ಕಾಂಗ್ರೆಸ್‌ಗೆ ಸೇರ್ಪಡೆಯಾದ ಬಿಜೆಪಿ ಸಂಸದ

Date:

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಮುನ್ನ ಬಿಹಾರದ ಬಿಜೆಪಿ ಸಂಸದ ಅಜಯ್‌ ಕುಮಾರ್ ನಿಶಾದ್ ಕಾಂಗ್ರೆಸ್‌ ಗೆ ಸೇರ್ಪಡೆಯಾಗಿದ್ದಾರೆ.

- Advertisement -

ಬಿಹಾರದ ಮುಜಾಫರಾಪುರ್‌ ಸಂಸದರಾದ ನಿಶಾದ್ 2014 ಹಾಗೂ 2019ರಲ್ಲಿ ಬಿಜೆಪಿಯಿಂದ ಸಂಸರಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿರುವುದಕ್ಕೆ ಕಾಂಗ್ರೆಸ್‌ಗೆ ಸೇರಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

ನಿಶಾದ್ ಕಾಂಗ್ರೆಸ್‌ ಸೇರ್ಪಡೆಯಿಂದ ಬಿಹಾರದ ಮುಜಾಫರಾಪುರ್‌, ದರ್‌ಬಂಗಾ, ಚಂಪಾರಣ್ ಹಾಗೂ ಮಧುಬನಿ ಕ್ಷೇತ್ರಗಳ ಹಿಂದುಳಿದ ವರ್ಗದ ಮತಗಳನ್ನು ಕ್ರೋಢೀಕರಿಸಲು ಕಾಂಗ್ರೆಸ್‌ಗೆ ಸಹಾಯಕವಾಗಲಿದೆ.

ಈ ಮೊದಲು ಬಿಹಾರದ ಚಿರು ಕ್ಷೇತ್ರದ ರಾಹುಲ್ ಕೇಶವನ್ ಹಾಗೂ ಹಿಸಾರ್ ಕ್ಷೇತ್ರಗಳ ಸಂಸದರಾದ ಬ್ರಿಜೇಂದ್ರ ಸಿಂಗ್‌ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ನಿಶಾದ್ ತಂದೆ ಜೈ ನಾರಾಯಣ್‌ ಪ್ರಸಾದ್ ನಿಶಾದ್ ಅವರು ಆರ್‌ಜೆಡಿಯಿಂದ 1996-2004 ಹಾಗೂ ಜೆಡಿಯುನಿಂದ 2009-14ರವರೆಗೆ ಮುಜಾಫರಾಪುರ್‌ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿದ್ದರು. ನಂತರ ತಂದೆ, ಮಗ ಇಬ್ಬರು ಬಿಜೆಪಿ ಸೇರ್ಪಡೆಗೊಂಡಿದ್ದರು.

ಬಿಹಾರದ ಕಾಂಗ್ರೆಸ್‌ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್‌, ರಾಜ್ಯದ ಎಐಸಿಸಿ ಉಸ್ತುವಾರಿ ಮೋಹನ್ ಪ್ರಕಾಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪವನ್‌ ಖೇರಾ ಉಪಸ್ಥಿತಿಯಲ್ಲಿ ನವದೆಹಲಿಯ ಎಐಸಿಸಿ ಮುಖ್ಯಕಚೇರಿಯಲ್ಲಿ ಅಜಯ್‌ ಕುಮಾರ್ ನಿಶಾದ್ ಕೈ ಪಕ್ಷಕ್ಕೆ ಸೇರ್ಪಡೆಯಾದರು.

“ನಾನು ಕೆಲವರ ಅಹಂಕಾರವನ್ನು ಹತ್ತಿಕ್ಕಬೇಕು. ನಾನು ನನ್ನ ಸ್ವಾಭಿಮಾನವನ್ನು ಮರಳಿ ಪಡೆಯಬೇಕು. ಗಲ್ಲು ಶಿಕ್ಷೆಗೆ ಒಳಗಾದ ವ್ಯಕ್ತಿಗೂ ಅಂತಿಮ ಅವಕಾಶ ನೀಡಲಾಗುತ್ತದೆ. ಆದರೆ ನನ್ನ ಟಿಕೆಟ್ ತಪ್ಪಿಸಲು ನನ್ನನ್ನು ಒಮ್ಮೆಯು ಮಾತನಾಡಿಸಿಲ್ಲ.ಇದು ಹಣಬಲದ ಚುನಾವಣೆಯಲ್ಲ, ಜನಬಲದ ಚುನಾವಣೆ” ಎಂದು ನಿಶಾದ್ ಕಾಂಗ್ರೆಸ್ ಸೇರ್ಪಡೆ ನಂತರ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಬಂಧಿಗಳ ನಡುವಿನ ವಿವಾಹ ತಡೆಯಲು ಕಾನೂನು ರೂಪಿಸಿ: ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ!

ಹತ್ತಿರದ ರಕ್ತಸಂಬಂಧಿಗಳ ನಡುವಿನ ವಿವಾಹಗಳನ್ನು ನಿಯಂತ್ರಿಸಲು ಅಥವಾ ತಡೆಯಲು ಸೂಕ್ತ ಕಾನೂನು...

ಕ್ಷೇತ್ರ ಮರುವಿಂಗಡಣೆ ಮಸೂದೆಗೆ ‘ಅನೈತಿಕ’ ಬಹುಮತ ಹುಡುಕುತ್ತಿದ್ದಾರೆ ಮೋದಿ-ಶಾ: ಕಾಂಗ್ರೆಸ್ ಗಂಭೀರ ಆರೋಪ!

ಸಂಸತ್ತಿನ ಮುಂಗಾರು ಅಧಿವೇಶನವು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟು 100 ದಿನಗಳು ಕಳೆದಿದ್ದರೂ, ಕ್ಷೇತ್ರ...

ಹಿಂದು-ಕ್ರೈಸ್ತ ವಿವಾಹಕ್ಕೆ ‘ಹಿಂದು ವಿವಾಹ ಕಾಯ್ದೆ’ಯಡಿ ಮಾನ್ಯತೆ ಇಲ್ಲ: ಮದ್ರಾಸ್ ಹೈಕೋರ್ಟ್

ಹಿಂದು ಮತ್ತು ಮತ್ತೊಂದು ಧರ್ಮೀಯರ ನಡುವೆ ನಡೆಯುವ ವಿವಾಹವನ್ನು ಕೇವಲ ಹಿಂದು...

ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ಹತ್ಯೆ ಸಂಚು: ನಿಖಿಲ್ ಗುಪ್ತಾಗೆ 19 ವರ್ಷ ಜೈಲು

ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು ಪ್ರಕರಣದಲ್ಲಿ ಭಾರತೀಯ...