್ರೆಸ್‌ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್‌, ರಾಜ್ಯದ ಎಐಸಿಸಿ ಉಸ್ತುವಾರಿ ಮೋಹನ್ ಪ್ರಕಾಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪವನ್‌ ಖೇರಾ ಉಪಸ್ಥಿತಿಯಲ್ಲಿ ನವದೆಹಲಿಯ ಎಐಸಿಸಿ ಮುಖ್ಯಕಚೇರಿಯಲ್ಲಿ ಅಜಯ್‌ ಕುಮಾರ್ ನಿಶಾದ್ ಕೈ ಪಕ್ಷಕ್ಕೆ ಸೇರ್ಪಡೆಯಾದರು.

“ನಾನು ಕೆಲವರ ಅಹಂಕಾರವನ್ನು ಹತ್ತಿಕ್ಕಬೇಕು. ನಾನು ನನ್ನ ಸ್ವಾಭಿಮಾನವನ್ನು ಮರಳಿ ಪಡೆಯಬೇಕು. ಗಲ್ಲು ಶಿಕ್ಷೆಗೆ ಒಳಗಾದ ವ್ಯಕ್ತಿಗೂ ಅಂತಿಮ ಅವಕಾಶ ನೀಡಲಾಗುತ್ತದೆ. ಆದರೆ ನನ್ನ ಟಿಕೆಟ್ ತಪ್ಪಿಸಲು ನನ್ನನ್ನು ಒಮ್ಮೆಯು ಮಾತನಾಡಿಸಿಲ್ಲ.ಇದು ಹಣಬಲದ ಚುನಾವಣೆಯಲ್ಲ, ಜನಬಲದ ಚುನಾವಣೆ” ಎಂದು ನಿಶಾದ್ ಕಾಂಗ್ರೆಸ್ ಸೇರ್ಪಡೆ ನಂತರ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X