2014ರಲ್ಲಿ ಬಿಜೆಪಿಗೆ ಬೆಂಬಲಿಸಿದ್ದೆವು, ಆದರೆ ಅವರು ನಿರೀಕ್ಷೆಯಂತೆ ಕೆಲಸ ಮಾಡಲಿಲ್ಲ: ನರೇಶ್ ಟೀಕಾಯತ್

Date:

ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಬಹಿರಂಗವಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿತ್ತು. ಆದರೆ ಪಕ್ಷವು ಅಧಿಕಾರಕ್ಕೆ ಬಂದ ನಂತರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿಲ್ಲ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟೀಕಾಯತ್ ತಿಳಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಬಗ್ಗೆ ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ದೆಹಲಿಯ ಗಡಿಯಲ್ಲಿ 2020-21ರಲ್ಲಿ ನಡೆದ 13 ತಿಂಗಳ ಸುದೀರ್ಘ ಪ್ರತಿಭಟನೆಯಲ್ಲಿ ಹುತಾತ್ಮರಾದ ಸುಮಾರು 750 ರೈತರನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಿಂಚಿತ್ತು ಸ್ಮರಿಸಲಿಲ್ಲ. ಕೇಸರಿ ಪಕ್ಷವು ಸರ್ವಾಧಿಕಾರದಿಂದ ಮೆರೆಯುತ್ತಿದೆ ಎಂದು ಟೀಕಾಯತ್‌ ಹೇಳಿದರು.

“ಬಿಕೆಯು ದೊಡ್ಡ ಸಂಘಟನೆಯಾಗಿದ್ದು, ಇಲ್ಲಿನ ಸದಸ್ಯರು ಒಂದಲ್ಲ ಒಂದು ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆ. ಕೆಲವರು ಅಭ್ಯರ್ಥಿಗಳಿಗೆ ಸಂಬಂಧಿಕರಾಗಿದ್ದರೆ, ಕೆಲವರು ಅಭ್ಯರ್ಥಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಅಥವಾ ಅವರೊಂದಿಗೆ ವೈಯಕ್ತಿಕ ಹಂತದಲ್ಲಿ ಸಂಬಂಧ ಹೊಂದಿದ್ದಾರೆ” ಎಂದು ಟೀಕಾಯತ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

“ನಾನು 2014ರ ಚುನಾವಣೆಯಲ್ಲಿ ಬಿಜೆಪಿಗೆ ಬಹಿರಂಗವಾಗಿ ಬೆಂಬಲ ನೀಡಿದ್ದೆ ಎಂದು ಹೇಳಲು ಯಾವುದೇ ಹಿಂಜರಿಕೆಯಿಲ್ಲ. ಆದರೆ ಅವರು ತಮ್ಮ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಲಿಲ್ಲ. ಅವರು ರಾಮ ರಾಜ್ಯದ ಬಗ್ಗೆ ಮಾತನಾಡುತ್ತಾರೆ. ಅವರು ತಮ್ಮ ಮಾನದಂಡಗಳೊಂದಿಗೆ ಉತ್ತಮವಾಗಿ ಕೆಲಸ ಮಾಡಿರಬಹುದು ಆದರೆ ಬಹುತೇಕವುಗಳನ್ನು ನಿರ್ಲಕ್ಷಿಸಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಭಾರತದಂತ ದೊಡ್ಡ ರಾಷ್ಟ್ರದಲ್ಲಿ ಹಲವು ಸಮಸ್ಯೆಗಳಿವೆ. ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಆದರೆ ಹಲವು ಸಮಸ್ಯೆಗಳನ್ನು ಸರ್ಕಾರದಿಂದ ಕಡೆಗಣಿಸಲಾಯಿತು. ಮುಖ್ಯವಾಗಿ ರೈತರ ಸಮಸ್ಯೆಯನ್ನು ನಿರ್ಲಕ್ಷಿಸಲಾಯಿತು ಎಂದು ನರೇಶ್ ಟೀಕಾಯತ್ ಹೇಳಿದರು.

“13 ತಿಂಗಳ ರೈತರ ಹೋರಾಟದಲ್ಲಿ 750 ರೈತರು ಹುತಾತ್ಮರಾದರು. ಆದರೆ ಸರ್ಕಾರ ಹುತಾತ್ಮ ಯೋಧರನ್ನು ಸ್ಮರಿಸಲಿಲ್ಲ. ವಿಶ್ವದಾದ್ಯಂತ ಚರ್ಚಿಸಲಾದ ದೊಡ್ಡ ಚಳುವಳಿ ಇದಾಗಿತ್ತು. ಬಿಜೆಪಿಯು 10 ವರ್ಷದ ಆಡಳಿತದಲ್ಲಿ ಸರ್ವಾಧಿಕಾರದಿಂದ ಮೆರೆಯುತ್ತಿದೆ. ಹಠಮಾರಿ ವ್ಯಕ್ತಿಯೊಬ್ಬ ಏನು ಹೇಳುತ್ತಾನೊ ಅದನ್ನೆ ಮಾಡಲಾಗುತ್ತಿದೆ. ಒಂದು ದೇಶದಲ್ಲಿ ಕಾರ್ಯನಿರ್ವಹಿಸುವ ರೀತಿ ಇದಲ್ಲ. ಕೆಲವು ಬಾರಿ ಸರ್ಕಾರ ತಲೆಬಾಗಬೇಕು, ಮತ್ತು ಕೆಲವು ಬಾರಿ ಜನರು ತಲೆಬಾಗಬೇಕು. ಆಗ ಕೆಲಸ ಸುಗಮವಾಗಿ ನಡೆಯುತ್ತದೆ” ಎಂದು ಟೀಕಾಯತ್ ಹೇಳಿದರು.

“ಸರ್ಕಾರ ಸಮತೋಲನ ಕಾಯ್ದುಕೊಂಡು ಉತ್ತಮ ವಾತಾವರಣ ಕಲ್ಪಿಸಬೇಕಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಲವು ಸಮಸ್ಯೆಗಳಿವೆ. ಬಿಕೆಯುಗೆ ಹಲವರ ಬೆಂಬಲವಿದೆ. ಆದರೆ ನಮ್ಮ ಜನರಿಗೆ ಇಂತವರಿಗೆ ಮತ ನೀಡಿ ಎಂದು ಹೇಳುವುದಿಲ್ಲ. ಏ.17ರಂದು ಮಹಾ ಪಂಚಾಯತ್‌ ಸಭೆ ಕೈಗೊಳ್ಳಲಿದ್ದು, ಚುನಾವಣೆಯ ಬಗ್ಗೆ ಸಮಗ್ರ ನಿರ್ಧಾರ ಕೈಗೊಳ್ಳಬಹುದು” ಎಂದು ಟೀಕಾಯತ್‌ ತಿಳಿಸಿದರು.

ಟೀಕಾಯತ್‌ ಅವರ ಬಿಕೆಯು ಪ್ರಾಬಲ್ಯವುಳ್ಳ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಏ.19 ಹಾಗೂ ಏ.26 ರಂದು ಚುನಾವಣೆಗಳು ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...