ಲೋಕಸಭೆಗೆ ನುಗ್ಗಿದ ಅಪರಿಚಿತರು: ಸಂದರ್ಶಕರ ಪಾಸ್ ರದ್ದುಗೊಳಿಸಿದ ಸ್ಪೀಕರ್

Date:

Advertisements

ಇಂದು ಸದನದಲ್ಲಿ (ಡಿಸೆಂಬರ್ 13) ಭಾರೀ ಭದ್ರತಾ ಲೋಪವಾದ ನಂತರ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂದರ್ಶಕರ ಪಾಸ್‌ಅನ್ನು ರದ್ದುಗೊಳಿಸಿದ್ದಾರೆ. ಇಂದಿನ ಕಲಾಪದ ನಂತರ ಸದನದ ಸರ್ವಪಕ್ಷದ ನಾಯಕರ ಸಭೆಗೆ ಕರೆ ನೀಡಿದ್ದಾರೆ.

ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪದ ನಂತರ ಇಬ್ಬರು ವ್ಯಕ್ತಿಗಳು ಸದನದ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಗದ್ದಲವುಂಟು ಮಾಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸದನದೊಳಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಗ್ಯಾಸ್ ಸ್ಪ್ರೇ ಹರಡಿದ್ದಾರೆ. 2001ರ ಸಂಸತ್ ದಾಳಿಯ 22 ನೇ ವಾರ್ಷಿಕೋತ್ಸವದಂದು ಈ ಭದ್ರತಾ ಲೋಪ ಹೇಗೆ ಸಂಭವಿಸಿತು ಎಂಬುದರ ಕುರಿತು ವಿವರವಾದ ವರದಿಯನ್ನು ಲೋಕಸಭೆ ಸ್ಪೀಕರ್ ಕೇಳಿದ್ದಾರೆ.

Advertisements

ಏತನ್ಮಧ್ಯೆ, ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಕೂಡ ಪರಿಸ್ಥಿತಿಯನ್ನು ಅವಲೋಕಿಸಲು ಸಂಸತ್ತಿಗೆ ಆಗಮಿಸಿದ್ದಾರೆ. 2001 ರ ಸಂಸತ್ತಿನ ದಾಳಿಯ ವಾರ್ಷಿಕೋತ್ಸವದಂದು ಭಯವನ್ನು ಹರಡುವ ಹಳದಿ ಅನಿಲವನ್ನು ಸಿಂಪಡಿಸುತ್ತಾ ಸದನದೊಳಗೆ ಓಡುತ್ತಿರುವಾಗ ನೀಲಿ ಜಾಕೆಟ್ ಧರಿಸಿದ್ದ ವ್ಯಕ್ತಿಯೊಬ್ಬರು ಟೇಬಲ್‌ಗಳ ಮೇಲೆ ಹತ್ತುತ್ತಿರುವುದು ಕಂಡುಬಂದಿದೆ.

ಲೋಕಸಭೆ ಎಲ್ಲ ಗ್ಯಾಲರಿಗಳಲ್ಲಿ ಇಬ್ಬರು ಭದ್ರತಾ ಅಧಿಕಾರಿಗಳು ಕಲಾಪದಲ್ಲಿ ಹಾಜರಿದ್ದರು. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ಜಿಗಿದ ವ್ಯಕ್ತಿಗಳನ್ನು ಉತ್ತರ ಪ್ರದೇಶದ ಸಾಗರ್ ಶರ್ಮಾ ಮತ್ತು ಮೈಸೂರು ಮೂಲದ ಮನೋರಂಜನ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭೆಯಲ್ಲಿ ಭದ್ರತಾಲೋಪ | ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಪಡೆದಿದ್ದ ಅಪರಿಚಿತರು

2016ರಲ್ಲಿ ನಡೆದಿದ್ದ ಘಟನೆ

ಇದೇ ರೀತಿಯ ಲೋಕಸಭೆಗೆ ನುಗ್ಗಿದ ಘಟನೆ 2016ರಲ್ಲೂ ನಡೆದಿತ್ತು. ಹಳೆಯ 500 ಮತ್ತು 1000 ರೂಪಾಯಿ ನೋಟುಗಳನ್ನು ನಿಷೇಧಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ 2016ರ ನವೆಂಬರ್‌ 25 ರಂದು ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ವ್ಯಕ್ತಿಯೊಬ್ಬರು ಸದನಕ್ಕೆ ಜಿಗಿಯಲು ಪ್ರಯತ್ನಿಸಿದ್ದರು.

ಮಧ್ಯಪ್ರದೇಶದ ಬುಲಂದ್‌ಶಹರ್‌ನ ಬಿಜೆಪಿ ಸಂಸದ ಭೋಲಾ ಸಿಂಗ್ ಅವರ ಪಾಸ್‌ ಪಡೆದು ರಾಕೇಶ್ ಸಿಂಗ್ ಬಘೇಲ್ ಎಂಬಾತ ಅಂದು ಸಂಸತ್ತಿಗೆ ಪ್ರವೇಶಿಸಿ ಗ್ಯಾಲರಿಯಿಂದ ಜಿಗಿಯಲು ಪ್ರಯತ್ನಿಸಿದ್ದ. ಪೊಲೀಸರು ಆತನ ಯತ್ನವನ್ನು ವಿಫಲಗೊಳಿಸಿ ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X